IDBI ಬ್ಯಾಂಕ್ ನೇಮಕಾತಿ 500 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
321

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಐಡಿಬಿಐ ಬ್ಯಾಂಕ್ ನೇಮಕಾತಿ 500 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ ಏಪ್ರಿಲ್ 15.2019ರೊಳಗೆ ಅರ್ಜಿ ಸಲ್ಲಿಸಬೇಕು.

Also read: ಸಿಂಡಿಕೇಟ್ ಬ್ಯಾಂಕ್-ನಲ್ಲಿ ಖಾಲಿಯಿರುವ 129 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಅಸಿಸ್ಟೆಂಟ್ ಮ್ಯಾನೇಜರ್

ವಿದ್ಯಾರ್ಹತೆ (Educational Qualification): ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಹೊಂದಿರಬೇಕು.

ವಯೋಮಿತಿ: ಅರ್ಜಿದಾರರು ಕನಿಷ್ಟ 20 ರಿಂದ ಗರಿಷ್ಟ 28 ವರ್ಷ ವಯೋಮಿತಿಯನ್ನು ಹೊಂದಿರಬೇಕು

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ಅರ್ಜಿ ಶುಲ್ಕ: ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಸಾಮಾನ್ಯ ಅಭ್ಯರ್ಥಿಗಳು 700/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಂಗವಿಕಲ ಅಭ್ಯರ್ಥಿಗಳು 150/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.

ಅರ್ಜಿ ಸಲ್ಲಿಸುವ ವಿಧಾನ: ಅರ್ಹ ಅಭ್ಯರ್ಥಿಗಳು ಐಡಿಬಿಐ ನ ಅಧಿಕೃತ ವೆಬ್‌ಸೈಟ್ https://www.idbi.com/index.asp# ಗೆ ಹೋಗಿ ಅರ್ಜಿಯನ್ನು ಭರ್ತಿ ಮಾಡಿ ಏಪ್ರಿಲ್ 15,2019 ರೊಳಗೆ ಸಲ್ಲಿಸಬೇಕಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ: https://www.idbi.com/pdf/careers/Detailed-Advertisment-AM.pdf ಕ್ಲಿಕ್ ಮಾಡಿ.