ಹೆಚ್‌ಪಿಸಿಎಲ್‌ ಇಂಜಿನಿಯರ್ ಮತ್ತು ಕಾನೂನು ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
71

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ (ಹೆಚ್‌ಪಿಸಿಎಲ್‌) 164 ಇಂಜಿನಿಯರ್ ಮತ್ತು ಕಾನೂನು ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ ಸೆಪ್ಟೆಂಬರ್ 16,2019 ರೊಳಗೆ ಅರ್ಜಿ ಸಲ್ಲಿಸಬೇಕು.

Also read: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ವ್ಯವಸ್ಥಾಪಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಇಂಜಿನಿಯರ್ ಮತ್ತು ಕಾನೂನು ಅಧಿಕಾರಿ

ಸಂಸ್ಥೆ (Organisation): ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ (ಹೆಚ್‌ಪಿಸಿಎಲ್‌)

ವಿದ್ಯಾರ್ಹತೆ (Educational Qualification): ಈ ಹುದ್ದೆಗಳಿಗೆ ಬಿಇ, ಬಿ.ಟೆಕ್, ಪದವಿ,ಎಂ.ಎಸ್ಸಿ ಮತ್ತು ಪೋಸ್ಟ್ ಗ್ರಾಜುಯೇಟ್ ವಿದ್ಯಾರ್ಹತೆಯನ್ನು ಹೊಂದಿರುವ
ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಹುದು.

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ವೇತನ ವಿವರ (Salary Scale): ತಿಂಗಳಿಗೆ 60,000/- ರಿಂದ 1,80,000/-ರೂ

ವಯೋಮಿತಿ: ಹುದ್ದೆಗಳಿಗನುಸಾರ ಗರಿಷ್ಟ 28 ಮತ್ತು 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 590/-ರೂ ಗಳನ್ನು ಆನ್‌ಲೈನ್‌ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಮಾಜಿ ಸೈನಿಕ ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://www.hindustanpetroleum.com/ ಗೆ ಹೋಗಿ ಕೇಳಲಾಗಿರುವ ಮಾಹತಿಯನ್ನು ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 16,2019ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.