ಮೇ 5 ರಂದು ಚುನಾವಣೆ; 224 ಕ್ಷೇತ್ರಗಳಲ್ಲಿ ನಡೆಯಲಿದೆ ಒಂದೇ ದಿನ ಮತದಾನ, ಯಾರು ಅಧಿಕಾರಕ್ಕೆ ಬರುವರು??

1
3229

ರಾಜ್ಯದಲ್ಲಿ ಮೇ ತಿಂಗಳಲ್ಲಿ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ನಿಗದಿ ಮಾಡಲಾಗಿದೆ.

ರಾಜ್ಯದಲ್ಲಿ ಈಗಾಗಲೇ ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳ ಜಿದ್ದಾಜಿದ್ದಿ ಶುರುವಾಗಿದ್ದು, ಮತದಾರನ ಮನವೊಲಿಕೆಗೆ ಜನಪ್ರತಿನಿಧಿಗಳು ತಯಾರಿ ನಡೆಸಿದ್ದಾರೆ. ಮೇ ಮೊದಲ ವಾರ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆ ಇದೆಯೆಂದು ಚುನಾವಣಾ ಆಯೋಗದ ಮೂಲಗಳು ಹೇಳುತ್ತಿವೆ. 2018ರ ಮೇ 5 ರಂದು ರಾಜ್ಯ ವಿಧಾನಸಭೆಗೆ ಮತದಾನ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಮೇ 8 ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆಯೆಂದು ಚುನಾವಣಾ ಆಯೋಗದ ಮೂಲಗಳು ಹೇಳುತ್ತಿವೆ.

2018ರ ಏಪ್ರಿಲ್ 17ಕ್ಕೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಜೊತೆಗೆ ಏಪ್ರಿಲ್ 20ಕ್ಕೆ ನಾಮಪತ್ರ ಹಿಂಪಡೆಯುವ ದಿನಾಂಕವನ್ನು ನಿಗದಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನು ಎಲ್ಲ 224 ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಮತದಾನ ನಡೆಸಲು ಆಯೋಗ ನಿರ್ಧರಿಸಿದೆ. ಪರಿಶಿಷ್ಟ ಜಾತಿಗೆ 36, ಪರಿಶಿಷ್ಟ ಪಂಗಡಕ್ಕೆ 16 ಕ್ಷೇತ್ರಗಳನ್ನು ಮೀಸಲಿರಿಸಲಾಗುತ್ತದೆ ಎಂದು ಮೂಲಗಳಿಂದ ತಿಳಿದು ಬಂದಿದೆ.