HAL ನಲ್ಲಿ ಮ್ಯಾನೇಜರ್, ಮೆಡಿಕಲ್ ಆಫೀಸರ್ & ಫಿನಾನ್ಸ್ ಆಫೀಸರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
351

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್) ನೇಮಕಾತಿ ಮ್ಯಾನೇಜರ್, ಮೆಡಿಕಲ್ ಆಫೀಸರ್ & ಫಿನಾನ್ಸ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ನಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಪೋಸ್ಟ್ ಮೂಲಕ ಮೇ 2,2019ರೊಳಗೆ ಕಳುಹಿಸಬೇಕು.

Also read: ನ್ಯಾಷನಲ್ ಡೈರಿ ರಿಸರ್ಚ್ ಇನ್‌ಸ್ಟಿಟ್ಯೂಟ್ (NDRI) ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಮ್ಯಾನೇಜರ್, ಮೆಡಿಕಲ್ ಆಫೀಸರ್ & ಫಿನಾನ್ಸ್ ಆಫೀಸರ್

ಸಂಸ್ಥೆ (Organisation): ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್)

ವಿದ್ಯಾರ್ಹತೆ (Educational Qualification): ಈ ಹುದ್ದೆಗಳಿಗೆ ಇಂಜಿನಿಯರಿಂಗ್‌ನಲ್ಲಿ ಪದವಿ, ಯಾವುದೇ ಪದವಿ, ಸಿಎ/ಐಸಿಡಬ್ಲ್ಯೂಎ,ಎಂಬಿಬಿಎಸ್, ಸ್ನಾತಕೋತ್ತರ ಪದವಿ, ಎಂಡಿ/ಡಿಎನ್‌ಬಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಸ್ಥಳ (Job Location): ಬೆಂಗಳೂರು, ಕೊರಾಪುತ್.ಕೊರ್ವಾ

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆಮಾಡಲಾಗುವುದು.

ವಯೋಮಿತಿ: ಹುದ್ದೆಗಳಿಗನುಸಾರ ಗರಿಷ್ಟ 40 ಮತ್ತು 48 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 2 ವರ್ಷ ವಯೋಮಿತಿ ಸಡಿಲಿಕೆಯನ್ನು ಹೊಂದಿರುತ್ತಾರೆ.

ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಹೆಚ್‌ಎಎಲ್ ನ ಅಧಿಕೃತ ವೆಬ್‌ಸೈಟ್‌ https://hal-india.co.in/ ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್, 15/1, ಕಬ್ಬನ್ ರೋಡ್, ಬೆಂಗಳೂರು -560001 ಮೂಲಕ ಮೇ 2,2019ರೊಳಗೆ ಕಳುಹಿಸಬೇಕು.

ಹೆಚ್ಚಿನ ಮಾಹಿತಿಗಾಗಿ: https://hal-india.co.in/ ಬೇಟಿ ನೀಡಿ.