ಐಟಿಐ ಪಾಸಾದ ಅಭ್ಯರ್ಥಿಗಳಿಗೆ ಬಾಹ್ಯಾಕಾಶ ಸಂಸ್ಥೆ ಇಸ್ರೋ ಹಲವು ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
223

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಬಾಹ್ಯಾಕಾಶ ಸಂಸ್ಥೆ ಇಸ್ರೋ ಹಲವು ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಸೆಪ್ಟೆಂಬರ್ 13,2019 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

Also read: ಭಾರತೀಯ ರೈತರ ರಸಗೊಬ್ಬರ ಸಹಕಾರ ನಿಗಮ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಗಳು: ಫಿಟ್ಟರ್‌-20, ಇಲೆಕ್ಟ್ರಾನಿಕ್‌ ಮೆಕ್ಯಾನಿಕ್‌-15, ಪ್ಲಂಬರ್‌-02, ವೆಲ್ಡರ್‌-01, ಮೆಷಿನಿಸ್ಟ್‌-01, ಡ್ರಾಟ್ಸ್‌ಮೆನ್‌ (ಮೆಕ್ಯಾನಿಕಲ್‌)-10, ಡ್ರಾಟ್ಸ್‌ಮೆನ್‌ (ಎಲೆಕ್ಟ್ರಿಕಲ್‌)-02, ಟೆಕ್ನಿಕಲ್‌ ಅಸಿಸ್ಟೆಂಟ್‌ (ಮೆಕ್ಯಾನಿಕಲ್‌)-20, ಟೆಕ್ನಿಕಲ್‌ ಅಸಿಸ್ಟೆಂಟ್‌ (ಇಲೆಕ್ಟ್ರಾನಿಕ್ಸ್‌ )-12 ಮತ್ತು ಟೆಕ್ನಿಕಲ್‌ ಅಸಿಸ್ಟೆಂಟ್‌ (ಸಿವಿಲ್‌)-03 ಹುದ್ದೆಗಳು ಸೇರಿ ಒಟ್ಟು 86.

ಶೈಕ್ಷಣಿಕ ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ /ಎಸ್‌ಎಸ್‌ಸಿ / ಮೆಟ್ರಿಕ್ಯುಲೇಶನ್‌ ಪಾಸ್ ಜೊತೆಗೆ ಎನ್‌ಸಿವಿಟಿಯಿಂದ ಸಂಬಂಧಪಟ್ಟ ಟ್ರೇಡ್‌ಗಳಲ್ಲಿ ಐಟಿಐ/ಎನ್‌ಟಿಸಿ/ಎನ್‌ಎಸಿ ಪ್ರಮಾಣ ಪತ್ರ ಪಡೆದಿರುವ ಅಭ್ಯರ್ಥಿಗಳು ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌ನಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಸೆಪ್ಟೆಂಬರ್ 13,2019 ರ ಅನ್ವಯ ಕನಿಷ್ಠ 18 ರಿಂದ ಗರಿಷ್ಠ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಐದು ವರ್ಷ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ: ಟೆಕ್ನೀಶಿಯನ್-ಬಿ ಮತ್ತು ಡ್ರಾಟ್ಸ್‌ಮೆನ್-ಬಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700/-ರೂ ಮತ್ತು ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 44,900/-ರೂ.

ಉದ್ಯೋಗ ಸ್ಥಳ: ನೇಮಕಗೊಳ್ಳುವ ಸಿಬ್ಬಂದಿಯು ಬೆಂಗಳೂರಿನ ಇಸ್ರೊ ಕೇಂದ್ರ ಕಚೇರಿಯಲ್ಲಿಯೇ ಕಾರ್ಯನಿರ್ವಹಿಸಬೇಕಾಗುತ್ತದೆ. ಅಭ್ಯರ್ಥಿಗಳನ್ನು ಭಾರತದೆಲ್ಲೆಡೆ ಇರುವ ಇಸ್ರೋ ಕಚೇರಿಗಳಿಗೆ ವರ್ಗಾಯಿಸಬಹುದು.

ನೇಮಕಾತಿ ಪ್ರಕ್ರಿಯೆ: ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಕೌಶಲ್ಯ ಪರೀಕ್ಷೆಯನ್ನು ನಡೆಸಲಾಗುವುದು. ಅದರಲ್ಲಿ ಶೇ. 60 ರಷ್ಟು ಅಂಕ ಪಡೆದ ಅಭ್ಯರ್ಥಿಗಳಲ್ಲಿ ಯಾರು ಲಿಖಿತ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದಿರುತ್ತಾರೆಯೋ ಅವರನ್ನು ನೇಮಕ ಮಾಡಿಕೊಳ್ಳಲಾಗುವುದು.

ಅರ್ಜಿ ಸಲ್ಲಿಸುವುದು ವಿಧಾನ: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಇಸ್ರೋ ಅಧಿಕೃತ ವೆಬ್‌ಸೈಟ್‌ https://www.isac.gov.in/ ಗೆ ಭೇಟಿ ನೀಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು.