ಬಾಹ್ಯಾಕಾಶ ಸಂಸ್ಥೆ ಇಸ್ರೋ 327 ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
200

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಭಾರತದಲ್ಲೆಡೆ ಒಟ್ಟು 327 ವಿಜ್ಞಾನಿ / ಇಂಜಿನಿಯರ್ ‘ಎಸ್‌ಸಿ’ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ನವೆಂಬರ್ 4,2019 ರೊಳಗೆ ಅರ್ಜಿ ಸಲ್ಲಿಸಬೇಕು.

Also read: ಇಂಡಿಯನ್ ಬ್ಯಾಂಕ್ 115 ಸೆಕ್ಯುರಿಟಿ ಗಾರ್ಡ್ ಕಮ್ ಪೀವನ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಗಳ ಹೆಸರು: ವಿಜ್ಞಾನಿ/ಇಂಜಿನಿಯರ್- ಎಸ್‌ಸಿ (ಇಲೆಕ್ಟ್ರಾನಿಕ್ಸ್)-131 ಹುದ್ದೆಗಳು,ವಿಜ್ಞಾನಿ/ಇಂಜಿನಿಯರ್ -ಎಸ್‌ಸಿ (ಮೆಕ್ಯಾನಿಕಲ್)-135 ಹುದ್ದೆಗಳು,ವಿಜ್ಞಾನಿ/ಇಂಜಿನಿಯರ್ -ಎಸ್‌ಸಿ (ಕಂಪ್ಯೂಟರ್ ಸೈನ್ಸ್)- 58 ಹುದ್ದೆಗಳು ಮತ್ತು ವಿಜ್ಞಾನಿ/ಇಂಜಿನಿಯರ್- ಎಸ್‌ಸಿ (ಇಲೆಕ್ಟ್ರಾನಿಕ್ಸ್)-3 ಹುದ್ದೆಗಳು ಸೇರಿ ಒಟ್ಟು 327 ಹುದ್ದೆಗಳಿಗೆ ನೇಮಕಾತಿಯನ್ನು ನಡೆಸಲಾಗುತ್ತಿದೆ.

ವಿದ್ಯಾರ್ಹತೆ: ಇಸ್ರೋದಲ್ಲಿ ಉದ್ಯೋಗಕ್ಕೆ ಸೇರಲು ಬಿ.ಇ / ಬಿ.ಟೆಕ್ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆಯನ್ನು ಶೇ.65 ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ನವೆಂಬರ್ 4,2019ರ ಅನ್ವಯ ಗರಿಷ್ಠ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಐದು ವರ್ಷ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ: ಇಸ್ರೋ ನೇಮಕಾತಿಯ ವಿಜ್ಞಾನಿ ಅಥವಾ ಇಂಜಿನಿಯರ್ ‘ಎಸ್‌ಸಿ’ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 56,100/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ / ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು 100/- ರೂ. ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಮಹಿಳೆ/ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಾಜಿ ಸೈನಿಕ/ಅಂಗವಿಕಲ ಅಭ್ಯರ್ಥಿಗಳು ಸಂಪೂರ್ಣ ಶುಲ್ಕ ವಿನಾಯಿತಿ ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಇಸ್ರೋ ಅಧಿಕೃತ ವೆಬ್‌ಸೈಟ್‌ https://www.isro.gov.in/ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಿಕೊಂಡು ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 4,2019ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ: https://www.isro.gov.in/ ಕ್ಲಿಕ್ ಮಾಡಿ.