ಡಿಕೆಶಿ ಮಾದರಿಯಲ್ಲೇ ಪರಮೇಶ್ವರ್ ಮೇಲೆ ಐಟಿ ದಾಳಿ; ದಾಳಿ ನಡೆಯಲು ಕಾರಣವಾಯಿತಾ ಸಿದ್ಧಾರ್ಥ್ ಕಾಲೇಜ್??

0
237

ಕಾಂಗ್ರೆಸ್ ಪ್ರಮುಖ್ಯ ನಾಯಕ ಡಿಕೆ ಶಿವಕುಮಾರ್ ಮೇಲೆ ದಾಳಿಯಾಗಿ ಬಂಧನವಾದ ಹಿನ್ನೆಲೆಯಲ್ಲೇ ಮತ್ತೊಬ್ಬ ಕಾಂಗ್ರೆಸ್ ಮೇದಾವಿ ಮಾಜಿ ಉಪಮುಖ್ಯಮಂತ್ರಿ ಡಿಸಿಎಂ ಪರಮೇಶ್ವರ್‌ಗೆ ಐಟಿ ಡ್ರಿಲ್ ಶುರುವಾಗಿದ್ದು, ಬೆಂಗಳೂರಿನ ಸದಾಶಿವನಗರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಒಟ್ಟು 12 ಅಧಿಕಾರಿಗಳ ತಂಡದಿಂದ ದಾಳಿ ನಡೆದಿದೆ. ಪರಮೇಶ್ವರ್ ಅವರ ಒಡೆತನದ ಶಾಲಾ-ಕಾಲೇಜುಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲಾತಿಗಳ ಪರಿಶೀಲನೆ ನಡೆಸುತ್ತಿದ್ದಾರೆ. ನೆಲಮಂಗಲದಲ್ಲಿರುವ ಸಿದ್ಧಾರ್ಥ್ ಮೆಡಿಕಲ್ ಕಾಲೇಜು, ತುಮಕೂರಿನಲ್ಲಿರುವ ಶಾಲಾ-ಕಾಲೇಜುಗಳ ಕಚೇರಿಯ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Also read: ಸರ್ಕಾರಿ ನೌಕರರಿಗೆ ದೀಪಾವಳಿ ಉಡುಗೊರೆಯಾಗಿ ಕೇಂದ್ರದಿಂದ ಭರ್ಜರಿ ಗಿಫ್ಟ್; ತುಟ್ಟಿ ಭತ್ಯೆ ಮೂರು ಪಟ್ಟು ಹೆಚ್ಚಳ.!

ಹೌದು ಹಿಂದುಳಿದ ವರ್ಗಗಳ ಪ್ರಭಾವಿ ನಾಯಕ, ಮಾಜಿ ಸಚಿವ ಆರ್.ಎಲ್.ಜಾಲಪ್ಪ ಒಡೆತನದ ಶಿಕ್ಷಣ ಸಂಸ್ಥೆ ಮತ್ತು ಅವರ ನಿವಾಸದ ಮೇಲೂ ಐಟಿ ದಾಳಿ ಮಾಡಿದೆ. ಕೋಲಾರ ಹೊರವಲಯದ ಟಮಕ ರಸ್ತೆಯಲ್ಲಿರುವ ದೇವರಾಜ ಅರಸು ವೈದ್ಯಕೀಯ ಕಾಲೇಜು, ಆರ್.ಎಲ್.ಜಾಲಪ್ಪ ಆಸ್ಪತ್ರೆ, ದೊಡ್ಡಬಳ್ಳಾಪುರದ ಸೋಮೇಶ್ವರ ನಗರದಲ್ಲಿರುವ ಆರ್.ಜಾಲಪ್ಪ ಪುತ್ರ ರಾಜೇಂದ್ರ ಅವರ ನಿವಾಸದಲ್ಲೂ ದಾಳಿ ನಡೆಸಲಾಗಿದೆ. ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ನೆಲಮಂಗಲದ ಸುಭಾಷ್‍ನಗರ ವಾರ್ಡ್‍ನ ಜೆಡಿಎಸ್ ಪುರಸಭಾ ಸದಸ್ಯ ಶಿವಕುಮಾರ್ ಅವರ ಮನೆ ಮೇಲೆ ಏಕಕಾಲಕ್ಕೆ ಐಟಿ ಅಧಿಕಾರಿಗಳು ದಾಳಿ ಮಾಡಿ ಕೆಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ದಾಳಿ ನಡೆಯಲು ಕಾರಣವೇನು?

Also read: ಮಹಿಳೆಯರ ನೆಚ್ಚಿನ ಜಾನ್ಸನ್ & ಜಾನ್ಸನ್ ಕಂಪೆನಿಗೆ 8 ಬಿಲಿಯನ್ ಡಾಲರ್ ಪರಿಹಾರ ನೀಡಲು ಕೋರ್ಟ್ ಆದೇಶ; ಯಾವುದಕ್ಕಾಗಿ ಇಷ್ಟೊಂದು ದಂಡ??

ಇಂದು ಬೆಳಗ್ಗೆ ತುಮಕೂರಿನ ಕುಣಿಗಲ್ ರಸ್ತೆಯಲ್ಲಿರುವ ಮರಳೂರಿನ ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜು, ಪದವಿ ಕಾಲೇಜು, ನೆಲಮಂಗಲದಲ್ಲಿರುವ ವೈದ್ಯಕೀಯ ಕಾಲೇಜು, ಸಹೋದರ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ಮಾಡಲಾಗಿದೆ. ದಾಳಿ ಸಂದರ್ಭದಲ್ಲಿ ಕಾಲೇಜಿನಲ್ಲಿದ್ದ ಎಲ್ಲ ಸಿಬ್ಬಂದಿಯನ್ನು ಐಟಿ ಅಧಿಕಾರಿಗಳು ಹೊರಗೆ ಕಳುಹಿಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಮೂಲಗಳ ಪ್ರಕಾರ ಈ ಶಿಕ್ಷಣ ಸಂಸ್ಥೆಯಲ್ಲಿ ಸರ್ಕಾರ ನಿಗದಿಪಡಿಸಿದ್ದಕ್ಕಿಂತ ಹೆಚ್ಚು ಶುಲ್ಕವನ್ನು ಪಡೆಯಲಾಗುತ್ತಿತ್ತು ಎಂಬ ಹಿನ್ನೆಲೆಯಲ್ಲಿ ದಾಳಿ ಮಾಡಲಾಗಿದೆ ಎಂದು ತಿಳಿದುಬಂದಿದೆ. ಅದರಂತೆ ಸಿದ್ಧಾರ್ಥ್ ಶಿಕ್ಷಣ ಸಂಸ್ಥೆಯಲ್ಲಿ ಮೆಡಿಕಲ್ ಮತ್ತು ಎಂಜಿನಿಯರಿಂಗ್ ಸೀಟ್ ಹಂಚಿಕೆಯಲ್ಲಿ ಅವ್ಯವಹಾರ ನಡೆದಿದೆ ಎನ್ನುವ ಆರೋಪ ಕೇಳಿ ಬಂದಿದೆ.

ಮೆಡಿಕಲ್, ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಸೀಟ್ ಹೊರತುಪಡಿಸಿ ಮ್ಯಾನೇಜ್‍ಮೆಂಟ್ ಸೀಟ್ ಗಳು ಇರುತ್ತವೆ. ಈ ಸೀಟ್ ಗಳಿಗೆ ಕಾಲೇಜುಗಳು ಶುಲ್ಕ ವಿಧಿಸಬಹುದಾಗಿದ್ದು, ಇದರಲ್ಲಿ ಕೋಟ್ಯಂತರ ರೂ. ಅಕ್ರಮ ನಡೆದಿದೆ. ಅಷ್ಟೇ ಅಲ್ಲದೇ ತೆರಿಗೆಯನ್ನು ಮರೆಮಾಚಲು ಶುಲ್ಕವನ್ನು ನಗದು ರೂಪದಲ್ಲಿ ಪಾವತಿಸಲಾಗಿದೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಇಲ್ಲಿಯೂ ಕೂಡ ಐಟಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸಿ ಸಂದೇಹಾಸ್ಪದ ದಾಖಲೆಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

Also read: ವಾಹನ ಮಾಲೀಕರೆ ಎಚ್ಚರ; ಬೆಂಗಳೂರಿಗೆ ಬಂದಿದ್ದೆ ಯೂಟ್ಯೂಬ್ ಕಾರು ಕಳ್ಳರ ಗ್ಯಾಂಗ್, ಐದೇ ನಿಮಿಷದಲ್ಲಿ ನಿಮ್ಮ ಕಾರ್ ಕದಿಯುತ್ತಾರೆ ಎಚ್ಚರ.!

ಬೆಂಗಳೂರಿನ ಸದಾಶಿವನಗರದಲ್ಲಿರುವ ಪರಮೇಶ್ವರ್ ನಿವಾಸದ ಮೇಲೂ ದಾಳಿ ಮಾಡಲಾಗಿದೆ. ಮುಂಜಾನೆ 5.30ಕ್ಕೆ ಆರಕ್ಕೂ ಹೆಚ್ಚು ಅಧಿಕಾರಿಗಳ ತಂಡ ದಾಳಿ ನಡೆಸಿದ್ದಾರೆ. ಈ ವೇಳೆ ಪರಮೇಶ್ವರ್ ತಮ್ಮ ಕ್ಷೇತ್ರ ಕೊರಟಗೆರೆಯಲ್ಲಿದ್ದರು. ಮನೆಯಲ್ಲಿ ಪರಮೇಶ್ವರ್ ಅವರ ಪತ್ನಿ ಮತ್ತು ಕುಟುಂಬದ ಕೆಲವು ಸದಸ್ಯರು ಇದ್ದರು ಎನ್ನಲಾಗಿದೆ. ದಾಳಿ ಸಂದರ್ಭದಲ್ಲಿ ಐಟಿ ಅಧಿಕಾರಿಗಳು ಕೇಳಿದ ಎಲ್ಲ ಮಾಹಿತಿಯನ್ನು ಪರಮೇಶ್ವರ್ ಕುಟುಂಬದವರು ನೀಡಿದ್ದಾರೆ ಎಂದು ತಿಳಿದುಬಂದಿದೆ.