ಭಾರತೀಯ ನೌಕಾಪಡೆ 144 ಎಸ್‌ಎಸ್‌ಸಿ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
263

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಭಾರತೀಯ ನೌಕಾಪಡೆ 144 ಎಸ್‌ಎಸ್‌ಸಿ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡುಲು ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 19,2019ರೊಳಗೆ ಅರ್ಜಿ ಸಲ್ಲಿಸಬೇಕು.

Also read: ಮಧ್ಯಮ ಹಂತದ ಆರೋಗ್ಯ ಪೂರೈಕೆದಾರ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಎಸ್‌ಎಸ್‌ಸಿ ಅಧಿಕಾರಿ

ಸಂಸ್ಥೆ (Organisation): ಭಾರತೀಯ ನೌಕಾಪಡೆ

ವಿದ್ಯಾರ್ಹತೆ (Educational Qualification): ಬಿ.ಇ/ಬಿ.ಟೆಕ್,ಎಂಬಿಎ/ಬಿ.ಎಸ್ಸಿ/ಬಿ.ಕಾಂ/ಪಿಜಿ ಡಿಪ್ಲೋಮಾ,ಎಂ.ಎಸ್ಸಿ ಮತ್ತು ಎಂಸಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ವಯೋಮಿತಿಯ ವಿವರವನ್ನು ತಿಳಿಯಲು ಅಧಿಸೂಚನೆಯನ್ನು ಓದಿಕೊಳ್ಳಬಹುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 215/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಥವಾ ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://www.joinindiannavy.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 19,2019 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.