ಹೆವಿ ವಾಟರ್ ಬೋರ್ಡ್‌ ವಿವಿಧ 227 ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
397

ಉದ್ಯೋಗದ ನಿರಿಕ್ಷೆಯಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಹೆವಿ ವಾಟರ್ ಬೋರ್ಡ್‌ ವಿವಿಧ 227 ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ ಜನವರಿ 31,2020ರೊಳಗೆ ಅರ್ಜಿ ಸಲ್ಲಿಸಬೇಕು.

  • ಹುದ್ದೆಗೆ ಸಂಬಂಧಪಟ್ಟ ಮಾಹಿತಿ:
  • ಹುದ್ದೆಯ ಹೆಸರು (Name Of The Posts): ವಿವಿಧ ಹುದ್ದೆಗಳು
  • ಸಂಸ್ಥೆ (Organisation): ಹೆವಿ ವಾಟರ್ ಬೋರ್ಡ್‌
  • ವಿದ್ಯಾರ್ಹತೆ (Educational Qualification): ಈ ಹುದ್ದೆಗಳಿಗೆ ಬಿ.ಇ/ಬಿ.ಟೆಕ್,ಡಿಪ್ಲೋಮಾ,12ನೇತರಗತಿ/ದ್ವಿತೀಯ ಪಿಯುಸಿ ಮತ್ತು ಬಿ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
  • ವಯೋಮಿತಿ: ಹುದ್ದೆಗಳಿಗನುಸಾರ ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

  • ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
  • ಅರ್ಜಿ ಶುಲ್ಕ: ಅರ್ಜಿದಾರರು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ, ಅಂಗವಿಕಲ,ಮಾಜಿ ಸೈನಿಕ ಅಥವಾ ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
  • ಅರ್ಜಿ ಸಲ್ಲಿಸುವ ವಿಧಾನ: ಅಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಹೆವಿ ವಾಟರ್ ಬೋರ್ಡ್‌ನ ಅಧಿಕೃತ ವೆಬ್‌ಸೈಟ್‌ https://hwb.mahaonline.gov.in/HWB/HomePage.aspx ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 31,2020ರೊಳಗೆ ಅರ್ಜಿ ಸಲ್ಲಿಸಬೇಕು.