ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ IDBI ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
177

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ IDBI ಬ್ಯಾಂಕ್ ನೇಮಕಾತಿ 600 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ ಜುಲೈ 3,2019 ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು: (Name Of The Posts): ಅಸಿಸ್ಟೆಂಟ್ ಮ್ಯಾನೇಜರ್

ಸಂಸ್ಥೆ (Organisation): ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ ಬ್ಯಾಂಕ್)

ವಿದ್ಯಾರ್ಹತೆ (Educational Qualification): ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

ವಯೋಮಿತಿ: ಜೂನ್ 1,2019ರ ಅನ್ವಯ ಅಸಿಸ್ಟೆಂಟ್ ಮ್ಯಾನೇಜರ್ (ಎಎಂ) ಹುದ್ದೆಗಳಿಗೆ ಕನಿಷ್ಟ 21 ರಿಂದ ಗರಿಷ್ಟ 28 ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯನ್ನು ಓದಬಹುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಆನ್‌ಲೈನ್‌ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳು 150/-ರೂ ಮತ್ತು ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 700/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.

ತರಬೇತಿಯ: ಅಭ್ಯರ್ಥಿಗಳನ್ನು ಬೆಂಗಳೂರಿನ ‘ಮಣಿಪಾಲ್‌ ಗ್ಲೋಬಲ್‌ ಎಜುಕೇಶನ್‌ ಸರ್ವೀ‍ಸಸ್‌ ಪ್ರೈವೆಟ್‌ ಲಿಮಿಟೆಡ್‌ನಲ್ಲಿ’ ನೀಡಲಾಗುವ ‘ಬ್ಯಾಂಕಿಂಗ್‌ ಮತ್ತು ಫೈನಾನ್ಸ್‌’ ಎಂಬ
ಒಂದು ವರ್ಷದ ಸ್ನಾತಕೋತ್ತರ ಡಿಪ್ಲೊಮಾ ಕೋರ್ಸ್‌ಗೆ ಆಯ್ಕೆ ಮಾಡುತ್ತದೆ. ಈ ಕೋರ್ಸನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದವರನ್ನು ಮಾತ್ರ ‘ಎ’ ಗ್ರೇಡ್‌ನ ಅಸಿಸ್ಟೆಂಟ್‌ ಮ್ಯಾನೇಜರ್‌ ಹುದ್ದೆಗೆ ನೇಮಿಸಿಕೊಳ್ಳಲಾಗುತ್ತದೆ. ಜುಲೈ 27ರಂದು ಆನ್‌ಲೈನ್‌ ಪರೀಕ್ಷೆ ನಡೆಯಲಿದ್ದು, ಇದರಲ್ಲಿ ತೇರ್ಗಡೆಯಾಗಿರುವ ಅಭ್ಯರ್ಥಿಗಳನ್ನು ಸಂದರ್ಶನ ನಡೆಸಿ ಈ ಕೋರ್ಸ್‌ಗೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಐಡಿಬಿಐ ನ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 3,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ: https://kannada.careerindia.com/downloads/2019/6/Detailed-Advertisment-MGES-2019-20.pdf ಕ್ಲಿಕ್ ಮಾಡಿ.