ಪಿಯುಸಿ ಪಾಸಾದ ಅಭ್ಯರ್ಥಿಗಳಿಗೆ ಇಂಡಿಯನ್ ಆಯಿಲ್ ಕಾರ್ಪೊರೇಶನ್​ನಲ್ಲಿ ನೇಮಕಾತಿ ಪ್ರಕಟಣೆ.!

0
112

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (Indian Oil) ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಪಿಯುಸಿ( 12ನೇ ತರಗತಿ) ಪಾಸಾದವರು ಅರ್ಜಿ ಸಲ್ಲಿಸಬಹುದಾಗಿದ್ದು, ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಮೂಲಕ ನವೆಂಬರ್ 22, 2019 ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ 357 ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಗಳ ಹೆಸರು: ಅಪ್ರೆಂಟಿಸ್‌ಶಿಪ್ ತರಬೇತಿಗೆ

ವಿದ್ಯಾರ್ಹತೆ: ಪಿಯುಸಿ (12ನೇ ತರಗತಿ) ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ವಯೋಮಿತಿ: ಅರ್ಜಿದಾರನ ಕನಿಷ್ಠ ವಯಸ್ಸು 18 ಮತ್ತು ಗರಿಷ್ಠ ವಯಸ್ಸು 24 ವರ್ಷಗಳಾಗಿರಬೇಕು.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪರೀಕ್ಷೆ ಪ್ರಕ್ರಿಯೆ: ಲಿಖಿತ ಪರೀಕ್ಷೆಯಲ್ಲಿ ವಸ್ತುನಿಷ್ಠ ಪ್ರಕಾರದ ಪ್ರಶ್ನೆಗಳು ಇರುತ್ತವೆ. ಪರೀಕ್ಷೆಯಲ್ಲಿ 100 ಅಂಕಗಳಿಗೆ 100 ಪ್ರಶ್ನೆಗಳನ್ನು ಕೇಳಲಾಗುತ್ತದೆ. ಪರೀಕ್ಷೆಯನ್ನು ಪೂರ್ಣಗೊಳಿಸಲು ಅಭ್ಯರ್ಥಿಗಳಿಗೆ 2 ಗಂಟೆ ಕಾಲಾವಕಾಶ ನೀಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ: ಆಸಕ್ತರು ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್​ನ ಅಧಿಕೃತ ವೆಬ್‌ಸೈಟ್ https://plis.indianoilpipelines.in/ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.