ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡದಲ್ಲಿ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಯನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಿಕೊಂಡು ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 29,2019ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
Also read: ಸ್ಟಾಫ್ ಸೆಲೆಕ್ಷನ್ ಕಮಿಷನ್ ನಲ್ಲಿ ಖಾಲಿ ಇರುವ ವಿವಿಧ 10 ಸಾವಿರ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!
ಹುದ್ದೆಗೆ ಸಂಬಂಧಪಟ್ಟ ಮಾಹಿತಿ:
ಹುದ್ದೆಯ ಹೆಸರು (Name Of The Posts): ಪ್ರಾಜೆಕ್ಟ್ ಅಸಿಸ್ಟೆಂಟ್
ಸಂಸ್ಥೆ (Organisation): ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ ಧಾರವಾಡ)
ವಿದ್ಯಾರ್ಹತೆ (Educational Qualification): ಎಂ.ಎಸ್ಸಿ ಜೊತೆಗೆ ಗೇಟ್ ಮತ್ತು ಎನ್ಇಟಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ / ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಉದ್ಯೋಗ ಸ್ಥಳ (Job Location): ಧಾರವಾಡ (ಕರ್ನಾಟಕ)
ವೇತನ (Salary Scale): ತಿಂಗಳಿಗೆ 20,000/- ರೂ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Application End Date): November 29, 2019
ವಯೋಮಿತಿ: ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಲು ಅರ್ಹರು.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.
ಸಂದರ್ಶನದ ವಿವರ: ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 29,2019ರಂದು ಬೆಳಗ್ಗೆ 10 ಗಂಟೆಗೆ ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಸಂದರ್ಶನ ನಡೆಯುವ ಸ್ಥಳ: ಐಐಟಿ ಧಾರವಾಡ, ವಾಲ್ಮಿ ಕ್ಯಾಂಪಸ್, ಉಚ್ಚ ನ್ಯಾಯಾಲಯ ಹತ್ತಿರ,
ಧಾರವಾಡ-580011.
ಹೆಚ್ಚಿನ ಮಾಹಿತಿಗಾಗಿ: http://www.iitdh.ac.in/ ಕ್ಲಿಕ್ ಮಾಡಿ.