ಭಾರತೀಯ ಸೇನಾ ನೇಮಕಾತಿ 150 SSC, ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
152

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಭಾರತೀಯ ಸೇನಾ ನೇಮಕಾತಿ 150 SSC, ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ಅಧಿಕೃತ ವೆಬ್‌ಸೈಟ್‌ ಮೂಲಕ ಜುಲೈ 21,2019 ರೊಳಗೆ ಅರ್ಜಿ ಸಲ್ಲಿಸಬೇಕು.

Also read: ಶಿವಮೊಗ್ಗ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಎಸ್‌ಎಸ್‌ಸಿ ಅಧಿಕಾರಿ

ಸಂಸ್ಥೆ (Organisation): ಭಾರತೀಯ ಸೇನೆ

ವಿದ್ಯಾರ್ಹತೆ (Educational Qualification): ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರಾಜ್ಯ ಮೆಡಿಕಲ್ ಕೌನ್ಸಿಲ್‌ / ಎಂಸಿಐ/ಎನ್‌ಬಿಇ ನಿಂದ ಗುರುತಿಸಲ್ಪಟ್ಟ ಸ್ನಾತಕೋತ್ತರ ಪದವಿ/ ಡಿಪ್ಲೋಮ ವಿದ್ಯಾರ್ಹತೆಯನ್ನು ಮೊದಲನೇ ಅಥವಾ ಎರಡನೇ ಪ್ರಯತ್ನದಲ್ಲಿಯೇ ಉತ್ತೀರ್ಣರಾಗಿರಬೇಕು.

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ವಯೋಮಿತಿ: ಡಿಸೆಂಬರ್ 31,2019ರ ಅನ್ವಯ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಸಂದರ್ಶನ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಭಾರತೀಯ ಸೇನೆಯ ಅಧಿಕೃತ ವೆಬ್‌ಸೈಟ್‌ https://amcsscentry.gov.in/ ನಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 21,2019 ರ ಒಳಗೆ ಅರ್ಜಿಯನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ: https://amcsscentry.gov.in/ ಕ್ಲಿಕ್ ಮಾಡಿ.