ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
191

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಸಹಾಯಕ ಪ್ರಾಧ್ಯಾಪಕ ಮತ್ತು ಯೋಜನಾ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ. ಆಗಸ್ಟ್ 9,2019 ರೊಳಗೆ ಅರ್ಜಿ ಸಲ್ಲಿಸಬೇಕು.

Also read: ಬಿಬಿಎಂಪಿ 250 ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ; ಆಗಸ್ಟ್ 1 ರಿಂದ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಸಹಾಯಕ ಪ್ರಾಧ್ಯಾಪಕ ,ಯೋಜನಾ ಸಹಾಯಕ ಮತ್ತು ಸಹಾಯಕ ಗ್ರಂಥಪಾಲಕ

ಸಂಸ್ಥೆ (Organisation): ಕರ್ನಾಟಕ ಜಾನಪದ ವಿಶ್ವವಿದ್ಯಾಲಯ

ಉದ್ಯೋಗ ಸ್ಥಳ (Job Location): ಹಾವೇರಿ (ಕರ್ನಾಟಕ)

ವಿದ್ಯಾರ್ಹತೆ (Educational Qualification): ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ, ಎಂಬಿಎ, ಎಂಎ ಅಥವಾ ಎಂಎಫ್‌ಎ, ಯೋಜನಾ ಸಹಾಯಕ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ ಮತ್ತು ಸಹಾಯಕ ಗ್ರಂಥಪಾಲಕ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ನೇಮಕಾತಿಯ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳು 1000/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್‌ ಡ್ರಾಫ್ಟ್ ಮೂಲಕ ಪಾವತಿಸಬಹುದು.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಸ್ವವಿವರ ಹಾಗೂ ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 9,2019 ರೊಳಗೆ ಕಚೇರಿಯ ವಿಳಾಸ: ಕುಲಸಚಿವರು, ಕರ್ನಾಟಕ ಜಾನಪದ ವಿಶ್ವವಿದ್ಯಾಲಯ, ಗೊಟಗೋಡಿ, ರಾ.ಹೆ.-4, ಶಿಗ್ಗಾವಿ .ತಾ.

ಹಾವೇರಿ ಜಿಲ್ಲೆ-581205.

ಹೆಚ್ಚಿನ ಮಾಹಿತಿಗಾಗಿ: http://www.janapadauniversity.ac.in/ ಕ್ಲಿಕ್ ಮಾಡಿ.