ಇಂಡಿಯನ್‌ ಏರ್‌ಫೋರ್ಸ್‌ನಲ್ಲಿ ಗ್ರೂಪ್ ‘X’ & ಗ್ರೂಪ್ ‘Y’ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ…

0
204

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಇಂಡಿಯನ್ ಏರ್‌ಫೋರ್ಸ್‌ ನೇಮಕಾತಿ ಗ್ರೂಪ್ ‘X’ & ಗ್ರೂಪ್ ‘Y’ ಟ್ರೇಡ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಪಿಯುಸಿ ಅಥವಾ 10+2 ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ ಜುಲೈ 15,2019 ರೊಳಗೆ ಅರ್ಜಿ ಸಲ್ಲಿಸಬೇಕು.

Also read: ಇಂಡಿಯನ್ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೋರೇಷನ್ ಲಿಮಿಟೆಡ್ ಮೇಲ್ವಿಚಾರಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಗ್ರೂಪ್ ‘X’ & ಗ್ರೂಪ್ ‘Y’

ಸಂಸ್ಥೆ (Organisation): ಇಂಡಿಯನ್ ಏರ್‌ಫೋರ್ಸ್‌

ವಿದ್ಯಾರ್ಹತೆ (Educational Qualification): ಪಿಯುಸಿ ಅಥವಾ 10+2 ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಗರಿಷ್ಟ 21 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಶುಲ್ಕ: ಅರ್ಜಿದಾರರು ಆನ್‌ಲೈನ್ ಮೂಲಕ 250/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ವಿವಿಧ ಪರೀಕ್ಷೆಗಳನ್ನು ಮಾಡುವ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸ್ಲಲಿಸುವ ವಿಧಾನ: ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ http://indianairforce.nic.in/ ನಲ್ಲಿ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಜುಲೈ 1 ರಿಂದ ಜುಲೈ 15,2019 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ: www.airmenselection.cdac.in ಕ್ಲಿಕ್ ಮಾಡಿ.