ಕರ್ನಾಟಕ ಪೋಸ್ಟಲ್ ಸರ್ಕಲ್ 2637 ಪೋಸ್ಟ್‌ ಮಾಸ್ಟರ್‌ ಮತ್ತು ಅಂಚೆ ಸೇವಕ ಹುದ್ದೆಗಳಿಗೆ ನೇಮಕಾತಿ..

0
345

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಭರ್ಜರಿ ಸುವರ್ಣಾವಕಾಶ. ಕರ್ನಾಟಕ ಪೋಸ್ಟಲ್ ಸರ್ಕಲ್ ನೇಮಕಾತಿ 2637 ಪೋಸ್ಟ್‌ ಮಾಸ್ಟರ್‌, ಅಸಿಸ್ಟೆಂಟ್‌ ಪೋಸ್ಟ್‌ ಮಾಸ್ಟರ್‌ ಮತ್ತು ಅಂಚೆ ಸೇವಕ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ ಸೆಪ್ಟೆಂಬರ್ 4,2019 ರೊಳಗೆ ಅರ್ಜಿ ಸಲ್ಲಿಸಬೇಕು.

Also read: ಭಾರತೀಯ ಜೀವ ವಿಮಾ ನಿಗಮ ಅಸಿಸ್ಟೆಂಟ್,ಅಸೋಸಿಯೇಟ್ಸ್ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಬ್ರಾಂಚ್‌ ಪೋಸ್ಟ್‌ ಮಾಸ್ಟರ್‌, ಅಸಿಸ್ಟೆಂಟ್‌ ಬ್ರಾಂಚ್‌ ಪೋಸ್ಟ್‌ ಮಾಸ್ಟರ್‌ ಮತ್ತು ದಕ್‌ ಸೇವಕ್‌(ಅಂಚೆ ಸೇವಕ)
ಸಂಸ್ಥೆ (Organisation): ಕರ್ನಾಟಕ ಪೋಸ್ಟಲ್ ಸರ್ಕಲ್

ವಿದ್ಯಾರ್ಹತೆ (Educational Qualification): ಈ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಎಸ್‌ಎಸ್‌ಎಲ್‌ಸಿಯಲ್ಲಿ ಗಣಿತ ಮತ್ತು ಇಂಗ್ಲಿಷ್‌ ಭಾಷೆಯನ್ನು ಒಂದು ವಿಷಯನ್ನಾಗಿ ಅಧ್ಯಯನ ಮಾಡಿರುವುದು ಕಡ್ಡಾಯವಾಗಿದೆ. ಅಷ್ಟೇ ಅಲ್ಲದೆ ಅಭ್ಯರ್ಥಿಗಳು ಆಯಾ ರಾಜ್ಯಗಳ ಸ್ಥಳೀಯ ಭಾಷೆಯಲ್ಲಿಯೇ ನಿಗದಿತ ವಿದ್ಯಾರ್ಹತೆ ಹೊಂದಿರಬೇಕು. ಅಂದರೆ ರಾಜ್ಯದ ಅಭ್ಯರ್ಥಿಗಳು ಕನ್ನಡದಲ್ಲಿಯೇ ವ್ಯಾಸಂಗ ಮಾಡಿರಬೇಕು ಹಾಗೂ 60 ದಿನಗಳ ಕಂಪ್ಯೂಟರ್‌ ಟ್ರೇನಿಂಗ್‌ ಕೋರ್ಸ್‌ ಸರ್ಟಿಫಿಕೇಟ್‌ ಅನ್ನು ಹೊಂದಿರಬೇಕು. ಅಭ್ಯರ್ಥಿಯು ಒಂದು ವೇಳೆ ಕಂಪ್ಯೂಟರ್‌ ಅನ್ನು ಒಂದು ವಿಷಯವಾಗಿ ಓದಿದ್ದರೆ ಈ ಸರ್ಟಿಫಿಕೇಟ್‌ನ ಅವಶ್ಯಕತೆ ಇರುವುದಿಲ್ಲ. ಇದರೊಂದಿಗೆ ಅಭ್ಯರ್ಥಿಗಳು ದ್ವಿಚಕ್ರ ವಾಹನ ಚಾಲನೆಯನ್ನು ತಿಳಿದಿರಬೇಕಿರುತ್ತದೆ.

ವಯೋಮಿತಿ:

ಕನಿಷ್ಠ 18 ರಿಂದ ಗರಿಷ್ಠ ವಯೋಮಿತಿ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ,ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ,ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ, ಅಂಗವಿಕಲ+ಓಬಿಸಿ ಅಭ್ಯರ್ಥಿಗಳಿಗೆ 13 ವರ್ಷ ಮತ್ತು ಅಂಗವಿಕಲ + ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 15 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಒಂದು ವೇಳೆ ಅಭ್ಯರ್ಥಿಯು ಹೆಚ್ಚು ಓದಿದ್ದರೂ ಎಸ್‌ಎಸ್‌ಎಲ್‌ಸಿಯ ಅಂಕಗಳನ್ನಷ್ಟೇ ಪರಿಗಣಿಸಲಾಗುತ್ತದೆ.

ಅರ್ಜಿ ಶುಲ್ಕ: ಸಾಮಾನ್ಯ, ಆರ್ಥಿಕ ದುರ್ಬಲ ವರ್ಗ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 100/-ರೂ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ ಮತ್ತು ವಿಕಲಚೇತನ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್‌ http://appost.in/gdsonline/ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 4,2019 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ: http://appost.in/gdsonline/ ಕ್ಲಿಕ್ ಮಾಡಿ.