ಕರ್ನಾಟಕ ಪೋಸ್ಟಲ್ ಸರ್ಕಲ್ ನೇಮಕಾತಿ; ಪೋಸ್ಟಲ್ ಅಸಿಸ್ಟೆಂಟ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
599

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಕರ್ನಾಟಕ ಪೋಸ್ಟಲ್ ಸರ್ಕಲ್ ನೇಮಕಾತಿ 101 ಪೋಸ್ಟಲ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಜೂನ್ 21,2019 ರೊಳಗೆ ಅರ್ಜಿ ಸಲ್ಲಿಸಬೇಕು.

Also read: ಕೊಡಗು ಸೈನಿಕ ಶಾಲೆ, ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಪೋಸ್ಟಲ್ ಅಸಿಸ್ಟೆಂಟ್ / ಸಾರ್ಟಿಂಗ್ ಅಸಿಸ್ಟೆಂಟ್

ಸಂಸ್ಥೆ (Organisation): ಕರ್ನಾಟಕ ಪೋಸ್ಟಲ್ ಸರ್ಕಲ್

ವಿದ್ಯಾರ್ಹತೆ (Educational Qualification): ಪೋಸ್ಟಲ್ ಅಸಿಸ್ಟೆಂಟ್ / ಸಾರ್ಟಿಂಗ್ ಅಸಿಸ್ಟೆಂಟ್ ಹುದ್ದೆಗಳಿಗೆ 10+2ಅಥವಾ 12ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಬೋರ್ಡ್ ನಿಂದ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಸ್ಥಳ (Job Location): ಕರ್ನಾಟಕ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Application End Date): June 21, 2019

ವಯೋಮಿತಿ: ಈ ಹುದ್ದೆಗಳಿಗೆ ಕಾಯ್ದಿರಿಸದ / ಆರ್ಥಿಕವಾಗಿ ಹಿಂದುಳಿದ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ತಿಗಳು ಮತ್ತು ಓಬಿಸಿ 33 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸುವ ಬಗೆಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ಚೆಕ್ ಮಾಡಿಕೊಳ್ಳಿ

ಪರೀಕ್ಷೆಯ ಬಗ್ಗೆ ಮಾಹಿತಿ: ಈ ಹುದ್ದೆಗಳಿಗೆ ಪರೀಕ್ಷೆಗಳನ್ನು ಜುಲೈ 14,2019 ರಂದು ನಡೆಸುತ್ತಿದ್ದು, ಪರೀಕ್ಷೆಗಳನ್ನು ಬೆಂಗಳೂರು , ಧಾರವಾಡ ಮತ್ತು ಹಾಸನದಲ್ಲಿ ನಡೆಸಲಾಗುತ್ತಿದೆ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ನಿಮ್ಮ ಪ್ರಾದೇಶಿಕ ಕಚೇರಿ / ಡಿವಿಷನಲ್ ಕಚೇರಿಗೆ ಜೂನ್ 21,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರವನ್ನು ಜುಲೈ 2ರಂದು ನೀವು ಅರ್ಜಿ ಸಲ್ಲಿಸಿದ ಕಚೇರಿಯಲ್ಲಿ ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ: https://karnatakapost.gov.in/Default.aspx ಕ್ಲಿಕ್ ಮಾಡಿ.