ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ 129 ಇಂಜಿನಿಯರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
99

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ಐಟಿಐ ಲಿಮಿಟೆಡ್) 129 ಕಾಂಟ್ರಾಕ್ಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ ಜನವರಿ 30,2020ರೊಳಗೆ ಅರ್ಜಿ ಸಲ್ಲಿಸಬೇಕು.

Also read: ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಕಾಂಟ್ರಾಕ್ಟ್ ಇಂಜಿನಿಯರ್

ಸಂಸ್ಥೆ (Organisation): ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ಐಟಿಐ ಲಿಮಿಟೆಡ್)

ವಿದ್ಯಾರ್ಹತೆ (Educational Qualification): ಈ ಹುದ್ದೆಗಳಿಗೆ ಬಿ.ಇ/ಬಿ.ಟೆಕ್/ಇಲೆಕ್ಟ್ರಾನಿಕ್ಸ್‌/ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್/ಟೆಲಿಕಮ್ಯುನಿಕೇಶನ್/ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್‌ ಇಂಜಿನಿಯರಿಂಗ್‌ನಲ್ಲಿ ಪದವಿ ವಿದ್ಯಾರ್ಹತೆಯನ್ನು ಎಐಸಿಟಿಇ ಇಂದ ಮಾನ್ಯತೆ ಪಡೆದ ಸಂಸ್ಥೆ/ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಸ್ಥಳ (Job Location): ಬೆಂಗಳೂರು (ಕರ್ನಾಟಕ), ಭಾರತ

ವಯೋಮಿತಿ: ಜನವರಿ 15,2020ರ ಅನ್ವಯ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, 400/-ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್‌ ಡ್ರಾಫ್ಟ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ಐಟಿಐ ಲಿಮಿಟೆಡ್)ನ ಅಧಿಕೃತ ವೆಬ್‌ಸೈಟ್‌ http://www.itiltd-india.com/ ಗೆ ಭೇಟಿ ನೀಡಿ. ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ. ಆನ್‌ಲೈನ್‌ನಲ್ಲಿ ಅರ್ಜಿಯನ್ನು ಸಲ್ಲಿಸಿದ ಬಳಿಕ ಅರ್ಜಿ ಪ್ರಿಂಟೌಟ್ ತೆಗೆದುಕೊಂಡು ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸ.

ಅಡಿಷನಲ್ ಜನರಲ್ ಮ್ಯಾನೇಜರ್, ಹೆಚ್‌ಆರ್‌, ಐಟಿಐ ಲಿಮಿಟೆಡ್, ನೆಟ್‌ವರ್ಕ್ ಸಿಸ್ಟ್ಸ್ಂ ಯುನಿಟ್, ಎಫ್‌-100, ದೂರವಾಣಿ ನಗರ, ಬೆಂಗಳೂರು ಪ್ಲಾಂಟ್, ಬೆಂಗಳೂರು -560016 ಜನವರಿ 30,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.