ಭಾರತೀಯ ತೈಲ ನಿಗಮದಲ್ಲಿ 1574 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
107

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಭಾರತೀಯ ತೈಲ ನಿಗಮದಲ್ಲಿ 1574 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಅಹನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಮೂಲಕ. ನವೆಂಬರ್ 15,2019ರೊಳಗೆ ಅರ್ಜಿ ಸಲ್ಲಿಸಬೇಕು.

Also read: ಉತ್ತರ ಕೇಂದ್ರ ರೈಲ್ವೆ ಗೂಡ್ಸ್ ಗಾರ್ಡ್, ಎಎಲ್‌ಪಿ, ಜೆಇ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು: ಭಾರತೀಯ ತೈಲ ನಿಗಮ ಅಪ್ರೆಂಟಿಸ್

ಸಂಸ್ಥೆ (Organisation): ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ (ಐಓಸಿಎಲ್‌)

ವಿದ್ಯಾರ್ಹತೆ (Educational Qualification): ಅಭ್ಯರ್ಥಿಗಳು ಬಿ.ಎಸ್ಸಿ (ಭೌತಶಾಸ್ತ್ರ.ಗಣಿತ,ರಸಾಯನಶಾಸ್ತ್ರ/ಕೈಗಾರಿಕಾ ರಸಾಯನಶಾಸ್ತ್ರ),ಮೆಟ್ರಿಕ್ ಜೊತೆಗೆ ಐಟಿಐ ಕೋರ್ಸ್,ಡಿಪ್ಲೋಮಾ ಇನ್ ಕೆಮಿಕಲ್ ಇಂಜಿನಿಯರಿಂಗ್/ರಿಫೈನರಿ ಮತ್ತು ಪೆಟ್ರೋ-ಕೆಮಿಕಲ್ ಇಂಜಿನಿಯರಿಂಗ್,ಡಿಪ್ಲೋಮಾ ಇನ್ ಮೆಕ್ಯಾನಿಕಲ್ ಇಂಜಿನಿಯರಿಂಗ್, ಡಿಪ್ಲೋಮಾ ಇನ್ ಇಲೆಕ್ಟ್ರಿಕಲ್ ಇಂಜಿನಿಯರಿಂಗ್, ಡಿಪ್ಲೋಮಾ ಇನ್ ಇನ್‌ಸ್ಟ್ರುಮೆಂಟೇಶನ್/ ಇನ್‌ಸ್ಟ್ರುಮೆಂಟೇಶನ್ ಮತ್ತು ಇಲೆಕ್ಟ್ರಾನಿಕ್ಸ್ /ಇನ್‌ಸ್ಟ್ರುಮೆಂಟೇಶನ್ ಮತ್ತು ಕಂಟ್ರೋಲ್ ಇಂಜಿನಿಯರಿಂಗ್ , ಬಿ.ಎ/ಬಿ.ಕಾಂ ಮತ್ತು 12ನೇತರಗತಿ /ದ್ವಿತೀಯ ಪಿಯುಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದಿರುವ ಸಂಸ್ಥೆ / ಬೋರ್ಡ್‌ನಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಅಕ್ಟೋಬರ್ 31,2019ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಸರ್ಕಾರದ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

\ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಐಓಸಿಎಲ್‌ನ ಅಧಿಕೃತ ವೆಬ್‌ಸೈಟ್‌ https://www.iocl.com/ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 15,2019ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ: https://www.iocl.com/ ಕ್ಲಿಕ್ ಮಾಡಿ.