ಭಾರತೀಯ ವಾಯುಪಡೆಯು ಗ್ರೂಪ್ Y ಹುದ್ದೆಗಳಿಗೆ ಜುಲೈ 17, 19 ಮತ್ತು 21 ರಂದು ರ್ಯಾಲಿ ಇಂದೇ ಅರ್ಜಿ ಸಲ್ಲಿಸಿ..

0
404

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಭಾರತೀಯ ವಾಯುಪಡೆಯು ಗ್ರೂಪ್ Y ಹುದ್ದೆಗಳಿಗೆ ಜುಲೈ 17,19 ಮತ್ತು 21 ರಂದು ರ್ಯಾಲಿ ನಡೆಸುತ್ತಿದೆ. ಆಸಕ್ತ ಅವಿವಾಹಿತ ಪುರಷ ಅಭ್ಯರ್ಥಿಗಳು ಈ ಅವಕಾಶ ಪಡೆಯಬಹುದು. ರ್ಯಾಲಿಯಲ್ಲಿ ಪಾಲ್ಗೊಳ್ಳಲು ಆನ್‌ಲೈನ್‌ನಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 15,2019 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.

Also read: ಸಾರ್ವಜನಿಕ ಶಿಕ್ಷಣ ಇಲಾಖೆ 22,150 ಅತಿಥಿ ಶಿಕ್ಷಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಗ್ರೂಪ್ Y

ಸಂಸ್ಥೆ (Organisation): ಭಾರತೀಯ ವಾಯುಪಡೆ

ವಿದ್ಯಾರ್ಹತೆ (Educational Qualification): ಹುದ್ದೆಗಳಿಗೆ ಪಿಯುಸಿ / 10+2 ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದಿರುವ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ರ್ಯಾಲಿಯಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ: ಕನಿಷ್ಟ 18 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ರ್ಯಾಲಿಯಲ್ಲಿ ಪಾಲ್ಗೊಳ್ಳಬಹುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಭಾರತೀಯ ವಾಯುಪಡೆಯ ಅಧಿಕೃತ ವೆಬ್‌ಸೈಟ್‌ http://indianairforce.nic.in/ ಗೆ ಹೋಗಿ ಆನ್‌ಲೈನ್‌ನಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 15,2019 ರೊಳಗೆ ಅರ್ಜಿ ಸಲ್ಲಿಸಬಹುದು.