ಐಬಿಪಿಎಸ್ 1163 ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ; ಅರ್ಜಿ ಸಲ್ಲಿಸುವುದು ಹೇಗೆ??

0
83

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ 1163 ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಭೇಟಿ ನೀಡಿ. ಅಭ್ಯರ್ಥಿಗಳು ಈ ಹುದ್ದೆಗಳ ಬಗೆಗೆ ತಿಳಿದು ಆನ್‌ಲೈನ್ ಮೂಲಕ ನವೆಂಬರ್ 26,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

Also read: ಡಿಪ್ಲೋಮ ಮಾಡಿದ ಅಭ್ಯರ್ಥಿಗಳಿಗೆ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ ಉದ್ಯೋಗ ಅವಕಾಶ..!!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಸ್ಪೆಷಲಿಸ್ಟ್ ಅಧಿಕಾರಿ

ವಿದ್ಯಾರ್ಹತೆ (Educational Qualification): ಅಭ್ಯರ್ಥಿಗಳು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪದವಿ,ಸ್ನಾತಕೋತ್ತರ ಪದವಿ,ಎಂಬಿಎ ಮತ್ತು ಕಾನೂನು ಪದವಿಯನ್ನು ಪಡೆದಿರಬೇಕು.

ವಯೋಮಿತಿ: ನವೆಂಬರ್ 1,2019ರ ಅನ್ವಯ ಕನಿಷ್ಟ 20 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ: ಐಬಿಪಿಎಸ್ ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಎರಡು ಹಂತದ ಆನ್‌ಲೈನ್‌ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಮೊದಲು ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆಯನ್ನು ನಡೆಸಲಾಗುವುದು ಇದರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಆನ್‌ಲೈನ್‌ ಮುಖ್ಯ ಪರೀಕ್ಷೆಯನ್ನು ಎದುರಿಸಲು ಅರ್ಹರಾಗಿರುತ್ತಾರೆ.

ಅರ್ಜಿದಾರರು ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು 100/-ರೂ ಮತ್ತು ಸಾಮಾನ್ಯ ಅಭ್ಯರ್ಥಿಗಳು 600/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ನ ಅಧಿಕೃತ ವೆಬ್‌ಸೈಟ್‌ https://www.ibps.in/ ಗೆ ಭೇಟಿ ನೀಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಆನ್‌ಲೈನ್ ಮೂಲಕವೇ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ನವೆಂಬರ್ 6 ರಿಂದ ನವೆಂಬರ್ 26,2019ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.

ಮುಖ್ಯ ದಿನಾಂಕಗಳು:

  • ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: ನವೆಂಬರ್ 6,2019
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 26,2019
  • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: ನವೆಂಬರ್ 26,2019
  • ಆನ್‌ಲೈನ್ ಪರೀಕ್ಷೆಯ (ಪ್ರಿಲಿಮಿನರಿ ) ಪ್ರವೇಶ ಪತ್ರ ಬಿಡುಗಡೆಯ ದಿನಾಂಕ: ಡಿಸೆಂಬರ್,2019
  • ಆನ್‌ಲೈನ್ ಪರೀಕ್ಷೆಯ (ಪ್ರಿಲಿಮಿನರಿ) ದಿನಾಂಕ: ಡಿಸೆಂಬರ್ 28 ಮತ್ತು 29,2019
  • ಪ್ರಿಲಿಮಿನರಿ ಪರೀಕ್ಷೆ ಫಲಿತಾಂಶ ಬಿಡುಗಡೆ ದಿನಾಂಕ: ಜನವರಿ 2020
  • ಆನ್‌ಲೈನ್ ಪ್ರಮುಖ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆಯ ದಿನಾಂಕ: ಜನವರಿ 2020
  • ಆನ್‌ಲೈನ್ ಪ್ರಮುಖ ಪರೀಕ್ಷೆಯ ದಿನಾಂಕ: ಜನವರಿ 25,2019
  • ಆನ್‌ಲೈನ್ ಪ್ರಮುಖ ಪರೀಕ್ಷೆಯ ಫಲಿತಾಂಶ ಬಿಡುಗಡೆ ದಿನಾಂಕ: ಫೆಬ್ರವರಿ 2020
  • ಸಂದರ್ಶನ ಪ್ರವೇಶ ಪತ್ರ ಬಿಡುಗಡೆ ದಿನಾಂಕ: ಫೆಬ್ರವರಿ 2020
  • ಸಂದರ್ಶನ ನಡೆಯುವ ದಿನಾಂಕ: ಫೆಬ್ರವರಿ 2020
  • ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ : ಏಪ್ರಿಲ್ 2020

ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ