ಹಲ್ಫ್ ಹೆಲ್ಮೆಟ್ ಧರಿಸಿದರೆ ಪೊಲೀಸರು ದಂಡ ವಿಧಿಸುತ್ತಾರ? ಎಲ್ಲ ಸಂಶಯಗಳಿಗೆ ತೆರೆ ಎಳೆದ ಪೊಲೀಸ್..

0
754

ಈ ಹಿಂದೆ ಸಾಂಸ್ಕೃತಿಕ ನಗರಿ ಮೈಸೂರು ನಗರದಲ್ಲಿ ಟ್ರಾಫಿಕ್ ಪೊಲೀಸರು ಹಾಫ್ ಹೆಲ್ಮೆಟ್‌ಗಳ ವಿರುದ್ಧ ಕಾರ್ಯಚರಣೆ ನಡೆಸಿ ನಿಷೇಧಿತ ಹಾಗೂ ದೋಷ ಪೂರಿತ ಹೆಲ್ಮೆಟ್ ಗಳನ್ನು ವಶಕ್ಕೆ ಪಡೆದು ಬೈಕ್ ಸವಾರಿ ಮಾಡುತ್ತಿದ್ದವರಿಗೆ ಇಂದು ಶಾಕ್ ನೀಡುತ್ತು. ಈಗ ಫೆಬ್ರವರಿ 1ರಿಂದ ದ್ವಿಚಕ್ರ ವಾಹನ ಸವಾರರು ಹಾಗೂ ಹಿಂಬದಿ ಸವಾರರು ಹಾಫ್ ಹೆಲ್ಮೆಟ್ ಧರಿಸುವಂತಿಲ್ಲ. ಫುಲ್ ಹೆಲ್ಮೆಟ್ ಧರಿಸಬೇಕು ಎಂದು ಸಾರಿಗೆ ಇಲಾಖೆ ಸುತ್ತೋಲೆ ಹೊರಡಿಸಿದೆ. ಮತ್ತು ಬೆಂಗಳೂರು ನಗರ ಪೊಲೀಸರು ಫುಲ್ ಹೆಲ್ಮೆಟ್‌‌ ಧರಿಸಲು ಜನವರಿ 31ರವರೆಗೆ ಗಡುವು ನೀಡಿದ್ದರು.

ಈ ಹಿಂದೆ ಹಾಫ್ ಹೆಲ್ಮೆಟ್ ಧರಿಸಿದವರ ವಿರುದ್ದ ಕಾರ್ಯಚರಣೆ ನಡೆಸಿ ನಿಷೇಧಿತ ಹಾಗೂ ದೋಷ ಪೂರಿತ ಹೆಲ್ಮೆಟ್ ಗಳನ್ನು ವಶಕ್ಕೆ ಪಡೆಯಲಾಗಿತ್ತು. ಆದರೆ ಅನೇಕ ವರದಿಗಳು ಇದರ ಬಗ್ಗೆ ಜನರಲ್ಲಿ ಅನೇಕ ಗೊಂದಲಗಳನ್ನು ಸೃಷ್ಟಿ ಮಾಡಲಾಗಿತ್ತು. ಇದೀಗ ಕಾನೂನಿನ ಪ್ರಕಾರ, ಬಿಐಎಸ್ ಅಥವಾ ಐಎಸ್‌ಐ ಗುಣಮಟ್ಟದ ಹೆಲ್ಮೆಟ್ ಧರಿಸುವುದು ಕಡ್ಡಾಯ ಎಂದು ಆದೇಶಿಸಿ ಎಲ್ಲ ಗೊಂದಲಗಳಿಗೆ ತೆರೆ ಎಳೆದಿದೆ.

ಈ ಹಿಂದೆ ಹಾಫ್ ಹೆಲ್ಮೆಟ್ ಧರಿಸಿದವರ ವಿರುದ್ದ ಕಾರ್ಯಚರಣೆ ನಡೆಸಿ ಜಾಗೃತಿ ಮೂಡಿಸಿದ್ದರೂ, ಅಸುರಕ್ಷಿತ ಅರ್ಧ ಹೆಲ್ಮೆಟ್‌ಗಳನ್ನು ಬಳಸುತ್ತಿದ್ದುದು ಕಂಡು ಬಂದಿತ್ತು. ಸುರಕ್ಷತೆ ದೃಷ್ಟಿಯಿಂದ ವಾಹನ ಸವಾರರು ಹಾಗೂ ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ.