ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಭಾರತೀಯ ರೈಲ್ವೆ ಇಲಾಖೆಯಲ್ಲಿ ಸುವರ್ಣಾವಕಾಶ..!!

0
305

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಭಾರತೀಯ ನೈಋತ್ಯ ರೈಲ್ವೆಯ ಸೀನಿಯರ್ ಟೆಕ್ನಿಕಲ್ ಅಸೋಸಿಯೇಟ್ ಮತ್ತು ಜ್ಯೂನಿಯರ್ ಟೆಕ್ನಿಕಲ್ ಅಸೋಸಿಯೇಟ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ. ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ, ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 1.2019 ರೊಳಗೆ ಅರ್ಜಿ ಸಲ್ಲಿಸಬೇಕು.

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹೆದ್ದೆಯ ಹೆಸರು (Name Of The Posts): ಸೀನಿಯರ್ ಟೆಕ್ನಿಕಲ್ ಅಸೋಸಿಯೇಟ್, ಜ್ಯೂನಿಯರ್ ಟೆಕ್ನಿಕಲ್ ಅಸೋಸಿಯೇಟ್

ಸಂಸ್ಥೆ (Organisation) RRC ನೈಋತ್ಯ ರೈಲ್ವೆ

ವಿದ್ಯಾರ್ಹತೆ (Educational Qualification): ಡಿಪ್ಲೊಮ, ಸಿವಿಲ್ ಇಂಜಿನಿಯರಿಂಗ್ ನಲ್ಲಿ ಪದವಿ ಅಥವಾ ಸಮಾನ ಅರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.

ವಯೋಮಿತಿ (Age): ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ವರ್ಷ ವಯಸ್ಸನ್ನು ಪೂರೈಸಿರಬೇಕು. ಗರಿಷ್ಟ 24 ವರ್ಷ ವಯಸ್ಸಿನೊಳಗಿನ ಅಭ್ಯರ್ಥಿಗಳು ಅರ್ಜಿ ಯನ್ನು ಸಲ್ಲಿಸಬಹುದು.

ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ( Fee): ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು ಶುಲ್ಕ 100/- ರೂ ಮತ್ತು SC/ST/PH ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ: http://www.rrchubli.in/notifications/STA%20&%20JTA%20Notification-10.01.2019.pdf ಕ್ಲಿಕ್ ಮಾಡಿ.