ಭಾರತದ 14ನೇ ರಾಷ್ಟ್ರಪತಿಯಾಗಿ ರಾಮನಾಥ್ ಕೋವಿಂದ್ ಪ್ರಮಾಣ ವಚನ ಸ್ವೀಕರಿಸಿದರು. ಮೊದಲನೇ ಟ್ವೀಟ್ ನಲ್ಲಿ ಏನ್ ಇದೆ ಇಲ್ಲಿದೆ ನೋಡಿ..!

0
559

ಸಂಸತ್​ ಭವನದ ಸೆಂಟ್ರಲ್​​​​​​ಹಾಲ್​ನಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ಜೆ.ಎಸ್. ಖೆಹರ್, ಕೋವಿಂದ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ದೇವರ ಹೆಸರಿನಲ್ಲಿ ಕೋವಿಂದ್ ಪ್ರಮಾಣ ಸ್ವಿಕರಿಸಿದರು.

indian president ram nath kovind-1

ಬಿಜೆಪಿಯಿಂದ ರಾಷ್ಟ್ರಪತಿ ಹುದ್ದೆಗೆ ಆಯ್ಕೆಯಾಗಿರುವ ಮೊದಲ ನೇತಾರ ರಾಮನಾಥ ಕೋವಿಂದ್ ದೇಶದ 14ನೇ ರಾಷ್ಟ್ರಪತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇಂದು 12.15ರ ಸಮಯದಲ್ಲಿ ದೇಶದ 14ನೇ ರಾಷ್ಟ್ರಪತಿಯಾಗಿ ಕೋವಿಂದ್ ಪ್ರಮಾಣವಚನ ಸ್ವೀಕರಿಸಿದ್ದು, ಈಶ್ವರನ ಹೆಸರಲ್ಲಿ ಸಂವಿಧಾನ ಬದ್ಧ ಅಧಿಕಾರವನ್ನು ಶ್ರದ್ಧಾಪೂರ್ವಕವಾಗಿ ಮತ್ತು ನಿಷ್ಪಕ್ಷಪಾತವಾಗಿ ನಿರ್ವಹಣೆ ಮಾಡಲಿದ್ದೇನೆ ಎಂದು ರಾಮನಾಥ್ ಕೋವಿಂದ್ ಪ್ರಮಾಣ ವಚನ ಸ್ವೀಕರಿಸಿದರು.

indian president ram nath kovind-2
source:ndtv

ಈ ಸಮಾರಂಭದಲ್ಲಿ ಉಪರಾಷ್ಟ್ರಪತಿ ಹಾಮೀದ್ ಅನ್ಸಾರಿ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು, ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ವಿವಿಧ ದೇಶದ ರಾಯಭಾರಿಗಳು ಸೇರಿದಂತೆ ಹಲವಾರು ಗಣ್ಯರು ಪಾಲ್ಗೊಂಡಿದ್ದರು.
ರಾಷ್ಟ್ರಪತಿಯಾಗಿ ಪ್ರಮಾಣ ಸ್ವೀಕರಿಸುವ ಮುನ್ನ ಗಾಂಧೀಜಿ ಸಮಾಧಿಗೆ ತೆರಳಿ ರಾಮನಾಥ ಕೋವಿಂದ್‌ ಪುಷ್ಪನಮನ ಸಲ್ಲಿಸಿದರು.

ಪ್ರಮಾಣವಚನ ಸ್ವೀಕಾರದ ಬಳಿಕ ಸಂಸತ್ ಆವರಣದ ಹೊರಗೆ ರಕ್ಷಣಾ ಸಿಬ್ಬಂದಿ 21 ಸುತ್ತು ಕುಶಾಲು ತೋಪು ಸಿಡಿಸುವ ಮೂಲಕ ನೂತನ ರಾಷ್ಟ್ರಪತಿಗಳಿಗೆ ಗೌರವ ಸಲ್ಲಿಕೆ ಮಾಡಲಾಯಿತು. ಇದೆ ವೇಳೆ ರಮಾನಾಥ್ ಕೊವಿಂದ್ ಟ್ವೀಟ್ ಮಾಡಿದ್ದಾರೆ.