ಭಾರತೀಯ ಕೋಸ್ಟ್ ಗಾರ್ಡ್ ನಾವಿಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
61

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಭಾರತೀಯ ಕೋಸ್ಟ್ ಗಾರ್ಡ್ ನಾವಿಕ (ಜನರಲ್ ಡ್ಯುಟಿ) ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಮೂಲಕ ಸೆಪ್ಟೆಂಬರ್ 1,2019ರೊಳಗೆ ಅರ್ಜಿ ಸಲ್ಲಿಸಬೇಕು.

Also read: ಕರ್ನಾಟಕ ಪೋಸ್ಟಲ್ ಸರ್ಕಲ್ 2637 ಪೋಸ್ಟ್‌ ಮಾಸ್ಟರ್‌ ಮತ್ತು ಅಂಚೆ ಸೇವಕ ಹುದ್ದೆಗಳಿಗೆ ನೇಮಕಾತಿ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ನಾವಿಕ (ಜನರಲ್ ಡ್ಯುಟಿ)

ಸಂಸ್ಥೆ (Organisation): ಭಾರತೀಯ ಕೋಸ್ಟ್ ಗಾರ್ಡ್

ವಿದ್ಯಾರ್ಹತೆ (Educational Qualification): ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10+2 /ದ್ವಿತೀಯ ಪಿಯುಸಿ ನಲ್ಲಿ ಗಣಿತ ಮತ್ತು ಭೌತಶಾಸ್ತ್ರ ವಿಷಯವನ್ನು ಅಧ್ಯಯನ ಮಾಡಿರುವುದಲ್ಲದೇ ಶೇ.50%ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದ ಬೋರ್ಡ್ / ವಿಶ್ವವಿದ್ಯಾಲಯದಿಂದ ಉತ್ತೀರ್ಣರಾಗಿರಬೇಕು.

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಟ 18 ಮತ್ತು ಗರಿಷ್ಟ 22 ವರ್ಷ ವಯೋಮಿತಿಯೊಳಗಿರಬೇಕು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ಓದಿ ತಿಳಿಯಬಹುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಫಿಸಿಕಲ್ ಫಿಟ್‌ನೆಸ್ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕದ ಬಗೆಗೆ ತಿಳಿಯಲು ಅಧಿಸೂಚನೆಯನ್ನು ಓದಬಹುದು.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ https://joinindiancoastguard.gov.in/ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 1,2019ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ: https://joinindiancoastguard.gov.in/ ಕ್ಲಿಕ್ ಮಾಡಿ.