ಕರ್ನಾಟಕ ರಾಜ್ಯ ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ, ಹೆಚ್ಚಿನ ವಿವರಕ್ಕಾಗಿ ಇದನ್ನು ನೋಡಿ…

0
1086

ಕರ್ನಾಟಕ ರಾಜ್ಯ ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. 

ಇಲಾಖೆ ಹೆಸರು:
ಕರ್ನಾಟಕ ರಾಜ್ಯ ಕಾರಾಗೃಹ ಇಲಾಖೆ.

ಉದ್ಯೋಗ ಸ್ಥಳ:
ಕರ್ನಾಟಕ.

ಒಟ್ಟು ಹುದ್ದೆ:
1102

ಹುದ್ದೆ ವಿವರ:
1. ಜೈಲರ್ – 32 ಹುದ್ದೆ
2. ವಾರ್ಡರ್ – 1070 ಹುದ್ದೆ

ವಿದ್ಯಾರ್ಹತೆ:
1. ಜೈಲರ್ ಹುದ್ದೆಗೆ ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದಾದರು ಒಂದು ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಸೋಶಿಯಾಲೊಜಿ ಅಥವಾ ಸೈಕಾಲಜಿ ಅಥವಾ ಕ್ರಿಮಿನಾಲಜಿ ಅಥವಾ ಕರೆಕ್ಷನಲ್ ಅಡ್ಮಿನಿಸ್ಟ್ರೇಷನ್ ನಲ್ಲಿ ಅಥವಾ ತತ್ಸಮಾನ ವಿಷಯದಲ್ಲಿ ಬ್ಯಾಚುಲರ್ ಪದವಿ ಪಡೆದವರಿಗೆ ಆದ್ಯತೆ ಇದೆ.

2. ವಾರ್ಡರ್ ಹುದ್ದೆಗೆ ಹತ್ತನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ:
ಜೈಲರ್ ಮತ್ತು ವಾರ್ಡರ್ ಎರಡು ಹುದ್ದೆಗಳಿಗೆ ಅನ್ವಯವಾಗುವಂತೆ. ಕನಿಷ್ಠ ವಯೋಮಿತಿ 20 ವರ್ಷ ಮತ್ತು ಗರಿಷ್ಠ ವಯೋಮಿತಿ 26 ವರ್ಷ, SC, ST ಮತ್ತು OBC ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 28 ವರ್ಷ.

ಅರ್ಜಿ ಶುಲ್ಕ:
ಎರಡು ಹುದ್ದೆಗಳಿಗೆ ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಸೇರಿದ ಅಭ್ಯರ್ಥಿಗಳಿಗೆ 250 ರೂ. SC/ST ಮತ್ತು ಪ್ರವರ್ಗ-1 ರ ಅಭ್ಯರ್ಥಿಗಳಿಗೆ 100 ರೂ. ನಿಗದಿ ಪಡಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
09-01-2018

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ:
11-01-2018

ಅರ್ಜಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ವೆಬ್-ಸೈಟ್ kpdonline.co.in ಗೆ ಭೇಟಿ ನೀಡಿ.