ಈರುಳ್ಳಿ, ಬೆಳ್ಳುಳ್ಳಿ ತಿನ್ನದ ಕುಟುಂಬಕ್ಕೆ ಸೇರಿದವಳು, ಹೀಗಾಗಿ ಬೆಲೆ ಏರಿಕೆಯ ಚಿಂತೆಯಿಲ್ಲ; ನಿರ್ಮಲಾ ಸೀತಾರಾಮನ್ ಉತ್ತರಕ್ಕೆ ತಬ್ಬಿಬ್ಬಾದ ಲೋಕಸಭೆ ಕಲಾಪ.!

0
424

ದೇಶದ ಜನರಿಗೆ ಕಣ್ಣಿರು ತರಿಸಿದ ಈರುಳ್ಳಿ, ಕುರಿತು ಸರ್ಕಾರದಲ್ಲಿ ಭಾರಿ ಚರ್ಚೆಗಳು ನಡೆಯುತ್ತಿವೆ, ಈಗಾಗಲೇ 110 ರೂ. ದಾಟಿದ ಈರುಳ್ಳಿ ಲೋಕಸಭಾ ಕಲಾಪದಲ್ಲಿ ಕಾವೇರಿತ್ತು. ಬೆಲೆ ಏರಿಕೆ, ಆರ್ಥಿಕ ಹಿಂಜರಿತ, ತೀವ್ರ ಹಣದುಬ್ಬರದಿಂದ ದೇಶದಲ್ಲಿ ಹೂಡಿಕೆ ಮಾಡಿದವರಿಗೆ ಭೀತಿ ಎದುರಾಗಿದೆ ಎಂಬ ಪ್ರತಿಪಕ್ಷದವರ ಟೀಕೆಗಳನ್ನು ನಿರಾಕರಿಸಿದ ಸಚಿವೆ, ವಿದೇಶಿ ನೇರ ಹೂಡಿಕೆ ಈ ವರ್ಷದ ಮೊದಲಾರ್ಧದಲ್ಲಿ 17 ಬಿಲಿಯನ್ ಡಾಲರ್ ನಿಂದ 209 ಬಿಲಿಯನ್ ಡಾಲರ್ ಗೆ ಏರಿಕೆಯಾಗಿದೆ. ಪ್ರತಿಪಾದಿಸಿದ ಅವರು “ನಾನು ಬಹಳಷ್ಟು ಈರುಳ್ಳಿ, ಬೆಳ್ಳುಳ್ಳಿಯನ್ನು ತಿನ್ನುವುದಿಲ್ಲ. ಈರುಳ್ಳಿ ಬೆಳ್ಳುಳ್ಳಿಯನ್ನು ತಿನ್ನದ ಕುಟುಂಬದಿಂದ ನಾನು ಬಂದಿದ್ದೇನೆ ಎಂದು ಹೇಳಿದ ವಿಷಯ ಭಾರಿ ವೈರಲ್ ಆಗಿದೆ.

ಹೌದು ಈರುಳ್ಳಿ ಬೆಲೆ ಪ್ರಸ್ತುತ 100 ರೂ ಗಿಂತ ಅಧಿಕವಾಗಿದೆ. ಮುಂದಿನ ದಿನಗಳಲ್ಲಿ ಈ ಬೆಲೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಈರುಳ್ಳಿ ಬೆಲೆ ಏರಿಕೆ ಕುರಿತ ಚರ್ಚೆ ಇಂದು ಲೋಕಸಭಾ ಕಲಾಪದಲ್ಲಿ ಕಾವೇರಿತ್ತು. ಆದರೆ, ಚರ್ಚೆಯ ವೇಳೆ ಎನ್​ಸಿಪಿ ಸಂಸದೆ ಸುಪ್ರಿಯಾ ಸುಲೆ ಅವರ ಪ್ರಶ್ನೆಗೆ ಉತ್ತರಿಸುವ ಬರದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇದೀಗ ದೇಶದಾದ್ಯಂತ ನಗೆಪಾಟಲಿಗೆ ಈಡಾಗಿದ್ದಾರೆ. ಸಂಸತ್ ಕಲಾಪದಲ್ಲಿ ಈರುಳ್ಳಿ ಬೆಲೆ ಏರಿಕೆ ಕುರಿತು ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಬೆಲೆ ಏರಿಕೆಯನ್ನು ತಡೆಯಲು ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಕ್ರಮಗಳೇನು? ಎಂದು ಎನ್​ಸಿಪಿ ಪಕ್ಷದ ಸಂಸದೆ ಸುಪ್ರಿಯಾ ಸುಲೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಪ್ರಶ್ನೆ ಮಾಡಿದ್ದಾರೆ.

ಈ ಪ್ರಶ್ನೆಗೆ ಪ್ರತಿಕ್ರಿಯಿಸುವ ಬರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿರುವ ನಿರ್ಮಲಾ ಸೀತಾರಾಮನ್, ನಮ್ಮ ಮನೆಯಲ್ಲಿ ಈರುಳ್ಳಿ, ಬೆಳ್ಳುಳ್ಳಿ ತಿನ್ನುವುದಿಲ್ಲ, ನಾನು ಈರುಳ್ಳಿ, ಬೆಳ್ಳುಳ್ಳಿ ತಿನ್ನದ ಕುಟುಂಬಕ್ಕೆ ಸೇರಿದವಳು, ಹೀಗಾಗಿ ಬೆಲೆ ಏರಿಕೆಯ ಚಿಂತೆಯಿಲ್ಲ ಎಂದರು. ಅವರು ಹೀಗೆ ಹೇಳಿರುವ ಸುಮಾರು 20 ಸೆಕೆಂಡುಗಳ ವಿಡಿಯೊ ವ್ಯಾಪಕವಾಗಿ ವೈರಲ್ ಆಗಿದೆ. ನಂತರ ವಿಪಕ್ಷಗಳು ನೀವು ತಿನ್ನದಿದ್ದರೆ ದೇಶದ ಜನತೆಕೂಡ ತಿನ್ನುವುದನ್ನು ಬಿಟ್ಟು ಬಿಡಬೇಕೆ ಎಂದು ಪ್ರಶ್ನೆ ಮಾಡಿದ್ದಾರೆ. ನಂತರ ಹೇಳಿಕೆಯಿಂದ ಕೆಲಕಾಲ ಸದನದಲ್ಲಿ ಮುಜುಗರಕ್ಕೆ ಈಡಾಗಿದ್ದ ಸಚಿವೆ ನಿರ್ಮಲಾ ಸೀತಾರಾಮನ್ ಕೆಲಕಾಲ ಸುಧಾರಿಸಿಕೊಂಡು ನಂತರ ಈರುಳ್ಳಿ ಬೆಲೆ ಏರಿಕೆಯ ಕಾರಣಗಳೇನು ಎಂದು ವಿವರಿಸಿದ್ದಾರೆ.

“ಈರುಳ್ಳಿ ಉತ್ಪಾದನೆ ಈ ವರ್ಷ ನಿರೀಕ್ಷಿತ ಪ್ರಮಾಣಕ್ಕಿಂತ ಕಡಿಮೆಯಾಗಿರುವ ಪರಿಣಾಮ ಹಲವೆಡೆ ಬೆಲೆ ಕೆ.ಜಿ ಗೆ 100 ರೂ ದಾಟಿದೆ. ಹೀಗಾಗಿ ಈರುಳ್ಳಿ ಬೆಲೆಯನ್ನು ನಿಯಂತ್ರಿಸುವ ಸಲುವಾಗಿ ರಫ್ತು ನಿಲ್ಲಿಸಲಾಗಿದೆ. ಅಲ್ಲದೆ, ಅಧಿಕ ಪ್ರಮಾಣದಲ್ಲಿ ಶೇಖರಿಸಲು ಹಾಗೂ ಹೆಚ್ಚುವರಿ ಈರುಳ್ಳಿಯನ್ನು ವಿದೇಶಗಳಿಂದ ಆಮದು ಮಾಡಿಕೊಂಡು ಕೊರತೆ ಇರುವ ಸ್ಥಳಗಳಿಗೆ ಪೂರೈಸಲು ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಂಡಿದೆ” ಅಷ್ಟೇ ಅಲ್ಲದೆ ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದು ಅಡುಗೆ ಪದಾರ್ಥಗಳನ್ನು ದೀರ್ಘಕಾಲದವರೆಗೆ ಸಂಗ್ರಹಿಸಿಡಲು ತಂತ್ರಜ್ಞಾನ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಮಾಹಿತಿ ನೀಡಿದರು.

Also read: ಬುಲೆಟ್ ರೈಲು ಯೋಜನೆಗಾಗಿ ಬಿಜೆಪಿಗೆ ದೇಣಿಗೆ ನೀಡಿದ ಕಂಪನಿಗಳಿಗೆ ಟೆಂಡರ್‌; ಉದ್ಧವ್ ಠಾಕ್ರೆ ಮಾಡಿದ ಮೊದಲ ಮರು ಪರಿಶೀಲನೆ.!