ನವರಾತ್ರಿಯ ವೈಶಿಷ್ಟ್ಯತೆಗಳು ಮತ್ತು 9 ದಿನದ ದೇವಿಯ ಪೂಜೆಯ ಹಿಂದಿರುವ ಇತಿಹಾಸ…

0
684

ನವರಾತ್ರಿ ಇದು ದೇವಿಯನ್ನು ಆರಾಧಿಸುವ ಹಿಂದೂ ಧರ್ಮದ ಹಬ್ಬ. ಇದನ್ನು ಕರ್ನಾಟಕದಲ್ಲಿ ದಸರ ಎಂದು ಕರೆಯಲಾಗುತ್ತದೆ. ಪಶ್ಚಿಮ ಬಂಗಾಳದಲ್ಲಿ ಈ ಹಬ್ಬವನ್ನು ದುರ್ಗಾ ಪೂಜಾ ಎಂದು ಆಚರಿಸಲಾಗುತ್ತದೆ. ನವರಾತ್ರಿಯೆಂದರೆ ಒಂಬತ್ತು ನವರಾತ್ರಿಗಳು, ದೇವಿಯ ಒಂಬತ್ತು ವಿಧದ ರೂಪಗಳನ್ನು ಆರಾಧಿಸಲಾಗುತ್ತದೆ. ಹತ್ತನೇಯ ದಿನ ‘ವಿಜಯ ದಶಮಿ’, ಈ ದಿನ ಶಮಿವೃಕ್ಷಕ್ಕೆ ಪೂಜೆಯನ್ನು ಸಲ್ಲಿಸಿ ಶಮಿ ಬನ್ನಿಯನ್ನು ವಿನಿಯೋಗ ಮಾಡುವದು ಕರ್ನಾಟಕದ ಆಚರಣೆಯ ಪದ್ಧತಿ.

Also read: ನವರಾತ್ರಿಯಲ್ಲಿ ನಾವುಗಳು ಹೇಗಿರಬೇಕು?? ನವರಾತ್ರಿ ಉಪವಾಸವನ್ನು ಹೇಗೆ ಮಾಡಬೇಕು ಗೊತ್ತೆ?? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್..!

ನವರಾತ್ರಿಯ ವೈಶಿಷ್ಟ್ಯತೆಗಳು:

ವಿಜಯನಗರದ ಅರಸರು ಹಾಗೂ ಮೈಸೂರು ಅರಸರು ಜೈತ್ರಯಾತ್ರೆಯಲ್ಲಿ ಗೆಲುವು ಪಡೆದು ಸಂಭ್ರಮದಿಂದ ನಡೆಸುವ ವಿಶಿಷ್ಟ ಹಬ್ಬ ಎಂಬುದು ಇತಿಹಾಸದ ಉಲ್ಲೇಖ.ಪುರಾಣದ ಪ್ರಕಾರ ಜಗನ್ಮಾತೆ ರಾಕ್ಷಸರನ್ನು ಸಂಹಾರ ಮಾಡಲು ಒಂದೊಂದು ಅವತಾರವೆತ್ತಿ ರಾಕ್ಷಸರನ್ನು ಸಂಹರಿಸಿ ಲೋಕವನ್ನು ಕಾಪಾಡುತ್ತಾಳೆ. ನವರಾತ್ರಿಯ ಒಂದೊಂದು ದಿನವೂ ಬಹಳ ವಿಶೇಷವಾಗಿ ನಿಲ್ಲುತ್ತದೆ. 9 ದಿನಗಳ ಕಾಲ ಆದಿ ಶಕ್ತಿಯನ್ನು ನವ ವಿಧದಲ್ಲಿ ಪೂಜಿಸಲಾಗುತ್ತದೆ.

  • ಮೊದಲ ದಿನ ಅಂದರೆ ಪಾಡ್ಯದ ದಿನ ಯೋಗನಿದ್ರಾ ದುರ್ಗಾ ಪೂಜಾ:
  • ಎರಡನೇ ದಿನ ಆಂದರೆ ಬಿದಿಗೆ ದಿನ ದೇವಜಾತ ದುರ್ಗಾಪೂಜಾ:
  • ಮೂರನೇ ದಿನ ತದಿಗೆ – ಮಹಿಷಾಸುರ ಮರ್ಧಿನಿ ದುರ್ಗಾಪೂಜಾ.
  • ನಾಲ್ಕನೇ ದಿನ ಚತುರ್ದಶಿ – ಶೈಲ ಜಾತಾ ದುರ್ಗಾಪೂಜಾ.
  • ಐದನೇ ದಿನ ಪಂಚಮಿ – ದೂಮೃಹಾ ದುರ್ಗಾಪೂಜಾ.
  • ಆರನೇ ದಿನ ಶಷ್ಠಿ – ಚಂಡ-ಮುಂಡ ಹಾ ದುರ್ಗಾಪೂಜಾ.
  • ಏಳನೇ ದಿನ ಸಪ್ತಮಿ – ರಕ್ತ ಬೀಜ ಹಾ ದುರ್ಗಾಪೂಜಾ.
  • ಎಂಟನೇ ದಿನ ಅಷ್ಟಮಿ – ನಿಶುಂಭ ಹಾ ದುರ್ಗಾಪೂಜಾ.(ದುರ್ಗಾಷ್ಠಮಿ)
  • ಒಂಭತ್ತನೇ ದಿನ ಮಹಾನವಮಿ -ಶುಂಭ ಹಾ ದುರ್ಗಾಪೂಜಾ:

Also read: ನವರಾತ್ರಿ ಸಮಯದಲ್ಲಿ ಪೂಜೆ ಹೇಗೆ ಮಾಡ್ಬೇಕು ಅಂತ ಗೊತ್ತಾಗ್ತಿಲ್ವ? ನಾವ್ ಹೇಳ್ತಿವಿ ನೋಡಿ

ನವದುರ್ಗೆಯರು:

ಭಗವಾನ ಹಿರಣ್ಯಗರ್ಭ ಮುನಿಗಳು ಮಂತ್ರಯೋಗ ಸಮೀಕ್ಷೆಯಲ್ಲಿ ಹೇಳಿರುವ ಶ್ರೀ ದುರ್ಗಾಸಪ್ತಶತಿಯಲ್ಲಿನ ದೇವಿಯ ಹೆಸರುಗಳು ಅಸುರ ಶಕ್ತಿಯನ್ನು ದಮನಿಸುವ ಜೊತೆಗೆ ನಮ್ಮೊಳಗಿರುವ ಹುದುಗಿರುವ ದುಷ್ಟತೆ, ಕೌರ್ಯಗಳ ಮೇಲೆ ವಿಜಯಿಸುವ ಕಾಲ.
ನವರಾತ್ರಿಯಲ್ಲಿ ಈ ರೀತಿಯಲ್ಲಿ ನವದುರ್ಗೆಯನ್ನು ಪೂಜಿಸಲಾಗುತ್ತದೆ.

  • ಶೈಲಪುತ್ರಿ:

‘ಶೈಲಮ್’ ಅಂದರೆ ಯಾವ ಪರ್ವತದಲ್ಲಿ ಮಾಣಿಕ್ಯ, ರತ್ನ ಮತ್ತಿತರ ಅತ್ಯಮೂಲ್ಯ ವಸ್ತುಗಳ ಸಂಗ್ರಹವಿದೆಯೋ, ಅಂತಹ ಪರ್ವತ. ಈ ಅತ್ಯಮೂಲ್ಯ ವಸ್ತುಗಳ ಸಂಗ್ರಹವನ್ನು ನೋಡಿಯೂ ಭೌತಿಕ ಸುಖದೆಡೆಗೆ ಆಕರ್ಷಿತಗೊಳ್ಳದೆ, ಭೌತಿಕತೆಯ ತ್ಯಾಗವನ್ನು ಮಾಡಿ ಆತ್ಮಜ್ಞಾನವನ್ನು ಪಡೆಯಲು ಪ್ರವೃತ್ತವಾಗುವವಳೆಂದರೆ ಶೈಲಪುತ್ರಿ.

  • ಬ್ರಹ್ಮಚಾರಿಣಿ:

‘ಬ್ರಹ್ಮಚಾರಯಿತುಂ ಶೀಲಂ ಯಸ್ಯಾಃ ಸಾ ಬ್ರಹ್ಮಚಾರಿಣಿ|’ ಅಂದರೆ ಬ್ರಹ್ಮರೂಪವಾಗುವುದು ಯಾರ ಶೀಲವಾಗಿದೆಯೋ ಮತ್ತು ಯಾರ ಆಚಾರಗಳು ಅದರಂತಿವೆಯೋ ಅವಳೇ ಬ್ರಹ್ಮಚಾರಿಣಿ.

  • ಚಂದ್ರಘಂಟಾ:

‘ಚಂದ್ರಃ ಘಂಟಾಯಾಂ ಯಸ್ಯಾ ಸಾ ಚಂದ್ರಘಂಟಾ| ಆಹ್ಲಾದಯತಿ ಇತಿ ಚಂದ್ರಃ|’ ಅಂದರೆ ಆಹ್ಲಾದಕಾರಕ ಚಂದ್ರನು ಯಾರ ದ್ವಾರದಲ್ಲಿ ಸ್ಥಿರವಾಗಿದ್ದಾನೆಯೋ ಅವಳೇ ಚಂದ್ರಘಂಟಾ. ಆಹ್ಲಾದವೆಂದರೆ ಮಮತೆ, ಕ್ಷಮಾಶೀಲತೆ ಮತ್ತು ವಾತ್ಸಲ್ಯ ಈ ಮೂರೂ ಗುಣಗಳ ಸಮ್ಮಿಲಿತ ಸ್ಥಿತಿ.

  • ಕೂಷ್ಮಾಂಡಾ:

‘ಕುತ್ಸಿತಃ ಉಷ್ಮಾಃ ಕೂಷ್ಮಾಃ|’ ಕುತ್ಸಿತಃ ಅಂದರೆ ಸಹಿಸಲು ಕಠಿಣ ವಾದುದು. ಉಷ್ಮಾ ಎಂದರೆ ಸೂಕ್ಷ್ಮ ಲಹರಿಗಳ ಗೊಂದಲ ‘ತ್ರಿವಿಧತಾಪಯುಕ್ತಃ ಸಂಸಾರಃ ಸ ಅಂಡೇ ಮಾಂಸಪೇಶ್ಯಾಮ್ ಉದರರೂಪಾಯಾಂ ಯಸಾಃ ಸಾ ಕೂಷ್ಮಾಂಡಾ|’ ‘ಸಂಸಾರ’ವೆಂದರೆ ‘ಪುನಃಪುನಃ’ ಮತ್ತು ‘ಅಂಡಃ’ ಅಂದರೆ ‘ವಿಶಿಷ್ಟ ನಿಯಂತ್ರಣದಿಂದ ಯುಕ್ತವಾಗಿರುವ ಕೋಶ.’ ಮಾಂಸ, ಜೀವಕೋಶಗಳು, ಉದರ ಮತ್ತು ರೂಪ ಇವುಗಳಿಂದ ಯುಕ್ತಸಂಪನ್ನವಾದ ಜೀವಗಳು ಈ ಕೋಶದಲ್ಲಿ ತ್ರಿವಿಧ ತಾಪಗಳ ಪುನರಾವೃತ್ತಿಯ ಅವಸ್ಥೆಯಿಂದ ಪುನಃಪುನಃ ಹೋಗುತ್ತಾರೆ. ಈ ಪ್ರಕ್ರಿಯೆಯಿಂದ ಬಿಡುಗಡೆ ಹೊಂದಲು ಯಾರ ಕೃಪೆಯ ಆವಶ್ಯಕತೆಯಿದೆಯೋ ಅವಳೇ ಕೂಷ್ಮಾಂಡಾ.

Also read: ನವರಾತ್ರಿಯಲ್ಲಿ ಈ ವಿಶೇಷ ಪೂಜೆಗಳನ್ನು ಮಾಡಿದರೆ ಏನೆಲ್ಲಾ ಫಲ ಹೊಂದುತ್ತೀರಿ ಅಂತ ಗೊತ್ತಾದ್ರೆ ಈಗಲೇ ಶುರು ಮಾಡ್ತೀರಾ..!!

  • ಸ್ಕಂದಮಾ:

‘ಭಗಃ’ ಎಂದರೆ ತೇಜಸ್ಸು. ‘ಭಗವತಿ’ ಎಂದರೆ ‘ವಿಶಿಷ್ಟ ಯೋಗ್ಯತೆ ಯುಳ್ಳ ಸ್ಪಂದನ ಲಹರಿಗಳಿಂದ ಯುಕ್ತವಾದಂತಹ ತೇಜಸ್ಸು’. ಬ್ರಹ್ಮದೇವ ಮತ್ತು ಭಗವತಿ ದೇವಿಯ ಸಮ್ಮಿಲಿತ ಅವಸ್ಥೆಯಿಂದ ಸನತ್ಕುಮಾರ ಅಥವಾ ಸ್ಕಂದ ಎಂಬ ಹೆಸರಿನ ವಿಶಿಷ್ಟ ರಚನೆಯ ಕಿರಣ ಸಮೂಹವು ಉತ್ಪನ್ನವಾಯಿತು. ಭೂಲೋಕದಿಂದ ಸತ್ಯಲೋಕದ ಈ ಏಳೂ ಲೋಕಗಳ ನಿಯಂತ್ರಕರ ಮಾತೆಯೇ ಸ್ಕಂದಮಾತೆ. ಈ ಏಳೂ ಲೋಕಗಳಿಂದ ಪಾರಾಗಿ ಹೋಗಲು ಯಾರ ಸಹಾಯ ಬೇಕಾಗುತ್ತದೆಯೋ ಅವಳಿಗೆ ಸ್ಕಂದಮಾತೆ ಎನ್ನುತ್ತಾರೆ.

  • ಕಾತ್ಯಾಯನಿ:

‘ಕಾತ್ಯಾಯನಸ್ಯ ಅಪತ್ಯಂ ಸ್ತ್ರೀ ಕಾತ್ಯಾಯನಿ ‘ಅಯನ’ ಎಂದರೆ ‘ಹಲವಾರು ನಕ್ಷತ್ರ ಸಮೂಹಗಳಿಂದ ಯುಕ್ತವಾಗಿರುವ ಭಾಗ’. ಕಾತ್ಯಾಯನ ಋಷಿಗಳು ಇಂತಹ ಒಂದು ಅಯನದ ಪಾಲಕರಾಗಿದ್ದರು. ಒಮ್ಮೆ ಕಾತ್ಯಾಯನರ ಅಯನಗಳಲ್ಲಿನ ದೇವತೆಗಳ ಮೇಲೆ ಅವರದ್ದೇ ಅಯನದಲ್ಲಿನ ಅಯೋಗ್ಯ ಸ್ಪಂದನಲಹರಿಗಳ ಒಂದು ಶಕ್ತಿಯುತ ಸಮೂಹವು ಆಕ್ರಮಣ ಮಾಡಿತು. ಘರ್ಷಣೆಯಿಂದ ಬಹುದೊಡ್ಡ ಉತ್ಪಾತವಾಗುವ ಸಮಯ ಬಂದಿತು. ಆಗ ಕಾತ್ಯಾಯನ ಋಷಿಗಳ ಆಶ್ರಮದಲ್ಲಿ ಸೂಕ್ಷ್ಮಾತಿಸೂಕ್ಷ್ಮ ಶಕ್ತಿಲಹರಿಗಳ ಒಂದು ಅಂಶವು ಒಬ್ಬ ಚಿಕ್ಕ ಬಾಲಕಿಯ ಆಕಾರದಲ್ಲಿ ಪ್ರವೇಶಿಸಿತು. ಈ ಬಾಲಕಿಯನ್ನು ಕಾತ್ಯಾಯನ ಋಷಿಗಳು ತಮ್ಮ ಸಂತಾನವೆಂದು ಪರಿಗಣಿಸಿದರು; ಆದುದರಿಂದ ಅವಳು ‘ಕಾತ್ಯಾಯನಿ’ ಎಂಬ ಹೆಸರಿನಿಂದ ಪ್ರಸಿದ್ಧಿ ಹೊಂದಿದಳು.

  • ಕಾಳರಾತ್ರಿ:

ಹಲವಾರು ಅಯೋಗ್ಯ ಸ್ಪಂದನಲಹರಿಗಳು ಒಟ್ಟು ಸೇರಿ ಸಿದ್ಧವಾಗುವ ಶಕ್ತಿಯೆಂದರೆ ‘ಕಾಲ’. ವ್ಯಕ್ತಿಯ ಅಯೋಗ್ಯ ಸ್ಪಂದನಲಹರಿಗಳು ಆ ವ್ಯಕ್ತಿಯಲ್ಲಿ ಭಯವನ್ನುಂಟು ಮಾಡುತ್ತವೆ. ಆ ಸ್ಪಂದನಲಹರಿಗಳಲ್ಲಿ ವಿಶಿಷ್ಟ ಕ್ಷಮತೆ ಉಂಟಾಯಿತೆಂದರೆ ವಾತಾವರಣದಲ್ಲಿನ ಇದೇ ಜಾತಿಯ ಇತರ ಸ್ಪಂದನಗಳನ್ನು ವ್ಯಕ್ತಿಯ (ಅಥವಾ ಆ ಪ್ರಾಣಿಯ) ಶರೀರದೆಡೆ ಆಕರ್ಷಿಸುತ್ತವೆ. ಈ ರೀತಿ ಅಯೋಗ್ಯ ಸ್ಪಂದನಲಹರಿಗಳ ಶಕ್ತಿಯು ಹೆಚ್ಚಾಯಿತೆಂದರೆ ಆಗಬಾರದಂತಹ ಘಟನೆಗಳು ಮತ್ತು ಕೃತಿಗಳು ಆ ವ್ಯಕ್ತಿಯಿಂದ ಆಗುತ್ತವೆ. ಅವುಗಳ ಪ್ರತಿಕ್ರಿಯೆಗಳನ್ನು ನಾವು ಆಪತ್ತು ಅಥವಾ ಸಂಕಟ ಎನ್ನುತ್ತೇವೆ. ಇಂತಹ ಆಪತ್ತನ್ನು ಅಥವಾ ಸಂಕಟವನ್ನು ತರುವ ಅಯೋಗ್ಯ ಸ್ಪಂದನಲಹರಿಗಳ ಸಾಮೂಹಿಕ ಶಕ್ತಿಯ, ಅಂದರೆ ಕಾಲದ ರಾತ್ರಿಯೇ ಕಾಳರಾತ್ರಿ.

  • ಮಹಾಗೌರಿ:

Also read: ನವರಾತ್ರಿಯಲ್ಲಿ ಈ ರೀತಿ ಪೂಜೆ ಮಾಡಿದರೆ, ನಿಮ್ಮ ಸಕಲ ಇಷ್ಟಾರ್ಥಗಳನ್ನು ತಾಯಿ ಲಕ್ಷ್ಮಿ ಸರಸ್ವತಿ ದುರ್ಗೆ ಈಡೇರಿಸುವರು..!!

ತಪಸ್ಯೇನೆ ಮಹಾನ್ ‘ಗೌರಃ’, ಅಂದರೆ ‘ತೇಜಸ್ಸ’ನ್ನು ಪ್ರಾಪ್ತಮಾಡಿ ಕೊಂಡವಳೇ ಮಹಾಗೌರಿ’. ಮಂತ್ರಯೋಗಸಮಿಕ್ಷೆಯಲ್ಲಿ ‘ಸಮಾಧಿ’ ಎಂಬ ಪದದ ವ್ಯುತ್ಪತ್ತಿಯನ್ನು ‘ಸಮ್ + ಆ + ಅಧಿ’ ಎಂದು ಹೇಳಲಾಗಿದೆ. ಧೀ ಎಂಬ ಲಹರಿಗಳನ್ನು ಸೂಕ್ಷ್ಮಾತಿಸೂಕ್ಷ್ಮಶಕ್ತಿ ಲಹರಿಗಳ ಸಮ್ಯಕ್ ಅವಸ್ಥೆಯ ತನಕ ಕೊಂಡೊಯ್ಯುವ ಪ್ರಕ್ರಿಯೆಯನ್ನು ಸಮಾಧಿ ಎನ್ನುತ್ತಾರೆ. ಪುನಃ ಪುನಃ ಸಮಾಧಿಯನ್ನು ಸಾಧಿಸುವುದಕ್ಕೆ ‘ತಪಸ್ಯಾ’ ಎನ್ನುತ್ತಾರೆ. ಇಂತಹ ತಪಸ್ಸನ್ನು ವಿಶಿಷ್ಟ ಕಾಲಾವಧಿಯ ತನಕ ಮಾಡುವುದರಿಂದ ‘ಗೌರ’ ಅಥವಾ ‘ತೇಜಸ್ಸು’ ಪ್ರಾಪ್ತವಾಗುತ್ತದೆ. ಮಹಾನ್ ಗೌರವನ್ನು ಯಾವಳು ಪಡೆದುಕೊಂಡಿದ್ದಾಳೆಯೋ ಅವಳು ಮತ್ತು ಯಾರ ಪ್ರಸಾದದಿಂದ ಸಮಾಧಿಯನ್ನು ಸಾಧಿಸಬಹುದೋ ಅವಳೇ ‘ಮಹಾಗೌರಿ’

  • ಸಿದ್ಧಿದಾತ್ರಿ:

ಸಾಮಾನ್ಯ ಸ್ಪಂದನಲಹರಿಗಳನ್ನು ಸೂಕ್ಷ್ಮಾತಿಸೂಕ್ಷ್ಮ ಶಕ್ತಿತರಂಗಗಳಲ್ಲಿ ಶಾಶ್ವತವಾಗಿ ಸೇರಿಸುವುದಕ್ಕೆ ‘ಮೋಕ್ಷ ಅಥವಾ ಸಿದ್ಧಿ’ ಎನ್ನುತ್ತಾರೆ. ಸಿದ್ಧಿಯನ್ನು ನೀಡುವವಳು ಸಿದ್ಧಿದಾತ್ರಿ.