ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಉದ್ಯೋಗ ಅವಕಾಶ.! ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ..

0
767

Kannada News | Karnataka News

ರಾಜ್ಯ ಪೊಲೀಸ್‌ ಇಲಾಖೆಯು ಖಾಲಿ ಇರುವ ಸಿವಿಲ್‌ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳ ನೇಮಕಕ್ಕೆ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಿದೆ. ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಮಾರ್ಚ್‌ 14ರೊಳಗೆ ಅಧಿಕೃತ ಬ್ಯಾಂಕ್‌ ಅಥವಾ ಅಂಚೆ ಕಚೇರಿ ವೇಳೆಯಲ್ಲಿ ಶುಲ್ಕವನ್ನು ಪಾವತಿಸುವಂತೆ ಸೂಚಿಸಲಾಗಿದೆ.

ಒಟ್ಟು ಹುದ್ದೆಗಳ ಸಂಖ್ಯೆ: 164

ಹುದ್ದೆಗಳ ವಿಂಗಡಣೆ
ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ (ಪುರುಷ)-110
ಮಹಿಳಾ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ -36
ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ (ಸೇವೆಯಲ್ಲಿರುವವರಿಗೆ)-15
ಹೈದರಾಬಾದ್‌-ಕರ್ನಾಟಕದ ಅಭ್ಯರ್ಥಿಗಳಿಗೆ (ಪುರುಷ)-02
ಹೈದರಾಬಾದ್‌-ಕರ್ನಾಟಕದ ಮಹಿಳಾ ಅಭ್ಯರ್ಥಿಗಳಿಗೆ-01

164 ಹುದ್ದೆಗಳ ಪೈಕಿ 112 ಹುದ್ದೆಗಳು ಪುರುಷರಿಗೆ ಮೀಸಲಾಗಿದ್ದರೆ, 37 ಹುದ್ದೆಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ. ಉಳಿದ 15 ಹುದ್ದೆಗಳನ್ನು ಸೇವೆಯಲ್ಲಿರುವವರಿಗೆ ಎಂದು ಹಂಚಲಾಗಿದೆ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್‌ 12, 2018
ಅರ್ಜಿ ಶುಲ್ಕ ಪಾವತಿಗೆ ಕೊನೆಯ ದಿನಾಂಕ: ಮಾರ್ಚ್‌ 14, 2018

ವಿದ್ಯಾರ್ಹತೆ:
* ಯುಜಿಸಿಯಿಂದ ಮಾನ್ಯತೆ ಪಡೆದಿರುವ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ಶಿಕ್ಷಣ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
* ಸೇವೆಯಲ್ಲಿರುವವರಾದರೆ ಪದವಿ ಅಥವಾ ತತ್ಸಮಾನ ಪದವಿ ಪಡೆದಿರಬೇಕು ಜತೆಗೆ ಪೊಲೀಸ್‌ ಇಲಾಖೆಯಲ್ಲಿ ಸಹಾಯಕ ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್‌ ಆಗಿ ಅಥವಾ ಹೆಡ್‌ ಕಾನ್ಸ್‌ಟೇಬಲ್‌ / ಪೊಲೀಸ್‌ ಕಾನ್ಸ್‌ಟೇಬಲ್‌ ಆಗಿ 5 ವರ್ಷ ಸೇವೆ ಸಲ್ಲಿಸಿರಬೇಕು.

ದೈಹಿಕ ಅರ್ಹತೆ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ಎತ್ತರ 168 ಸೆಂ.ಮೀ. ಮತ್ತು ಎದೆ ಸುತ್ತಳತೆ 86 ಸೆಂ.ಮೀ. ಮಹಿಳಾ ಅಭ್ಯರ್ಥಿಗಳಾಗಿದ್ದಲ್ಲಿ ಕನಿಷ್ಠ ಎತ್ತರ 157 ಸೆಂ.ಮೀ. ಮತ್ತು ತೂಕ 45 ಕೆ.ಜಿ. ಹೊಂದಿರಬೇಕು.

ವಯೋಮಿತಿ:
ಯಾವುದೇ ವರ್ಗದ ಅಭ್ಯರ್ಥಿಗಳಾಗಿದ್ದರೂ ಕನಿಷ್ಠ ವಯೋಮಿತಿ 21 ವರ್ಷ ಮತ್ತು ಗರಿಷ್ಠ ವಯೋಮಿತಿ 28 ವರ್ಷ.
ಪರಿಶಿಷ್ಟ ಜಾತಿ/ ಪಂಗಡ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಾಗಿದ್ದಲ್ಲಿ ಗರಿಷ್ಠ ವಯೋಮಿತಿ 30 ವರ್ಷ.
ಸೇವಾನಿರತ ಅಭ್ಯರ್ಥಿಗಳಾಗಿದ್ದಲ್ಲಿ ಗರಿಷ್ಠ ವಯೋಮಿತಿ 35 ವರ್ಷ (ಪ.ಜಾ/ಪಂಗಡ ಮತ್ತು ಇತರೆ ಹಿಂದುಳಿದ ವರ್
ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 40 ವರ್ಷ) ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಪ.ಜಾತಿ, ಪ.ಪಂಗಡ ಮತ್ತು ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ 100 ರೂಪಾಯಿ ಮತ್ತು ಉಳಿದೆಲ್ಲಾ ಅಭ್ಯರ್ಥಿಗಳಿಗೆ 250 ರೂ. ಶುಲ್ಕ ನಿಗದಿಪಡಿಸಲಾಗಿದೆ.

ಸಹಾಯವಾಣಿ ಸಂಖ್ಯೆ : 080-22943346

ಹೆಚ್ಚಿನ ಮಾಹಿತಿಗೆ ವೆಬ್‌: www.ksp.gov.in

Also Read: ವಿಜಯಪುರದಲ್ಲಿ 1 ರುಪಾಯಿಗೆ ಫುಲ್ ಊಟ