SSLC ಪಾಸಾದ ಅಭ್ಯರ್ಥಿಗಳಿಗೆ ಭಾರತೀಯ ನೇವಿಯಲ್ಲಿ 554 ಟ್ರೇಡ್ಸ್‌ಮ್ಯಾನ್ ಮೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ..

0
550

ಎಸ್ಎಸ್ಎಲ್ ಸಿ ಪಾಸಾದವರಿಗೆ ಸುವರ್ಣಾವಕಾಶ. ಭಾರತೀಯ ನೇವಿ 554 ಟ್ರೇಡ್ಸ್‌ಮ್ಯಾನ್ ಮೇಟ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಹುದ್ದೆಗೆ ಸಂಬಂಧಪಟ್ಟ ಸಂಪೂರ್ಣ ಮಾಹಿತಿಯನ್ನು ಅಧಿಕೃತ ವೆಬ್‌ಸೈಟ್ ನಲ್ಲಿ ತಿಳಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 15, 2019 ರವರೆಗೆ ಅರ್ಜಿಯನ್ನು ಸಲ್ಲಿಸಬೇಕು.

Also read: ಇಂಟೆಲಿಜೆನ್ಸ್ ಬ್ಯೂರೋ ವಿವಿಧ 318 ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಟ್ರೇಡ್ಸ್‌ಮ್ಯಾನ್ ಮೇಟ್

ಸಂಸ್ಥೆ (Organisation): ಇಂಡಿಯನ್‌ ನೇವಿ

ವಿದ್ಯಾರ್ಹತೆ (Educational Qualification): ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇತರಗತಿ ಅಥವಾ ಐಟಿಐ ಅಥವಾ ತತ್ಸಮಾನ
ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಬೋರ್ಡ್ ನಲ್ಲಿ ಉತ್ತೀರ್ಣರಾಗಿರಬೇಕು.

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಟ 18 ರಿಂದ ಗರಿಷ್ಟ 25 ವಯೋಮಿತಿಯನ್ನು ಹೊಂದಿರಬೇಕು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ತಿಳಿಸಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು 205/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಾಜಿ ಸೈನಿಕ/ ಅಂಗವಿಕಲ /ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿಯನ್ನು ಸಲ್ಲಿಸುವುದು https://www.joinindiannavy.gov.in/ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ: https://drive.google.com/file/d/1oP2dViX1PKgmcElWk1eko9Xa3GK9n8dX/view ಕ್ಲಿಕ್ ಮಾಡಿ.