ಮೈತ್ರಿ ಸರ್ಕಾರ ಉಳಿಸಿಕೊಳ್ಳಲು 21 ಸಚಿವರ ರಾಜೀನಾಮೆಗೆ ಸೂಚನೆ; ಸರ್ಕಾರ ಉಳಿಸಿಕೊಳ್ಳಲು ನಡೆಸಿದ ಕೊನೆಯ ಅಸ್ತ್ರ ಪ್ರಯೋಗ ಯಶಸ್ವಿಯಾಗುತ್ತಾ??

0
236

ಕರ್ನಾಟಕದಲ್ಲಿ ಮೈತ್ರಿ ಸರ್ಕಾರದ ಅಳಿವು ಉಳಿವಿನ ಆಟ ನಡೆದಿದ್ದು, ಈಗಾಗಲೇ ಬಂಡಾಯದ ಶಾಸಕರು ರಾಜೀನಾಮೆ ನೀಡಲು ಮುಂಬೈ ಸೇರಿದ್ದು, ಕಾಂಗ್ರೆಸ್-ನಲ್ಲಿರುವ ಸಚಿವರಿಂದ ರಾಜೀನಾಮೆ ಕೊಡಿಸಿ ನಂತರ ಹೊಸದಾಗಿ ಸಚಿವ ಸ್ಥಾನಗಳನ್ನು ಹಂಚುವ ಬಗ್ಗೆ ತಿರ್ಮಾನ ಮಾಡಲಾಗಿದ್ದು, ಉಪಮುಖ್ಯಮಂತ್ರಿ ಪರಮೇಶ್ವರ್ ನಿವಾಸದಲ್ಲಿ ಸಂಪುಟದಲ್ಲಿರುವ ಕಾಂಗ್ರೆಸ್ ಸಚಿವರಿಗೆ ಉಪಹಾರ ಕೂಟವನ್ನು ಆಯೋಜಿಸಲಾಗಿದೆ. ಉಪಹಾರ ಕೂಟಕ್ಕೆ ಬರುವ ಸಚಿವರಿಂದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ಪತ್ರ ಪಡೆಯಲಿದ್ದಾರೆ.

Also read: ಮೈತ್ರಿ ಸರ್ಕಾರ ಪತನ; ದೋಸ್ತಿ ಸರ್ಕಾರದ 13 ಶಾಸಕರು ರಾಜೀನಾಮೆ? ಸರ್ಕಾರ ಉರುಳಿಸಲು ಕಾರಣವಾಯಿತಾ IMA ಪ್ರಕರಣ?

ಹೌದು ಮೈತ್ರಿ ಸರ್ಕಾರದ ಪತನಕ್ಕೆ ಈಗಾಗಲೇ ತಯಾರಿ ನಡೆಸಿದ ಶಾಸಕರ ಮನವಲಿಸಲು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಹರಸಾಹಸ ಪಡುತ್ತಿದ್ದಾರೆ. ಇದಕ್ಕಾಗಿ ತಮ್ಮ ಸಚಿವರಿಂದ ರಾಜೀನಾಮೆಯನ್ನು ಪಡೆಯಲಿದ್ದಾರೆ. ಹೀಗಾಗಿ ಈಗಾಗಲೇ ರಾಜೀನಾಮೆ ಪತ್ರದೊಂದಿಗೆ ಬರುವಂತೆ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಇಂದು ಉಪಹಾರಕ್ಕೆ ಬರುವ ಸಚಿವರ ಪಟ್ಟಿಯನ್ನು ಸಿದ್ದರಾಮಯ್ಯ ಅವರು ಮಾಡಿದ್ದಾರೆ. ಅದರಂತೆಯೇ ಯಾರೆಲ್ಲಾ ರಾಜೀನಾಮೆ ಕೊಡಬೇಕು ಎಂದು ಸೂಚನೆ ಕೊಟ್ಟಿದ್ದಾರೆ. ಅದರಂತೆ ಹಿರಿಯ ಸಚಿವರು ಉಪಹಾರ ಕೂಟಕ್ಕೆ ಬರುವಾಗಲೇ ರಾಜೀನಾಮೆ ಕೊಡಬೇಕು ಎಂದು ಸಿದ್ದರಾಮಯ್ಯ ಅವರು ಸಂದೇಶವನ್ನು ರವಾನಿಸಿದ್ದಾರೆ ಎನ್ನಲಾಗಿದೆ.

ಸಚಿವ ಸ್ಥಾನಕೆ ನಾಗೇಶ್ ರಾಜೀನಾಮೆ

ಉಪಹಾರ ಕೂಟದಲ್ಲಿ ರಾಜೀನಾಮೆ ಕೊಡುವುದಕ್ಕಿಂತ ಮೊದಲೇ ರಾಜೀನಾಮೆ ನೀಡಿದ ಮುಳುಬಾಗಿಲಿನಿಂದ ಪಕ್ಷೇತರ ಶಾಸಕ ನಾಗೇಶ್ ರಾಜೀನಾಮೆ ನೀಡಿದ್ದಾರೆ. ಇವರಿಗೆ ಕಳೆದ 21 ದಿನಗಳ ಹಿಂದೆ ಅಷ್ಟೆಯೇ ಸಚಿವರಾಗುವ ಭಾಗ್ಯ ಸಿಕ್ಕಿತ್ತು, ಆದರೆ ಇದೀಗ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಅತೃಪ್ತರ ಗುಂಪು ಸೇರಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು 10 ಮಂದಿ ಸಚಿವರ ರಾಜೀನಾಮೆ ನೀಡಲು ಸೂಚನೆ ನೀಡಿದ್ದರು. ಹೀಗಾಗಿ ಸರ್ಕಾರ ಉಳಿಯಲ್ಲ ಎಂಬುದನ್ನು ಮನಗಂಡ ನಾಗೇಶ್ ರಾಜೀನಾಮೆ ಕೊಟ್ಟಿರಬಹುದು ಎಂದು ಹೇಳಲಾಗುತ್ತಿದೆ.

Also read: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೊದಲ ಬಜಟ್; ಜನಪ್ರಿಯ ಯೋಜನೆಗಳ ಸಂಪೂರ್ಣ ವಿವರ ಇಲ್ಲಿದೆ..

ಕಾಂಗ್ರೆಸ್ ಪಕ್ಷದ 22 ಸಚಿವರು ಹಾಗೂ ಜೆಡಿಎಸ್ ಪಕ್ಷದ 9 ಸಚಿವರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಈ ಮೂಲಕ ದೋಸ್ತಿಗಳು ಸರ್ಕಾರ ಉಳಿಸಿಕೊಳ್ಳಲು ಕೊನೆಯ ಅಸ್ತ್ರ ಪ್ರಯೋಗಿಸಿದ್ದಾರೆ. ಸಿಎಂ ಕುಮಾರಸ್ವಾಮಿ ಕೈಗೆ ಸಚಿವರು ರಾಜೀನಾಮೆ ಪತ್ರ ನೀಡಲಿದ್ದು, ಸಂಜೆ ರಾಜ್ಯಪಾಲರನ್ನು ಭೇಟಿಯಾಗಲಿದ್ದಾರೆ. ಆದರೆ ಕೆಲ ಸಚಿವರು ರಾಜೀನಾಮೆ ನೀಡಲು ಹಿಂದೇಟು ಹಾಕಿದ್ದಾರೆನ್ನಲಾಗಿದೆ. ‘ನಾವು ಇತ್ತೀಚೆಗಷ್ಟೇ ಮಂತ್ರಿಯಾದವರು, ನಾವ್ಯಾಕೆ ರಾಜೀನಾಮೆ ನೀಡಬೇಕು’ ಎಂದು ಪ್ರಶ್ನಿಸಿದ್ದಾರೆ. ಆದರೆ ಹಿರಿಯ ನಾಯಕರು ಸಚಿವರ ಮನವೊಲಿಸುವ ಯತ್ನ ಮುಂದುವರೆಸಿದ್ದಾರೆ.

ಸಿದ್ದರಾಮಯ್ಯ ಸಿಎಂ ಆಗಲಿ?

Also read: ಮೂರು ಮಕ್ಕಳನ್ನು ಹೆತ್ತ ಪಾಲಿಕೆ ಸದಸ್ಯೆಯನ್ನು ಅನರ್ಹ ಗೊಳಿಸಿದ ಕೋರ್ಟ್; ಚುನಾವಣೆ ನಿಲ್ಲುವುದಕ್ಕೆ ಅರ್ಹತೆಗಿಂತ ಫ್ಯಾಮಿಲಿ ಪ್ಲಾನಿಂಗ್ ಮುಖ್ಯವೆಂದ ಸುಪ್ರಿಂ ಕೋರ್ಟ್!!

ಕಾಂಗ್ರೆಸ್ ಹೈಕಮಾಂಡ್ ಕೈ ಪಕ್ಷದ ಹಿರಿಯ ಶಾಸಕರಾದ ಯು.ಟಿ.ಖಾದರ್, ಕೃಷ್ಣ ಬೈರೇಗೌಡ, ಕೆಜೆ ಜಾರ್ಜ್, ದೇಶಪಾಂಡೆ, ಡಿ.ಕೆ.ಶಿವಕುಮಾರ್ ಅವರ ರಾಜೀನಾಮೆ ನೀಡುವಂತೆ ಸೂಚನೆ ನೀಡಿತ್ತು. ಆದರೆ ಕಾಂಗ್ರೆಸ್- ನ ಕೆಲವು ಸಚಿವರು ಮತ್ತು ಶಾಸಕರು ಸಿದ್ದರಾಮಯ್ಯ ಅವರು ಸಿಎಂ ಆಗಿಲಿ ನಾವು ಅವರು ಹೇಳಿದಂತೆ ಕೇಳುತ್ತೇವೆ ಎಂದು ಹೇಳುತ್ತಿದ್ದಾರೆ. ಇದೆಲ್ಲವನ್ನು ನೋಡಿದರೆ ಮೈತ್ರಿ ಸರ್ಕಾರ ನಡೆಸಿರುವ ಕೊನೆಯ ಪ್ರಯತ್ನ ಪೇಲ್ ಆಗುತ್ತೋ ಪಾಸ್ ಆಗುತ್ತೋ ಎನ್ನುವುದು ಸಂಜೆಯ ಒಳಗೆ ತಿಳಿಯಲಿದೆ.