ಬೆಂಗಳೂರಿಗರಿಗೆ ನೂರಾರು ಕೋಟಿ ಪಂಗನಾಮ; ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಆಡಿಯೋ ಮಾಡಿಟ್ಟು IMA ಜ್ಯುವಲರ್ಸ್ ಮಾಲೀಕ ಎಸ್ಕೇಪ್..

0
419

ಬೆಂಗಳೂರಿನ ಪ್ರತಿಷ್ಠಿತ ಐಎಂಎ ಜ್ಯುವೆಲ್ಸ್ನಲ್ಲಿ ಹೂಡಿಕೆ ಮಾಡಲು ಗ್ರಾಹಕರಿಂದ ಬರೋಬರಿ 400 ಕೋಟಿ ಹಣವನ್ನು ಪಡೆದು ಈಗ ಹಣವನ್ನು ನೀಡದೆ ಆತ್ಮಹತ್ಯೆ ಮಾಡಿಕೊಳ್ಳುವಂತೆ ಆಡಿಯೋ ಮಾಡಿಟ್ಟು ಜ್ಯುವೆಲ್ಸ್ ಮಾಲೀಕ ಮೊಹಮ್ಮದ್ ಮನ್ಸೂರ್ ಖಾನ್ ನಾಪತ್ತೆಯಾಗಿದ್ದು, ಹೂಡಿಕೆದಾರರಿಗೆ ವಂಚನೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬರುತ್ತಿದ್ದು, ಹೆಚ್ಚು ಹಣಗಳಿಸಲು ಹೋದವರಿಗೆ ಪಂಗನಾಮ ಬಿದಿದ್ದೆ.

ಹೌದು ಬರೋಬ್ಬರಿ 2 ಸಾವಿರ ಕೋಟಿ ರೂ. ವಹಿವಾಟನ್ನು ಹೊಂದಿರುವ ಮೊಹಮ್ಮದ್ ಮನ್ಸೂರ್ ಖಾನ್ ಕಳೆದ 4 ದಿನಗಳಿಂದ ಕಚೇರಿ ಬಾಗಿಲು ಹಾಕಿ ಸೋಮವಾರ ಕಚೇರಿ ಬಾಗಿಲು ತೆರೆಯುವುದಾಗಿ ತನ್ನ ಬಳಿ ಹಣ ಹೂಡಿಕೆ ಮಾಡಿದವರಿಗೆ ಭರವಸೆ ನೀಡಿದ್ದರು. ಆದರೆ ಸೋಮವಾರ ಕಚೇರಿ ತೆರೆಯುವ ಮುನ್ನ ಆಡಿಯೋ ಬಿಡುಗಡೆ ಮಾಡಿ ನಾಪತ್ತೆಯಾಗಿದ್ದಾರೆ. ಸೋಮವಾರ ನಮ್ಮ ಹೂಡಿಕೆ ಹಣ ಸಿಗುತ್ತೆ ಎಂದು ನಂಬಿದ್ದ ಸಾರ್ವಜನಿಕರು ಕಂಗೆಟ್ಟು, ಕಚೇರಿ ಮುಂದೆಯೇ ಪ್ರತಿಭಟನೆ ಮಾಡುತ್ತಿದ್ದಾರೆ. ನಮ್ಮ ಹಣ ನೀಡಿ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಆದರೆ ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿರುವ ಮನ್ಸೂರ್ ಖಾನ್ ಕುಟುಂಬ ಸಮೇತ ಹಳ್ಳಿಯೊಂದರಲ್ಲಿ ವಾಸಿಸುತ್ತಿದ್ದು, ಅಲ್ಲಿಂದಲೇ ಆಡಿಯೋವನ್ನು ನಗರ ಪೊಲೀಸ್ ಆಯುಕ್ತರಿಗೆ ಕಳುಹಿಸಿಕೊಟ್ಟಿದ್ದಾರೆ. ಮೊಹಮ್ಮದ್ ಮನ್ಸೂರ್ ಖಾನ್ ನಾಪತ್ತೆಯಾಗುವ ಮುನ್ನ ಅವರು ಮಾತನಾಡಿದ್ದಾರೆ ಎಂಬ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ಲಾಗಿದೆ. ಅದರಲ್ಲಿ ನನಗೆ ಭ್ರಷ್ಟ ಅಧಿಕಾರಿಗಳು ಕಿರುಕುಳ ಕೊಟ್ಟಿದ್ದಾರೆ. ಕಿರುಕುಳದಿಂದ ತಪ್ಪಿಸಿಕೊಳ್ಳಲು ಅವರುಗಳಿಗೆ ಲಂಚ ಕೊಟ್ಟಿದ್ದೇನೆ ಎಂದು ಹೇಳಿದ್ದಾನೆ.

ಆಡಿಯೋದಲ್ಲಿ ಏನಿದೆ?

ಐಎಂಎ ಅಲ್ಲಿ ಹಣ ಹೂಡಿಕೆ ಮಾಡಲು ನಾನು ಜನರ ಬಳಿ ಹಣ ಸಂಗ್ರಹ ಮಾಡಿದ್ದೆ. ಬಳಿಕ ಅದನ್ನು ಶಿವಾಜಿನಗರ ಶಾಸಕ ರೋಷನ್ ಬೇಗ್‍ಗೆ ನೀಡಿದ್ದೆ. ಉದ್ಯಮಿಯೊಬ್ಬರಿಗೆ 500 ಕೋಟಿ ಹಾಗೂ ರೋಷನ್ ಬೇಗ್ ಅವರಿಗೆ 400 ಕೋಟಿ ರೂ. ಸಾಲದ ರೀತಿಯಲ್ಲಿ ಹಣ ನೀಡಿದ್ದೆ. ಆದರೆ ಹಣ ವಾಪಸ್ ಕೊಡುವ ಮನಸ್ಸು ಮಾಡಲೇ ಇಲ್ಲ. ಹಣ ಕೇಳಲು ಹೋದರೆ ಹೆಂಡತಿ ಮಕ್ಕಳನ್ನು ಕೊಲೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ. ಆ ಭಯಕ್ಕೆ ನಾನು ನನ್ನ ಹೆಂಡತಿ ಮಕ್ಕಳನ್ನು ಹಳ್ಳಿಯೊಂದರಲ್ಲಿ ಬಚ್ಚಿಟ್ಟಿದ್ದೆ. ಆದರೆ ನಾನು ಈಗ ಬದುಕಲು ಸಾಧ್ಯ ಆಗುತ್ತಿಲ್ಲ. ನಾನು ಸಾವನ್ನಪ್ಪುತ್ತೇನೆ ಎಂದು ಆಡಿಯೋ ಕ್ಲಿಪ್ಪಿಂಗ್ ಬಿಡುಗಡೆ ಮಾಡಿದ ಮಾಲಿಕ ಈ ಆಡಿಯೋ ನಿಮಗೆ ತಲುಪುವ ವರೆಗೆ ನಾನು ಇರುವುದಿಲ್ಲ. ನನ್ನ ಬಳಿ 500 ಕೋಟಿ ರೂ. ಆಸ್ತಿಯಿದೆ, ಚಿನ್ನ, ವಜ್ರ ಇದೆ. ಅದನ್ನು ಮಾರಿ ಸಂತ್ರಸ್ತ ಹೂಡಿಕೆದಾರರಿಗೆ ನೀಡಿ ಎಂದು ಮನವಿ ಮಾಡಿಕೊಳ್ಳುತ್ತೇನೆ. ಬಿಡಿಎ ಕುಮಾರ್ ಬಳಿ ನನ್ನ 5 ಕೋಟಿ ರೂ.ಇದೆ. ಶಿವಾಜಿ ನಗರದ ಶಾಸಕರ ಬಳಿ ಇರುವ ಹಣವನ್ನು ಜನರಿಗೆ ಹಂಚಿಕೆ ಮಾಡಿ ಎಂದು ಮನವಿ ಮಾಡಿಕೊಳ್ಳುತ್ತೇನೆ’ ಎಂದು ಪೊಲೀಸ್ ಆಯುಕ್ತರಿಗೆ ಬಂದಿರುವ ಆಡಿಯೋದಲ್ಲಿ ಮನವಿ ಮಾಡಲಾಗಿದೆ. ಎಂದು ನಾಪತ್ತೆಯಾಗಿದ್ದಾನೆ.

ಈ ಆಡಿಯೋ ಸಿಕ್ಕ ಕೂಡಲೇ ಪೊಲೀಸರು ಮನ್ಸೂರ್ ಮನೆ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಆದರೆ ಕಚೇರಿ, ಮನೆಗೆ ಬೀಗ ಜಡಿದು ಮನ್ಸೂರ್ ನಾಪತ್ತೆ ಆಗಿದ್ದು, ನಿಜವಾಗಲೂ ಮನ್ಸೂರ್ ಆತ್ಮಹತ್ಯೆ ಮಾಡಿಕೊಂಡಿದ್ದಾನಾ ಎನ್ನುವ ಅನುಮಾನ ಹುಟ್ಟಿಕೊಂಡಿದೆ. ಹೀಗಾಗಿ ಪೊಲೀಸರು ಮಾನ್ಸೂರ್ ಗಾಗಿ ಹುಡುಕಾಟ ನಡೆಸಿದ್ದು, ಖಾನ್ ಅವರು ವಿದೇಶಕ್ಕೆ ಪರಾರಿಯಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಪೂರ್ವ ವಿಭಾಗದ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಆದರಿಂದ ಯಾವುದೇ ಹೂಡಿಕೆ ಮಾಡುವಾಗ ಬಹಳಷ್ಟು ಎಚ್ಚರಿಕೆ ವಹಿಸುವುದು ಒಳ್ಳೆಯದು.