ಬದುಕು ಹಾಸನಾಗಲು ಈ ರಾಮ ನಾಮ ಜಪವೊಂದೇ ಸಾಕು, ದಿನಾಗಲು ಇದನ್ನು ಪಠಿಸಿ ನಿಮ್ಮ ಜೀವನದಲ್ಲಿ ಬದಲಾವಣೆ ಕಾಣಿ!!

0
2800

“ರಾಮಾಯ ರಾಮ ಭದ್ರಾಯ ರಾಮ ಚಂದ್ರಾಯ ವೇದಸೆ

ರಘುನಾಥಾಯ ನಾಥಾಯ ಸೀತಾಯ ಪತಯೇ ನಮಃ”

Also read: “ಶ್ರೀ ವಿಷ್ಣುಸಹಸ್ರನಾಮದಲ್ಲಿ ಶ್ರೀ ರಾಮ ರಾಮ ರಾಮೇತಿ ಶ್ಲೋಕದ ಮಹಿಮೆ.”

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ರಾಮ ನವಮಿಯ ಇನ್ನೊಂದು ವಿಶೇಷತೆ ರಾಮ ನಾಮ ಬರೆಯುವುದು. ರಾಮ ನಾಮದ ಮಹಿಮೆ ಅಪಾರ. ಇದನ್ನು ತಾರಕ ನಾಮ ಎಂದೂ ಹೇಳುತ್ತಾರೆ. (ತಾರಕ = ಸಂರಕ್ಷಕ, ಕಾಪಾಡುವವನು, ಪಾರುಮಾಡುವುದು) ರಾಮ ನಾಮವನ್ನು ಜಪಿಸಿದರೆ ಅವನು ನಮ್ಮನ್ನು ಸದಾ ಸಂರಕ್ಷಿಸಿ, ಕಾಪಾಡುತ್ತಾನೆ. ರಾಮನ ಧ್ಯಾನಕ್ಕೆ ರಾಮನಾಮ ಬರೆಯುವುದು ಒಂದು ಉತ್ತಮ ಸಾಧನ. “ರಾಮ” “ಶ್ರೀ ರಾಮ” “ಶ್ರೀ ರಾಮ ಜಯ ರಾಮ” “ಶ್ರೀ ರಾಮ ಜಯ ರಾಮ ಜಯ ಜಯ ರಾಮ” ಇತ್ಯಾದಿ – ನಿಮಗೆ ಇಷ್ಟವಾದ ನಾಮವನ್ನು ಜಪಿಸಬಹುದು. ರಾಮ ನವಮಿಯ ದಿನ ರಾಮ ನಾಮ ಬರೆದರೆ ಅತಿ ಉತ್ತಮ. ನಿಮ್ಮ ಕೈಲಾದಷ್ಟು ನಾಮ ಬರೆಯಬಹುದು, ಕನಿಷ್ಠ ಪಕ್ಷ 9 ನಾಮಗಳನ್ನಾದರೂ ಬರೆಯಿರಿ. ಇದನ್ನು ಮಕ್ಕಳೂ ಬರೆಯಬಹುದು.

ರಾಮ ನಾಮ ಜಪದಿಂದ ರತ್ನಾಕರನೆಂಬ ಸಾಮಾನ್ಯ ವ್ಯಕ್ತಿ ಮಹರ್ಷಿ ವಾಲ್ಮೀಕಿಯಾದ ಬಗ್ಗೆ ನಿಮಗೆ ಗೊತ್ತ…!?

Also read: ನೀವು ಯಾಕೆ ವಿಷ್ಣು ಸಹಸ್ರನಾಮ ಪಠಿಸಬೇಕು… ಇದನ್ನು ಓದಿ….

ಹಿಂದೊಮ್ಮೆ ರತ್ನಾಕ(ವಾಲ್ಮೀಕಿ)ರನು ನಾರದರನ್ನು ಕಟ್ಟಿಹಾಕಿ ತನ್ನ ಮನೆಗೆ ಹೋದನು. ಅವನು ತನ್ನ ಕುಟುಂಬದವರನ್ನೆಲ್ಲಾ ಕೇಳಿದನು – “ನೀವೆಲ್ಲರೂ ನನ್ನ ಪಾಪದಲ್ಲಿ ಭಾಗಿಗಳಾಗುವಿರೋ, ಅಥವಾ ಕೇವಲ ನನ್ನ ಸಂಪತ್ತಿಗೆ ಪಾಲುದಾರರೋ?” ಅವರೆಲ್ಲರೂ ಹೇಳಿದ್ದು ಹೆಚ್ಚೂ ಕಡಿಮೆ ಒಂದೇ ರೀತಿಯಲ್ಲಿತ್ತು – “ಒಡಲ ಹೊರುವುದು ಗೊತ್ತು, ಪಾಪ ನಿಮ್ಮಯ ಸೊತ್ತು”. ನೀನು ಯಾವ ರೀತಿಯಿಂದ ಧನವನ್ನು ತರುವೆಯೋ ಅದು ನಿನಗೆ ಗೊತ್ತು. ನಾವು ನಿನ್ನ ಪಾಪದಲ್ಲಿ ಹೇಗೆ ತಾನೇ ಪಾಲುದಾರರಾದೇವು! ಎಂದು ಕುಟುಂಬದವರು ಹೇಳಿದಾಗ ತನ್ನ ಕುಟುಂಬದವರ ಮಾತನ್ನು ಕೇಳಿ ರತ್ನಾಕರನ ಹೃದಯಕ್ಕೆ ಆಘಾತವಾಯಿತು. ಅವನ ಅರಿವಿನ ಕಣ್ಣು ತೆರೆಯಿತು. ಅವನು ಬೇಗನೇ ಕಾಡಿಗೆ ಹೋಗಿ ನಾರದರ ಬಂಧನವನ್ನು ಬಿಡಿಸಿ, ವಿಲಪಿಸುತ್ತಾ ಅವರ ಚರಣಗಳಲ್ಲಿ ಕುಸಿದುಬಿದ್ದನು. ಅವನ ಪ್ರಲಾಪದಲ್ಲಿ ಆಳವಾದ ಪಶ್ಚಾತ್ತಾಪ ತುಂಬಿತ್ತು. ನಾರದರು ಅವನಿಗೆ ಧೈರ್ಯಹೇಳಿ ರಾಮನಾಮದ ಉಪದೇಶ ನೀಡಿದರು.

Also read: ರಾಮ ನಾಮವನ್ನು ಜಪಿಸಿದರೆ ಅವನು ನಮ್ಮನ್ನು ಸದಾ ಸಂರಕ್ಷಿಸಿ, ಕಾಪಾಡುತ್ತಾನೆ

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಆದರೆ ಹಿಂದೆ ಮಾಡಿದ ಪಾಪಗಳಿಂದಾಗಿ ಅವನಿಗೆ ರಾಮನಾಮವನ್ನು ಉಚ್ಚರಿಸಲಾಗಲಿಲ್ಲ. ಆಗ ನಾರದರು ಯೋಚಿಸಿ ‘ಮರಾ-ಮರಾ’ ಎಂದು ಜಪಿಸಲು ಹೇಳಿದರು. ಮರ ಅವನಿಗೆ ಪರಿಚಿತವಾದ್ದರಿಂದ ಹಾಗೇ ಜಪಿಸತೊಡಗಿದನು. ಮರಾ-ಮರಾ ಎಂದು ನಿರಂತರ ಹೇಳುವುದರಿಂದ ರಾಮ-ನಾಮದ ಉಚ್ಚಾರವು ಸಹಜವಾಗೆಂಬಂತೆ ಆಯಿತು. ಇದನ್ನೇ ದಾಸರು “ಆ ಮರ ಈ ಮರ ಎಂದು ಧ್ಯಾನಿಸುವಾಗ, ರಾಮ ರಾಮ ಎಂಬ ನಾಮವೇಕಾಯಿತೋ” ಎಂದು ಹಾಡಿರುವುದು. ನಾರದರಿಂದ ಉಪದೇಶ ಪಡೆದು ರತ್ನಾಕರನು ನಾಮಜಪದಲ್ಲಿ ಮುಳುಗಿಹೋದನು. ಹಲವಾರು ವರ್ಷಗಳವರೆಗೆ ನಾಮಜಪದ ಪ್ರಬಲ ನಿಷ್ಠೆಯಿಂದ ಅವನ ಸಮಸ್ತ ಪಾಪಗಳೂ ತೊಳೆದುಹೋದವು. ಅವನ ಶರೀರದ ಮೇಲೆ ಹುತ್ತ ಬೆಳೆಯಿತು. ಹುತ್ತಕ್ಕೆ ವಲ್ಮೀಕವೆಂದು ಹೇಳುವರು. ದೈವ ಸಾಕ್ಷಾತ್ಕಾರದಿಂದ ವಲ್ಮೀಕದಿಂದ ಹೊರಬಂದ ಕಾರಣದಿಂದ ಅವನ ಹೆಸರು ವಾಲ್ಮೀಕಿ ಎಂದಾಯಿತು. ಮಹರ್ಷಿಗಳಾದ ವಾಲ್ಮೀಕಿಗಳು ಪ್ರಪಂಚದಲ್ಲಿ ಲೌಕಿಕ ಛಂದಸ್ಸುಗಳ ಆದಿಕವಿಗಳೇ ಆದರು. ಈ ವಾಲ್ಮೀಕಿ ಮಹರ್ಷಿಗಳು ಬ್ರಹ್ಮನ ಅನುಗ್ರಹದಿಂದ ರಾಮಾಯಣವನ್ನು ರಚಿಸಿದರು ಎಂಬುದು ಭಾರತೀಯ ನಂಬಿಕೆ. ಬ್ರಹ್ಮನ ಮಡದಿಯಾದ ವಾಗ್ದೇವಿ ತಾನಾಗಿಯೇ ವಾಲ್ಮೀಕಿಯ ನಾಲಿಗೆಯಲ್ಲಿದು ರಾಮಾಯಣವನ್ನು ಹೊರಹೊಮ್ಮಿಸಿದಳು ಎಂಬುದು ಭಕ್ತಿಪೂರ್ಣ ಭಾರತೀಯ ಭಾವವಾಗಿದೆ.