ಲೋಕಸಭಾ ಚುನಾವಣೆಯಲ್ಲಿ ಮೋದಿ ಗೆದ್ದು ಅಧಿಕಾರಕ್ಕೆ ಬಂದರೆ ಭಾರತದೊಂದಿಗೆ ಶಾಂತಿ ಮಾತುಕತೆಗೆ ಉತ್ತಮ ಅವಕಾಶ; ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌..

0
362

ದೇಶದಲ್ಲಿ ಚುನಾವಣೆ ಕಾಯು ಹೆಚ್ಚುತ್ತಿದ್ದು, ಮೋದಿಯವರ ಗೆಲ್ಲುವಿಕೆ ಬಗ್ಗೆ ಎಲ್ಲೆಡೆ ಮಾತುಗಳು ಕೇಳಿಬರುತ್ತಿವೆ ಒಂದು ವೇಳೆ ಮತ್ತೆ ಮೋದಿಯವರು ಗೆದ್ದರೆ ಭಾರತ ದೇಶದಲ್ಲಿ ಮತ್ತಷ್ಟು ಬದಲಾವಣೆಗಳು ಕಂಡು ಬರಲಿವೆ ಎನ್ನುವುದು ಮೋದಿ ವಾದಿಗಳ ಮಾತಾಗಿದೆ. ಇದೆ ವಿಷಯಕ್ಕೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಮಾತನಾಡಿದ್ದು, ಮತ್ತೆ ಪ್ರಧಾನಿ ಮೋದಿ ಅವರ ಭಾರತೀಯ ಜನತಾ ಪಕ್ಷ 2019ರ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದರೆ ಭಾರತದೊಂದಿಗೆ ಶಾಂತಿ ಮಾತುಕತೆಗೆ ಉತ್ತಮ ಅವಕಾಶ ಒದಗುತ್ತದೆ ಮತ್ತು ಕಾಶ್ಮೀರ ಪ್ರಶ್ನೆಯನ್ನು ಇತ್ಯರ್ಥ ಮಾಡುವುದಕ್ಕೆ ಸಾಧ್ಯವಾಗುತ್ತದೆ’ ಎಂದು ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌ ಹೇಳಿದ್ದಾರೆ.

Also read: ಮೋದಿಯವರು ಕೊಟ್ಟ ಮಾತಿನಂತೆ ಪಾಕಿಸ್ತಾನದ ಮೇಲೆ ಮೊದಲ ಬಾಂಬ್ ಪ್ರಯೋಗ; ಒಂದೇ ವಾರದಲ್ಲಿ ಬಿಕಾರಿಯಾದ ಪಾಕಿಸ್ತಾನ..

ಹೌದು ಭಾರತದಿಂದ ಪಾಕಿಸ್ತಾನಕ್ಕೆ ಭಯ ಹೆಚ್ಚುತ್ತಿದೆ. ಈಗಾಗಲೇ ಪುಲ್ವಾಮ ದಾಳಿಯಿಂದ ಪಾಕಿಸ್ತಾನದ ಮೇಲೆ ಆಗಿರುವ ನಷ್ಟದಿಂದ ಪಾಕ್ ಹೊರಬರಲು ಇನ್ನು ಹಲವು ದಿನಗಳು ಬೇಕು ಎನ್ನುವುದು ತಿಳಿದಿದೆ. ಇದೆಲ್ಲ ಹಿನ್ನೆಲೆಯಲ್ಲಿ ಮತ್ತೆ ಮೋದಿಯವರು ಅಧಿಕಾರಕ್ಕೆ ಬಂದರೆ ಏನೆಲ್ಲಾ ಎದುರಿಸಬೇಕು ಎನ್ನುವ ಆತಂಕದಲ್ಲಿ ಪಾಕ್ ಪ್ರಧಾನಿ ಶಾಂತಿ ಮಾತುಕತೆಗೆ ತಯಾರಿ ನಡೆಸಿದ್ದಾರೆ ಎನ್ನುವುದಕ್ಕೆ ಇಮ್ರಾನ್‌ ಖಾನ್‌ ಸಂದರ್ಶನವೊಂದರಲ್ಲಿ ಹೇಳಿದ್ದು. ಲೋಕಸಭಾ ಚುನಾವಣೆ ಬಳಿಕ ಭಾರತದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ ಪಾಕಿಸ್ತಾನದ ಜೊತೆಗಿರುವ ಕಾಶ್ಮೀರದ ಸಮಸ್ಯೆ ಬಗೆಹರಿಸಲು ಸ್ವಲ್ಪ ಭಯಪಡುವ ಸಾಧ್ಯತೆಯಿದೆ.

ಒಂದು ವೇಳೆ ಬಲಪಂಥೀಯ ಪಕ್ಷವಾದ ಬಿಜೆಪಿಯು ಅಧಿಕಾರಕ್ಕೆ ಬಂದರೆ ಸಮಸ್ಯೆಗೆ ಕೆಲವು ಪರಿಹಾರಗಳನ್ನು ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದ ಅವರು, ಭಾರತದಲ್ಲಿ ಈಗ ನಡೆಯುತ್ತಿರುವ ಬೆಳವಣಿಗೆಯನ್ನು ನೋಡುತ್ತೇನೆ ಎಂದು ಯಾವತ್ತೂ ಯೋಚನೆ ಮಾಡಿರಲಿಲ್ಲ. ಭಾರತದಲ್ಲಿ ಮುಸ್ಲಿಂ ಮತ್ತು ಮುಸ್ಲಿಮೇತರ ಮೇಲೆ ದಾಳಿ ಮಾಡಲಾಗುತ್ತಿದೆ. ಭಾರತೀಯ ಮುಸ್ಲಿಮರು ಹಲವು ವರ್ಷಗಳಿಂದಲೂ ತಮ್ಮ ಪರಿಸ್ಥಿತಿಯ ಬಗ್ಗೆ ಸಂತೋಷವಾಗಿದ್ದರು. ಆದರೆ ಈಗ ತೀವ್ರ ಹಿಂದೂ ರಾಷ್ಟ್ರೀಯತೆಯಿಂದಾಗಿ ಅವರಲ್ಲಿ ಆತಂಕ ಶುರುವಾಗಿದೆ ಎಂದು ಹೇಳಿಕೆ ನೀಡಿದ್ದಾರೆ.

Also read: ಮೋದಿ ಹೇಳಿದ ರೀತಿಯಲ್ಲಿ ಪುಲ್ವಾಮಾ ದಾಳಿಗೆ ಪ್ರತೀಕಾರ; ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ದಾಳಿ ನಡೆಸಿದ ಭಾರತೀಯ ಯುದ್ಧ ವಿಮಾನಗಳು..

ಕಾಶ್ಮೀರದ ವಿಶೇಷ ಸ್ಥಾನಮಾನದ ಬಗ್ಗೆ ಇಮ್ರಾನ್

ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಂತೆ ಭಯ ಮತ್ತು ರಾಷ್ಟ್ರೀಯತೆ ಭಾವದಿಂದಲೇ ಅಧಿಕಾರಕ್ಕೆ ಬಂದವರು. ಜಮ್ಮು ಮತ್ತು ಕಾಶ್ಮೀರದ ಜನರಿಗೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಪಡಿಸುವ ಭರವಸೆಯನ್ನು ಬಿಜೆಪಿಯು ದಶದ ಜನತೆ ನೀಡಿದೆ. ಇದು ಜಮ್ಮು-ಕಾಶ್ಮೀರದ ಜನರ ಆತಂಕಕ್ಕೆ ಕಾರಣವಾಗಿದ್ದು, ಇದು ಚಿಂತಿಸಬೇಕಾದ ವಿಷಯವಾಗಿದೆ. ಮತ್ತು ಪಾಕಿಸ್ತಾನ ಮೂಲದ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆ ಪುಲ್ವಾಮಾ ದಾಳಿಯನ್ನು ಮಾಡಿದೆ ಎನ್ನಲಾಗಿತ್ತು. ಇದು ಪಾಕಿಸ್ತಾನದ ಗಡಿ ದಾಟಿ ಭಾರತೀಯ ವಾಯು ಪಡೆ ವಿಮಾನಗಳು ಬಂದು ಉಗ್ರರ ಮೂರು ತರಬೇತಿ ನೆಲೆಯ ಮೇಲೆ ಬಾಂಬ್ ದಾಳಿ ಮಾಡಲು ಪ್ರೇರಣೆ ನೀಡಿತ್ತು ಎಂದು ಏರ್ ಸ್ಟ್ರೈಕ್ ವಿಚಾರವಾಗಿ ಮಾತನಾಡಿದ್ದಾರೆ.

Also read: ಭಾರತದ ಮೇಲೆ ಪಾಕ್ ನಡೆಸಿದ ಕುತಂತ್ರದ ಹಿಂದೆ ಇರುವ ಕಂತ್ರಿ ನಾಯಿ ಬುದ್ದಿಯ ಸಂಪೂರ್ಣ ಮಾಹಿತಿ ವಿವರಿಸಿದ ಪಾಕ್ ಮಾಜಿ ಅಧ್ಯಕ್ಷ ಪರ್ವೇಜ್​ ಮುಷರಫ್..

ಈಗ ಈ ವಿಷಯವಾಗಿ ವಿರೋಧ ಪಕ್ಷಗಳು ಟೀಕೆ ಮಾಡುತ್ತಿದ್ದು, ಪಾಕಿಸ್ಥಾನವು ಪ್ರಧಾನಿ ನರೇಂದ್ರ ಮೋದಿ ಅವರ ಜತೆಗೆ ಹೊಂದಾಣಿಕೆ ಮಾಡಿಕೊಂಡಿದೆ. ಪಾಕಿಸ್ಥಾನ ಮೋದಿ ಜತೆ ಹೊಂದಾಣಿಕೆ ಮಾಡಿಕೊಂಡಿರುವುದಕ್ಕೆ ಮಾಧ್ಯಮ ವರದಿ ಸಾಕ್ಷಿಯಾಗಿದೆ ಎಂದು ಕಾಂಗ್ರೆಸ್ ವಕ್ತಾರ ರಣ್ದೀಪ್ ಸುರ್ಜೆವಾಲಾ ಆರೋಪಿಸಿ ಕಾಶ್ಮೀರ ಪ್ರಶ್ನೆಯನ್ನು ಇತ್ಯರ್ಥಪಡಿಸಲು ಭಾರತದ ಇತರ ಪಕ್ಷಗಳು ಯತ್ನಿಸಿದಲ್ಲಿ ಬಲಪಂಥೀಯರ ಟೀಕೆ, ಖಂಡನೆಗಳಿಗೆ ತುತ್ತಾಗಬೇಕಾದೀತೆಂಬ ಭಯ ಅವುಗಳಿಗೆ ಇದೆ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಟ್ವೀಟ್‌ ಮಾಡಿರುವ ಸುರ್‌ಜೇವಾಲಾ ಅವರು ಪಾಕಿಸ್ಥಾನ ಮೋದಿ ಜತೆಗೆ ಅಧಿಕೃತ ಹೊಂದಾಣಿಕೆ ಮಾಡಿಕೊಂಡಿದೆ; ಮೋದಿಗೆ ಓಟ್‌ ಹಾಕಿದರೆ ಪಾಕಿಸ್ಥಾನಕ್ಕೆ ಓಟ್‌ ಹಾಕಿದ ಹಾಗೆ ಎಂದು ಟೀಕಿಸಿದ್ದಾರೆ.