ಹೆಚ್‌ಪಿಸಿಎಲ್‌ 24 ವ್ಯವಸ್ಥಾಪಕ ಮತ್ತು ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ; ಅರ್ಜಿ ಸಲ್ಲಿಸುವುದು ಹೇಗೆ??

0
334

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ (ಹೆಚ್‌ಪಿಸಿಎಲ್‌) 24 ವ್ಯವಸ್ಥಾಪಕ ಮತ್ತು ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನಿಡಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 31,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

Also read: ಭಾರತೀಯ ನೌಕಾಪಡೆ 144 ಎಸ್‌ಎಸ್‌ಸಿ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ವ್ಯವಸ್ಥಾಪಕ ಮತ್ತು ಅಧಿಕಾರಿ

ಸಂಸ್ಥೆ (Organisation): ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ (ಹೆಚ್‌ಪಿಸಿಎಲ್‌)

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ವಿದ್ಯಾರ್ಹತೆ (Educational Qualification): ಬಿ.ಇ/ಬಿ.ಟೆಕ್, ಎಂ.ಇ/ಎಂ.ಟೆಕ್, ಪಿಎಚ್‌.ಡಿ ಮತ್ತು ಎಂ.ಎಸ್ಸಿ

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ,ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 590/-ರೂ ಗಳನ್ನು ಆನ್‌ಲೈನ್‌ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ವಿಧಾನ: ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://www.hindustanpetroleum.com/ ಗೆ ಹೋಗಿ ಅಲ್ಲಿ ಕೇಳಲಾಗಿರುವ ಮಾಹತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 31,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕ್ ಮಾಡಿ