ಐಬಿಪಿಎಸ್ 12,075 ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ; ಅರ್ಜಿ ಸಲ್ಲಿಸುವುದು ಹೇಗೆ??

0
165

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ 12,075 ಕ್ಲರ್ಕ್‌ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ ಅಕ್ಟೋಬರ್ 9,2019 ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: ಖಾಲಿ ಇರುವ 16,838 ಪೊಲೀಸ್ ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ; ಅಭ್ಯರ್ಥಿಗಳು ಇಂದಿನಿಂದಲೇ ಸಜ್ಜಾಗಿ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು: ಬ್ಯಾಂಕಿಂಗ್ ಪರ್ಸನೆಲ್ ಕ್ಲರ್ಕ್‌

ವಿದ್ಯಾರ್ಹತೆ ಏನಿರಬೇಕು : ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪದವಿ
ವಿದ್ಯಾರ್ಹತೆ ಪಡೆದಿರಬೇಕು. ಅಥವಾ ಕೇಂದ್ರ ಸರ್ಕಾರದಿಂದ ಅಂಗೀಕೃತವಾಗಿರುವ ಸಂಸ್ಥೆ/ಕಾಲೇಜುಗಳಲ್ಲಿ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರಬೇಕು.

ವಯೋಮಿತಿ : ಸೆಪ್ಟೆಂಬರ್ 1,2019ರ ಅನ್ವಯ ಕನಿಷ್ಟ 20 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಯು ದಿನಾಂಕ 02-09-1991 ಗಿಂತ ಮೊದಲು ಜನಿಸಿರಬಾರದು ಮತ್ತು ದಿನಾಂಕ 01-09-1999 ನಂತರ ಜನಿಸಿರಬಾರದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ (ಎನ್‌ಸಿಎಲ್‌) ಅಭ್ಯರ್ಥಿಗಳಿಗೆ 3 ವರ್ಷ,ಅಂಗವಿಕಲ ಅಭ್ಯರ್ಥಿಗಳಿಗೆ 10ವರ್ಷ ಮತ್ತು ಮಾಜಿ ಸೈನಿಕ ಅಭ್ಯರ್ಥಿಗೆ 8 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ : ಐಬಿಪಿಎಸ್ ಕ್ಲರ್ಕ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಎರಡು ಹಂತದ ಆನ್‌ಲೈನ್‌ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಮೊದಲು ಆನ್‌ಲೈನ್ ಪ್ರಿಲಿಮಿನರಿ ಪರೀಕ್ಷೆಯನ್ನು ನಡೆಸಲಾಗುವುದು ಇದರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಆನ್‌ಲೈನ್‌ ಮುಖ್ಯ ಪರೀಕ್ಷೆಯನ್ನು ಎದುರಿಸಲು ಅರ್ಹರಾಗಿರುತ್ತಾರೆ.
ಅರ್ಜಿ ಶುಲ್ಕ: ಅರ್ಜಿ ದಾರರು ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಂಗವಿಕಲ ಮತ್ತು ಮಾಜಿಸೈನಿಕ ಅಭ್ಯರ್ಥಿಗಳು 100/-ರೂ ಮತ್ತು ಸಾಮಾನ್ಯ ಅಭ್ಯರ್ಥಿಗಳು 600/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ನ ಅಧಿಕೃತ ವೆಬ್‌ಸೈಟ್‌ https://www.ibps.in/ ಗೆ ಭೇಟಿ ನೀಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಆನ್‌ಲೈನ್ ಮೂಲಕವೇ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 9,2019ರೊಳಗೆ ಅರ್ಜಿ ಸಲ್ಲಿಸಬೇಕು.

ಮುಖ್ಯ ದಿನಾಂಕಗಳು:

ಸಲ್ಲಿಸಲು ಆರಂಭ ದಿನಾಂಕ : ಸೆಪ್ಟೆಂಬರ್ 17,2019, ಕೊನೆಯ ದಿನಾಂಕ : ಅಕ್ಟೋಬರ್ 9,2019

ಪ್ರವೇಶ ಪತ್ರ ಬಿಡುಗಡೆಯ ದಿನಾಂಕ (ಪ್ರಿಲಿಮಿನರಿ ) : ನವೆಂಬರ್ ,2019

ಆನ್‌ಲೈನ್ ಪರೀಕ್ಷೆಯ (ಪ್ರಿಲಿಮಿನರಿ) ದಿನಾಂಕ : ಡಿಸೆಂಬರ್ 7,8,14 ಮತ್ತು 21,2019

ಫಲಿತಾಂಶ ಬಿಡುಗಡೆ : ಡಿಸೆಂಬರ್ 2019 / ಜನವರಿ 2020

ಹೆಚ್ಚಿನ ಮಾಹಿತಿಗಾಗಿ: https://kannada.careerindia.com/downloads/2019/9/Notification-IBPS-CRP-Clerk-IX.pdf ಕ್ಲಿಕ್ ಮಾಡಿ.