ಹಾಸನ ಜಿಲ್ಲೆಯಲ್ಲಿ ಹಲವಾರು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
90

ಉದ್ಯೋಗದ ನಿರೀಕ್ಷೆಯಲ್ಲಿರುವ ಮಹಿಳಾ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಹಾಸನ ಜಿಲ್ಲೆಯಲ್ಲಿ ಖಾಲಿ ಇರುವ ಒಟ್ಟು 143 ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆಗಸ್ಟ್ 29,2019ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: ಇಲೆಕ್ಟ್ರಾನಿಕ್ಸ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ ಸೈಂಟಿಫಿಕ್ ಅಸಿಸ್ಟೆಂಟ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿ

ಸಂಸ್ಥೆ (Organisation): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

ವಿದ್ಯಾರ್ಹತೆ (Educational Qualification): ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್‌.ಎಲ್‌.ಸಿ ವಿದ್ಯಾರ್ಹತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಕನಿಷ್ಠ 4ನೇ ತರಗತಿ ಮತ್ತು ಗರಿಷ್ಟ 9ನೇ ತರಗತಿ ತೇರ್ಗಡೆಯಾಗಿರಬೇಕು.

ಉದ್ಯೋಗ ಸ್ಥಳ (Job Location): ಹಾಸನ ಜಿಲ್ಲೆ ( ಕರ್ನಾಟಕ)

ವಯೋಮಿತಿ: ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯೊಳಗಿನವರಾಗಿರಬೇಕು. ಅಂಗವಿಕಲ ಅಭ್ಯರ್ಥಿಗಳಿಗೆ ಮಾತ್ರ 10 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

ಆಯ್ಕೆಯ ಆದ್ಯತೆ: ಆಯ್ಕೆಯ ಆದ್ಯತೆ: ಮೊದಲ ಆದ್ಯತೆ ಆಸಿಡ್ ದಾಳಿಗೊಳಗಾದವರಿಗೆ, ಎರಡನೇ ಆದ್ಯತೆ: ರಾಜ್ಯ ಮಹಿಳಾ ನಿಲಯಗಳಲ್ಲಿ ಆಶ್ರಯ ಪಡೆದವರಿಗೆ, ಮೂರನೆ ಆದ್ಯತೆ ವಿಧವೆಯರಿಗೆ , ಆತ್ಮಹತ್ಯೆ ಮಾಡಿಕೊಂಡ ರೈತನ ಪತ್ನಿಗೆ.

ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಅಂಗನವಾಡಿಯ ಅಧಿಕೃತ ವೆಬ್‌ಸೈಟ್‌ www.anganwadirecruit.kar.nic.in ಗೆ ಹೋಗಿ ಅಧಿಸೂಚನೆಯನ್ನು ಓದಿಕೊಂಡು ನಂತರ ಹುದ್ದೆಗಳಿಗೆ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 29,2019ರ ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ: www.anganwadirecruit.kar.nic.in ಕ್ಲಿಕ್ ಮಾಡಿ.