ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
378

ಬಿ.ಇ / ಬಿ.ಟೆಕ್ ಮಾಡಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಹತೆಯನ್ನು ಹೊಂದಿದಲ್ಲಿ ಅಗತ್ಯ ಮಾಹಿತಿಯನ್ನು ಜೂನ್ 7 ರೊಳಗೆ ಮೇಲ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮಾತ್ರ ಜೂನ್ 25 ರಂದು ನಡೆಯುವ ಸಂದರ್ಶನಕ್ಕೆ ಅರ್ಹರಾಗಿರುತ್ತಾರೆ.

Also read: ಭಾರತೀಯ ಸೇನೆಯ ಗಡಿ ಭದ್ರತಾ ಪಡೆ BSF 1072 ಕಾನ್ಸ್ಟೇಬಲ್ ಮತ್ತು ಹೆಡ್​ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧ ಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಗ್ರಾಜುಯೇಟ್ ಅಪ್ರೆಂಟಿಸ್

ವಿದ್ಯಾರ್ಹತೆ (Educational Qualification): ಈ ಹುದ್ದೆಗಳಿಗೆ ಬಿ.ಇ / ಬಿ.ಟೆಕ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಸ್ಥಳ (Job Location): ಬೆಂಗಳೂರು (ಕರ್ನಾಟಕ)

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Application End Date): June 7, 2019

ವಯೋಮಿತಿ: ಸಂಸ್ಥೆಯ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಶುಲ್ಕ: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://www.drdo.gov.in/drdo/English/index.jsp?pg=homebody.jsp ನಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಅಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ hrd@debel.drdo.in ವಿಳಾಸಕ್ಕೆ ಜೂನ್ 7,2019 ರೊಳಗೆ ಮೇಲ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಜೂನ್ 25 ರಂದು ನಡೆಯುವ ವಾಕ್‌-ಇನ್ ಸಂದರ್ಶನದಲ್ಲಿ ಪಾಸಾದ ಅಭ್ಯರ್ಥಿಗಳಿಗೆ ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ: https://www.drdo.gov.in/drdo/whatsnew/Advt_Grad_Appre_8_May_19.pdf ಕ್ಲಿಕ್ ಮಾಡಿ.