ಹಾಸನ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
209

ಉದ್ಯೋಗದ ನಿರೀಕ್ಷೆಯಲ್ಲಿರುವ ಮಹಿಳಾ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಹಾಸನ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಜೂನ್ 26 .2019ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಲಹೆಗಾರ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿ

ಸಂಸ್ಥೆ (Organisation): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

ವಿದ್ಯಾರ್ಹತೆ (Educational Qualification): ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್‌.ಎಲ್‌.ಸಿ ವಿದ್ಯಾರ್ಹತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಕನಿಷ್ಠ 4ನೇ ತರಗತಿ ಮತ್ತು ಗರಿಷ್ಟ 9ನೇ ತರಗತಿ ತೇರ್ಗಡೆಯಾಗಿರಬೇಕು.

ಉದ್ಯೋಗ ಸ್ಥಳ (Job Location): ಹಾಸನ ( ಕರ್ನಾಟಕ)

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Application End Date): June 26, 2019

ವಯೋಮಿತಿ: ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯೊಳಗಿನವರಾಗಿರಬೇಕು. ಅಂಗವಿಕಲ ಅಭ್ಯರ್ಥಿಗಳಿಗೆ ಮಾತ್ರ 10 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

ಆದ್ಯತೆ: ಆಸಿಡ್ ದಾಳಿಗೊಳಗಾದವರು, ವಿಧವೆಯರಿಗೆ, ಬಾಲ ನ್ಯಾಯ ಕಾಯ್ದೆಯಡಿ, ರಾಜ್ಯ ಮಹಿಳಾ ನಿಲಯಗಳಲ್ಲಿ ಆಶ್ರಯ ಪಡೆದ ಮಹಿಳೆಯರು , ಅಂಗವಿಕಲ ಅಭ್ಯರ್ಥಿಗಳ,

ಅರ್ಜಿ ಶುಲ್ಕ: ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಅಂಗನವಾಡಿಯ ಅಧಿಕೃತ ವೆಬ್‌ಸೈಟ್‌ www.anganwadirecruit.kar.nic.in ನಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ. ಜೂನ್ 26,2019 ರೊಳಗೆ ಆನ್‌ಲೈನ್ ಮುಖಾಂತರ ಮಾತ್ರ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ: https://anganwadirecruit.kar.nic.in/docs/selection_guidelines.pdf ಕ್ಲಿಕ್ ಮಾಡಿ.