ಅಪ್ಪರ್ ಡಿವಿಷನ್ ಕ್ಲರ್ಕ್ ಮತ್ತು ಲೋಯರ್ ಡಿವಿಷನ್ ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
275

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಸೆಂಟ್ರಲ್ ಕೌನ್ಸಿಲ್ ಫಾರ್ ರಿಸರ್ಚ್ ಆಯುರ್ವೇದಿಕ್ ಸೈನ್ಸ್ ನಲ್ಲಿ 66 ಅಪ್ಪರ್ ಡಿವಿಷನ್ ಕ್ಲರ್ಕ್ ಮತ್ತು ಲೋಯರ್ ಡಿವಿಷನ್ ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ ಮೂಲಕ ಡಿಸೆಂಬರ್ 19,2019ರೊಳಗೆ ಅರ್ಜಿ ಸಲ್ಲಿಸಬೇಕು.

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

  • ಹುದ್ದೆಯ ಹೆಸರು (Name Of The Posts): ಅಪ್ಪರ್ ಡಿವಿಷನ್ ಕ್ಲರ್ಕ್ ಮತ್ತು ಲೋಯರ್ ಡಿವಿಷನ್ ಕ್ಲರ್ಕ್
  • ಸಂಸ್ಥೆ (Organisation): ಸೆಂಟ್ರಲ್ ಕೌನ್ಸಿಲ್ ಫಾರ್ ರಿಸರ್ಚ್ ಆಯುರ್ವೇದಿಕ್ ಸೈನ್ಸ್
  • ವಿದ್ಯಾರ್ಹತೆ (Educational Qualification):ಪದವಿ ಮತ್ತು 10+2/ದ್ವಿತೀಯ ಪಿಯುಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

  • ವಯೋಮಿತಿ: ಡಿಸೆಂಬರ್ 19,2019ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನುಯ ಸಲ್ಲಿಸಬಹುದು.
  • ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
  • ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.
  • ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಸೆಂಟ್ರಲ್ ಕೌನ್ಸಿಲ್ ಫಾರ್ ರಿಸರ್ಚ್ ಆಯುರ್ವೇದಿಕ್ ಸೈನ್ಸ್ (ಸಿಸಿಆರ್ಎಎಸ್)ನ ಅಧಿಕೃತ ವೆಬ್‌ಸೈಟ್‌ https://admission-delhi.nielit.gov.in/frmMain.aspx ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 19,2019ರ ಒಳಗೆ ಅರ್ಜಿ ಸಲ್ಲಿಸಬೇಕು.