2,313 ಪ್ರೊಬೇಷನರಿ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0
975

 

ಭಾರತೀಯ ಸ್ಟೇಟ್ ಬ್ಯಾಂಕ್(ಎಸ್ಬಿಐ) ಒಟ್ಟು 2,313 ಪ್ರೊಬೇಷನರಿ ಆಫೀಸರ್(ಪಿಒ) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಕೆ

ಎಸ್ಬಿಐ ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಬಹುದು. ವಿವರ ಭರ್ತಿ ನಂತರ ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳು ರೂ.600 ಹಾಗೂ ಎಸ್ಸಿ/ಎಸ್ಟಿ, ಅಂಗವಿಕಲ ಅಭ್ಯರ್ಥಿಗಳು ರೂ.100 ಅರ್ಜಿ ಶುಲ್ಕ ಆನ್ಲೈನ್ ಸಲ್ಲಿಸಬೇಕು.

ವಿದ್ಯಾರ್ಹತೆ

ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು. ಪದವಿ ಕೊನೆಯ ಸೆಮಿಸ್ಟರ್ನಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ ಅರ್ಜಿ ಸಲ್ಲಿಕೆಗೆ ಅವಕಾಶವಿದೆ.

ಪರೀಕ್ಷಾ ವಿಧಾನ: ಪೂರ್ವಭಾವಿ ಪರೀಕ್ಷೆಯಲ್ಲಿ ಅರ್ಹತೆ ಪಡೆಯುವವರನ್ನು ಎರಡು ಹಂತಗಳ ಮುಖ್ಯಪರೀಕ್ಷೆಗೆ ಆಹ್ವಾನಿಸಲಾಗುತ್ತದೆ.

ಪರೀಕ್ಷೆಯಲ್ಲಿ ಗಳಿಸುವ ಅಂಕಗಳನ್ನು ಪರಿಗಣಿಸಿ, ಸಂದರ್ಶನ ಮತ್ತು ಗುಂಪು ಚರ್ಚೆ ನಡೆಸಲಾಗುತ್ತದೆ. ಪಡೆಯುವ ಅಂಕಗಳ ಅನ್ವಯ ಅರ್ಹರ ಆಯ್ಕೆ ಮಾಡಲಾಗುತ್ತದೆ. ಬೆಂಗಳೂರು, ಮಂಗಳೂರು, ಮೈಸೂರು, ಬೆಳಗಾವಿ ಸೇರಿದಂತೆ ರಾಜ್ಯದ ವಿವಿಧ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ವಯೋಮಿತಿ

ಕನಿಷ್ಠ 21 ವರ್ಷ ಹಾಗೂ ಗರಿಷ್ಠ 30 ವರ್ಷ. ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5, ಒಬಿಸಿ ಅಭ್ಯರ್ಥಿಗಳಿಗೆ 3 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯಿದೆ.

ವೇತನ: ರೂ.27,620+ಇತರೆ ಭತ್ಯೆ

ಅರ್ಜಿ ಸಲ್ಲಿಕೆಗೆ ಕೊನೇದಿನ: ಮಾರ್ಚ್ 6

ಪ್ರಿಲಿಮಿನರಿ ಆನ್ಲೈನ್ ಪರೀಕ್ಷೆ: ಏಪ್ರಿಲ್ 29ರಿಂದ

ವೆಬ್ಸೈಟ್: www.sbi.co.in/careers

ಹುದ್ದೆಗಳ ವರ್ಗೀಕರಣ

ಎಸ್ಸಿ-347

ಎಸ್ಟಿ-350

ಒಬಿಸಿ-606

ಸಾಮಾನ್ಯ-1010