ಯುಪಿಎಸ್‌ಸಿ IAS & IFS ಸಿವಿಲ್ ಸರ್ವೀಸಸ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
360

ಸಿವಿಲ್ ಸರ್ವೀಸಸ್ ಪರೀಕ್ಷೆಗಾಗಿ ತಯಾರಿ ನಡೆಸಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ ( UPSC) 986 ಐಎಎಸ್ & ಐಎಫ್‌ಎಸ್ ಸಿವಿಲ್ ಸರ್ವೀಸಸ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್-ನಲ್ಲಿ ಮಾರ್ಚ್ 18,2019 ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: ಕಲಬುರ್ಗಿ ಜಿಲ್ಲಾ ಗ್ರಾಮ ಪಂಚಾಯತ್ ಕಾರ್ಯದರ್ಶಿ ಹಾಗೂ ದ್ವಿತೀಯ ದರ್ಜೆ ಸಹಾಯಕರ ನೇಮಕಾತಿ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಗಳ ಹೆಸರು (Name Of The Posts): ಇಂಡಿಯನ್ ಅಡ್ಮಿನಿಸ್ಟ್ರೇಟಿವ್ ಸರ್ವೀಸಸ್,ಇಂಡಿಯನ್ ಫಾರೆಸ್ಟ್ ಸರ್ವೀಸಸ್

ಸಂಸ್ಥೆ (Organisation): ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್

ವಿದ್ಯಾರ್ಹತೆ (Educational Qualification): ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ವಯೋಮಿತಿ: ಅಭ್ಯರ್ಥಿಗಳು ಆಗಸ್ಟ್ 1,2019 ರ ಅನ್ವಯ ಕನಿಷ್ಟ 21 ಮತ್ತು ಗರಿಷ್ಟ 32 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ಹುದ್ದೆಗಳ ವಿವರ: ಇಂಡಿಯನ್ ಅಡ್ಮಿನಿಸ್ಟ್ರೇಟಿವ್ ಸರ್ವೀಸಸ್ (ಐಎಎಸ್) 896, ಇಂಡಿಯನ್ ಫಾರೆಸ್ಟ್ ಸರ್ವೀಸಸ್ (ಐಎಫ್‌ಎಸ್) 90 ಒಟ್ಟು 986

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಸಂದರ್ಶನ ಅಥವಾ ಪರ್ಸನಾಲಿಟಿ ಟೆಸ್ಟ್ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ /ಪ್ರವರ್ಗ-1 /ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ. ಅರ್ಜಿ ಶುಲ್ಕವನ್ನು ಪಾವತಿಸಲು
ಕೊನೆಯ ದಿನಾಂಕ ಮಾರ್ಚ್ 17,2019.

ಅರ್ಜಿ ಸಲ್ಲಿಸುವ ವಿಧಾನ:

https://upsc.gov.in/ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿಯನ್ನು ಭರ್ತಿ ಮಾಡಿ ನಂತರ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ: https://drive.google.com/file/d/1EG9jXfzSpMSb3S7r37zsu_s9d-z1yj59/view ಕ್ಲಿಕ್ ಮಾಡಿ.