ಭಾರತೀಯ ರೈತರ ರಸಗೊಬ್ಬರ ಸಹಕಾರ ನಿಗಮ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
149

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಭಾರತೀಯ ರೈತರ ರಸಗೊಬ್ಬರ ಸಹಕಾರ ನಿಗಮವು (IFFCO) ಕೃಷಿ ಪದವೀಧರ ತರಬೇತಿ (ಎಜಿಟಿ) ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 5,2019 ರೊಳಗೆ ಅರ್ಜಿ ಸಲ್ಲಿಸಬೇಕು.

Also read: ಕೃಷಿ ವಿಶ್ವವಿದ್ಯಾಲಯವು ವಿಷಯ ತಜ್ಞರು ಕೃಷಿ ಹವಾಮಾನ ವೀಕ್ಷಕ ಹುದ್ದೆಗಳಿಗೆ ನೇರ ಸಂದರ್ಶನ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ

ಹುದ್ದೆಯ ಹೆಸರು (Name Of The Posts): ಕೃಷಿ ಪದವೀಧರ ತರಬೇತಿ (ಎಜಿಟಿ)

ಸಂಸ್ಥೆ (Organisation): ಭಾರತೀಯ ರೈತರ ರಸಗೊಬ್ಬರ ಸಹಕಾರ ನಿಗಮ (IFFCO)

ವಿದ್ಯಾರ್ಹತೆ (Educational Qualification): ಈ ಹುದ್ದೆಗಳಿಗೆ ಬಿ.ಎಸ್ಸಿ (ಕೃಷಿ) ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು

ವಿದ್ಯಾರ್ಹತೆ (Job Location): ಭಾರತದೆಲ್ಲೆಡೆ

ವಯೋಮಿತಿ: ಸೆಪ್ಟೆಂಬರ್ 1,2019 ರ ಅನ್ವಯ ಗರಿಷ್ಟ 3೦ ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ಓದಿ ತಿಳಿಯಬಹುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ .

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ http://www.iffco.in/ ಗೆ ಹೋಗಿ ಕೇಳಲಾಗಿರುವ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 5,2019 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ: http://www.iffco.in/ ಕ್ಲಿಕ್ ಮಾಡಿ.