ವಾಹನ ಚಾಲಕರಿಗೆ ಸಿಹಿ ಸುದ್ದಿ: ಮೋದಿ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಗೆ GST ತರಲಿದೆ. ಆಗ ಪೆಟ್ರೋಲ್ ಬೆಲೆ 38 ರೂ ಆಗಲಿದೆ..!

0
2875

ಪೆಟ್ರೋಲಿಯಂ ಉತ್ಪನ್ನಗಳನ್ನು ಒಂದು ದೇಶ, ಒಂದೇ ತೆರಿಗೆ’ ಎಂಬ ನಿಟ್ಟಿನಲ್ಲಿ ಜಾರಿಗೊಂಡಿರುವ ‘ಜಿಎಸ್‌ಟಿ’ ವ್ಯಾಪ್ತಿಗೆ ತಂದರೆ, ಪೆಟ್ರೋಲ್‌ ಬೆಲೆ ಅರ್ಧಕ್ಕೆ ಅರ್ಧ ಕಡಿಮೆ ಆಗಲಿದೆ ಎಂಬ ವಾದ ಕೇಳಿಬರುತ್ತಿದೆ..!

ಸರಕು ಸೇವಾ ತೆರಿಗೆ (ಜಿಎಸ್ಟಿ) ಅನುಷ್ಠಾನಕ್ಕೆ ಬಂದ ಬಳಿಕ ಬೆಂಗಳೂರಿನಲ್ಲಿ ಪೆಟ್ರೋಲ್ ಡೀಸೆಲ್ ದರ ಶೇ. 11.25ರಷ್ಟು ಏರಿಕೆ ಕಂಡಿತ್ತು. ಪೆಟ್ರೋಲ್ ಡಿಸೇಲ್ ದರ ಪರಿಷ್ಕರಣೆ ಪ್ರಕ್ರಿಯೆ ಆರಂಭ ಆದಾಗಿನಿಂದ ಇಲ್ಲಿಯವರೆಗೆ ಪ್ರತಿದಿನ ಏರಿಳಿಕೆಗೆ ಒಳಗಾಗುತ್ತಲೇ ಬಂದಿದೆ. ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತಂದರೆ ಮಾತ್ರ ಇವುಗಳ ಬೆಲೆ ಕಡಿಮೆಯಾಗುತ್ತದೆ ಎಂದು ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್‌ ಅಭಿಪ್ರಾಯಪಟ್ಟಿದ್ದಾರೆ.

ಅದೇ ಪ್ರಕಾರ ಜುಲೈ ತಿಂಗಳಿನಿಂದ ದೇಶದಾದ್ಯಂತ ಜಾರಿಗೆ ಬಂದಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯಾಪ್ತಿಗೆ ಪೆಟ್ರೋಲ್‌ ಮತ್ತು ಡೀಸೆಲ್‌ಗಳನ್ನು ತಂದರೆ ಇವುಗಳ ಬೆಲೆ ಅರ್ಧದಷ್ಟು ಅಗ್ಗವಾಗಲಿದೆ ಎಂದು ಈಗಾಗಲೇ Factly.in ವೆಬ್‍ಸೈಟ್ ದತ್ತಾಂಶಗಳ ವಿವರಣೆಯೊಂದಿಗೆ ಈ ಕೂರಿತು ವರದಿ ಪ್ರಕಟಿಸಿದೆ.

ಪ್ರಸ್ತುತ ಭಾರತದಲ್ಲಿ ವಸ್ತುಗಳ ಮೇಲೆ ಶೇ.5, ಶೇ.12, ಶೇ.18, ಶೇ.28 ಜಿಎಸ್‍ಟಿ ತೆರಿಗೆ ವಿಧಿಸಲಾಗುತ್ತದೆ. ಒಂದು ವೇಳೆ ಪೆಟ್ರೋಲ್‍ಗೆ ಶೇ.18 ರಷ್ಟು ತೆರಿಗೆ ವಿಧಿಸಿದರೆ ಬೆಲೆ 40 ರೂ. ಆಗುತ್ತದೆ ಎಂದು ಹೇಳಿದೆ. ಹೀಗಾಗಿ ಈ ಪೆಟ್ರೋಲ್ ಗೆ ಎಷ್ಟು ಜಿಎಸ್‍ಟಿ ಹಾಕಿದ್ರೆ ಎಷ್ಟು ರೂ. ಆಗಬಹುದು ಎನ್ನುವ ವಿವರಣೆಯಲ್ಲಿ ಈ ವೆಬ್‍ಸೈಟ್ ಪ್ರಕಟಿಸಿದೆ.

ಒಂದು ವೇಳೆ ಪೆಟ್ರೋಲಿಯಂ ಉತ್ಪನ್ನಗಳು ಜಿಎಸ್‌ಟಿ ವ್ಯಾಪ್ತಿಗೆ ತಂದರೆ ಎಷ್ಟು ತೆರಿಗೆ ಆದ್ರೆ ಎಷ್ಟು ರೂ. ಅಂತ ತಿಳಿಯೋಣ ಬನ್ನಿ.

  • ಪ್ರಸ್ತುತ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಗೆ 71.17 ರೂ. ಇದೆ.
  • ಒಂದು ವೇಳೆ ಜಿಎಸ್‍ಟಿ ವ್ಯಾಪ್ತಿಗೆ ತಂದು 12% ತೆರಿಗೆ ವಿಧಿಸಿದರೆ 38.01 ರೂ. 18% ತೆರಿಗೆ ವಿಧಿಸಿದರೆ 40.05 ರೂ., 28% ತೆರಿಗೆ ವಿಧಿಸಿದರೆ 43.44 ರೂ. ಆಗಬಹುದು. ಒಂದು ವೇಳೆ ಜಿಎಸ್‍ಟಿ 28% ವಿಧಿಸಿದರೆ 43.44 ರೂ. ಆಗಬಹುದು. ಮತ್ತು ಹೆಚ್ಚುವರಿಯಾಗಿ 22% ಜಿಎಸ್‍ಟಿ ಸೆಸ್ (compensation cess) ವಿಧಿಸಿದರೂ ಬೆಲೆ 50.91 ರೂ. ಆಗಲಿದೆ.

ಈಗಾಗಲೇ 2014ರ ನವೆಂಬರ್‌ನಿಂದ 2016ರ ಜನವರಿವರೆಗೆ ಕೇಂದ್ರ ಸರ್ಕಾರವು ಇಂಧನಗಳ ಮೇಲಿನ ತೆರಿಗೆಯನ್ನು ಒಂಬತ್ತು ಬಾರಿ ಏರಿಕೆ ಮಾಡಿತ್ತು. ಕೇಂದ್ರ ಹಣಕಾಸು ಸಚಿವರು, ರಾಜ್ಯಗಳ ಹಣಕಾಸು ಸಚಿವರು ಇರುವ ಜಿಎಸ್‍ಟಿ ಮಂಡಳಿಯಲ್ಲಿ ಒಪ್ಪಿಗೆ ಸಿಕ್ಕಿದರೆ ಪೆಟ್ರೋಲ್ ಬೆಲೆ ಕಡಿಮೆಯಾಗಬಹುದು. ಅಷ್ಟೇ ಅಲ್ಲದೆ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್‍ಟಿ ವ್ಯಾಪ್ತಿಗೆ ತಂದರೆ ದೇಶಾದ್ಯಂತ ಏಕರೂಪದ ದರ ವಿಧಿಸಬಹುದು ಎಂದು ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.