ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಿಗೆ ಆಧಾರ್‌ ಜೋಡಣೆ ಕಡ್ಡಾಯ? ಕೇಂದ್ರಕ್ಕೆ ಸುಪ್ರೀಂನಿಂದ ನೋಟಿಸ್ ಜಾರಿ.!

0
223

ಜನಪ್ರಿಯ ಸಾಮಾಜಿಕ ಜಾಲತಾಣಗಳಾದ facebook, whatsapp, instagram, Tweeter ಸೇರಿದಂತೆ ಹಲವು ಜಾಲತಾಣಗಳಿಗೆ ಬಳಕೆದಾರರ ಪ್ರೊಫೈಲ್‌ಗಳ ಜೊತೆಗೆ ಆಧಾರ್‌ ಸಂಖ್ಯೆ ಜೋಡಿಸುವುದು ಅಗತ್ಯ ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ. ಬಳಕೆದಾರರು ತಮ್ಮ ಪ್ರೊಫೈಲ್‌ಗಳಿಗೆ ಆಧಾರ್‌ ಸಂಖ್ಯೆಯನ್ನು ಜೋಡಣೆ ಮಾಡಬೇಕೆಂಬ ವಿಚಾರಕ್ಕೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆ ನಡೆಸಬೇಕೆಂಬ ಫೇಸ್‌ಬುಕ್‌ ಕೋರಿಕೆಗೆ ಸರ್ವೋಚ್ಚ ನ್ಯಾಯಾಲಯ ಸಮ್ಮತಿ ನೀಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದ ವ್ಯಾಜ್ಯಗಳು ಈಗಾಗಲೇ ಮದ್ರಾಸ್‌, ಬಾಂಬೆ ಹಾಗೂ ಮಧ್ಯಪ್ರದೇಶದ ಹೈಕೋರ್ಟ್‌ಗಳಿಂದ ಸುಪ್ರೀಂ ಕೋರ್ಟ್‌ಗೆ ವರ್ಗಾವಣೆಯಾಗಲಿವೆ.

Also read: ಇನ್ಮುಂದೆ ಪಾನ್ ಕಾರ್ಡ್​ ಕಡ್ಡಾಯವಲ್ಲ; ಆದಾಯ ತೆರಿಗೆ ವಿವರ ಸಲ್ಲಿಸಲು ಪಾನ್ ಬದಲು ಆಧಾರ್​ ಕಾರ್ಡ್​​ ಬೇಕು..

ಅಲ್ಲದೆ, ಈ ಸಂಬಂಧ ಕೇಂದ್ರ ಸರ್ಕಾರ, ಗೂಗಲ್‌, ಟ್ವಿಟರ್‌, ಯೂಟ್ಯೂಬ್‌ ಹಾಗೂ ಇತರ ಸಾಮಾಜಿಕ ಮಾಧ್ಯಮಗಳಿಗೆ ನೋಟಿಸ್‌ ನೀಡಿರುವ ಸುಪ್ರೀಂ ಕೋರ್ಟ್‌, ಸೆ.23ರ ಒಳಗೆ ಉತ್ತರಿಸುವಂತೆ ಸೂಚನೆ ನೀಡಿದೆ. ಹೌದು ಫೇಸ್‍ಬುಕ್ ಖಾತೆಗಳಿಗೆ ಆಧಾರ್ ಲಿಂಕ್ ಮಾಡಬೇಕೆಂದು ದೇಶದ ವಿವಿಧ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟಿನಲ್ಲಿ ನಡೆಯಬೇಕೆಂದು ಫೇಸ್‍ಬುಕ್ ಕಂಪನಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನ್ಯಾ.ದೀಪಕ್ ಗುಪ್ತಾ ಹಾಗೂ ಅನಿರುದ್ಧ ಭೋಸ್ ಅವರಿದ್ದ ಪೀಠದಲ್ಲಿ ನಡೆಯಿತು.
ತಮಿಳುನಾಡು ಸರ್ಕಾರದ ಪರವಾಗಿ ವಾದ ಮಾಡಿದ ಕೇಂದ್ರ ಸರ್ಕಾರದ ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್, ಸಾಮಾಜಿಕ ಜಾಲತಾಣಗಳ ಬಳಕೆದಾರರು ಕಡ್ಡಾಯವಾಗಿ ಆಧಾರ್ ನಂಬರ್ ಲಿಂಕ್ ಮಾಡಿಕೊಳ್ಳಬೇಕು ಎಂದು ವಾದಿಸಿದರು. ಸಾಮಾಜಿಕ ಜಾಲತಾಣಗಳೊಂದಿಗೆ ಆಧಾರ್ ನಂಬರ್ ಲಿಂಕ್ ಮಾಡುವುದರಿಂದ ಭಯೋತ್ಪಾದಕ ಸಂದೇಶ, ಅಶ್ಲೀಲ ಚಿತ್ರಗಳು ಹಾಗೂ ನಕಲಿ ಸುದ್ದಿಗಳನ್ನು ಹರಿಬಿಟ್ಟವರು ಯಾರು ಎನ್ನುವುದನ್ನು ಪತ್ತೆ ಹಚ್ಚಲು ಸುಲಭವಾಗುತ್ತದೆ ಎಂದು ಬಲವಾದ ವಾದ ಮಂಡಿಸಿದರು.

Also read: ಆಧಾರ್ ಕಾರ್ಡ್-ನಲ್ಲಿ ವಿಳಾಸ ಬದಲಿಸಲು ಆಧಾರ್ ಕೇಂದ್ರಕ್ಕೇ ಹೋಗಿ ಗಂಟೆಗಟ್ಟಲೆ ಕಾದು ನಿಲ್ಲಬೇಕಿಲ್ಲ; ನೀವೇ ಆನ್ಲೈನ್ ಮೂಲಕ ಬದಲಾಯಿಸಬಹುದು!

ಪಿಐಎಲ್‌ಗಳ ಸಲ್ಲಿಕೆ: ಸಾಮಾಜಿಕ ಸ್ವಾಸ್ಥ್ಯ ಹಾಳುಗೆಡುವಂತಹ ನಕಲಿ ಸುದ್ದಿ , ಮಾನಹಾನಿಕರ ಹೇಳಿಕೆಗಳು, ಹಿಂಸಾಚಾರಕ್ಕೆ ಪ್ರಚೋದನೆ ಮತ್ತು ಅಶ್ಲೀಲ ವಿಷಯಗಳ ಪ್ರಸರಣ ತಡೆಯಲು ಹಾಗೂ ಉಗ್ರ ಕೃತ್ಯಗಳ ಮೇಲೆ ನಿಗಾ ಇರಿಸಲು ಸಾಮಾಜಿಕ ಬಳಕೆದಾರರ ಪೊ›ಫೈಲ್‌ಗಳನ್ನು ಆಧಾರ್‌ ಸಂಖ್ಯೆಗಳೊಂದಿಗೆ ಸಂಪರ್ಕಿಸುವ ಅಗತ್ಯವಿದೆ ಎಂದು ಆ್ಯಂಟನಿ ಕ್ಲಮೆನ್‌ ರುಬಿನ್‌ ಎಂಬುವರು ಕಳೆದ ಜುಲೈನಲ್ಲಿ ಮದ್ರಾಸ್‌ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಬಾಂಬೆ ಹಾಗೂ ಮಧ್ಯ ಪ್ರದೇಶ ಹೈಕೋರ್ಟ್‌ನಲ್ಲೂ ಇದೇ ರೀತಿಯ ಅರ್ಜಿಗಳು ನಂತರದಲ್ಲಿ ಸಲ್ಲಿಕೆಯಾಗಿವೆ. ವಿವಿಧ ಹೈಕೋರ್ಟ್‌ಗಳಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ಗೆ ತರಿಸಿಕೊಂಡು ವಿಚಾರಣೆ ನಡೆಸಬೇಕೆಂದು ಫೇಸ್‌ಬುಕ್‌ ಸರ್ವೋಚ್ಚ ನ್ಯಾಯಾಲಯದಲ್ಲಿ ಮನವಿ ಮಾಡಿದೆ.

ಮದ್ರಾಸ್‌, ಬಾಂಬೆ ಮತ್ತು ಮಧ್ಯಪ್ರದೇಶ ಹೈಕೋರ್ಟ್‌ಗಳಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಹಸ್ತಾಂತರಿಸಿಕೊಂಡು ಅವುಗಳ ವಿಚಾರಣೆ ನಡೆಸಲು ಒಪ್ಪಿಗೆ ಸೂಚಿಸಿದ ಸುಪ್ರೀಂ ಕೋರ್ಟ್‌, ಸೆ. 13ರೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಕೋರಿ ಕೇಂದ್ರ ಸರಕಾರ, ಗೂಗಲ್‌, ಟ್ವಿಟರ್‌ ಹಾಗೂ ಯುಟ್ಯೂಬ್‌ಗಳಿಗೆ ನೋಟಿಸ್‌ ಜಾರಿಗೊಳಿಸಿದೆ.