ಭಾರತೀಯ ಕೋಸ್ಟ್ ಗಾರ್ಡ್ ನಾವಿಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
126

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಭಾರತೀಯ ಕೋಸ್ಟ್ ಗಾರ್ಡ್ ನಾವಿಕ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ ನವೆಂಬರ್ 8,2019ರೊಳಗೆ ಅರ್ಜಿ ಸಲ್ಲಿಸಬೇಕು.

Also read: ಇಲೆಕ್ಟ್ರಾನಿಕ್ ಕಾರ್ಪೋರೇಶನ್ ಆಫ್ ಇಂಡಿಯಾ 200 ಜ್ಯೂನಿಯರ್ ಟೆಕ್ನಿಕಲ್ ಅಧಿಕಾರಿ ಹುದ್ದೆಗಳ ನೇಮಕಾತಿ

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ನಾವಿಕ (ಡೊಮೆಸ್ಟಿಕ್ ಬ್ರಾಂಚ್)

ಸಂಸ್ಥೆ (Organisation) ಭಾರತೀಯ ಕೋಸ್ಟ್ ಗಾರ್ಡ್

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ವಿದ್ಯಾರ್ಹತೆ (Educational Qualification): ಅಭ್ಯರ್ಥಿಯು ರಾಜ್ಯ ಅಥವಾ ಕೇಂದ್ರಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ ಶೇ 50.ರಷ್ಟು ಅಂಕಗಳೊಂದಿಗೆ 10ನೇ ತರಗತಿಯನ್ನು ಪೂರೈಸಿರಬೇಕು.

ವಯೋಮಿತಿ: ಈ ಹುದ್ದೆಗಳಿಗೆ ಏಪ್ರಿಲ್ 1,2020ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 22 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಭಾರತೀಯ ಕೋಸ್ಟ್ ಗಾರ್ಡ್ ನ ಅಧಿಕೃತ ವೆಬ್‌ಸೈಟ್‌ https://joinindiancoastguard.gov.in/ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 8,2019ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ: https://joinindiancoastguard.gov.in/ ಈ ಮೇಲೆ ಕ್ಲಿಕ್ ಮಾಡಿ.