ಕರ್ನಾಟಕ ಪೋಸ್ಟಲ್ ಸರ್ಕಲ್ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
340

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಕರ್ನಾಟಕ ಪೋಸ್ಟಲ್ ಸರ್ಕಲ್ ನಲ್ಲಿ ಕ್ರೀಡಾ ಕೋಟಾದಡಿಯಲ್ಲಿ 44 ಜ್ಯೂನಿಯರ್ ಅಕೌಂಟೆಂಟ್, ಪೋಸ್ಟಲ್ ಅಸಿಸ್ಟೆಂಟ್, ಸಾರ್ಟಿಂಗ್ ಅಸಿಸ್ಟೆಂಟ್ ಮತ್ತು ಪೋಸ್ಟ್‌ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 26,2020ರೊಳಗೆ ಅರ್ಜಿ ಸಲ್ಲಿಸಬೇಕು.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: KPSC 1112 ಸಹಾಯಕ ಮತ್ತು ಪ್ರಥಮ ದರ್ಜೆ ಸಹಾಯಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಜ್ಯೂನಿಯರ್ ಅಕೌಂಟೆಂಟ್, ಪೋಸ್ಟಲ್ ಅಸಿಸ್ಟೆಂಟ್, ಸಾರ್ಟಿಂಗ್ ಅಸಿಸ್ಟೆಂಟ್ ಮತ್ತು ಪೋಸ್ಟ್‌ಮ್ಯಾನ್

ವಿದ್ಯಾರ್ಹತೆ (Educational Qualification): ಪದವಿ, 10+2 ಅಥವಾ 12ನೇ ತರಗತಿ

ಉದ್ಯೋಗ ಸ್ಥಳ (Job Location): ಕರ್ನಾಟಕ

ವಯೋಮಿತಿ: ಈ ಹುದ್ದೆಗಳಿಗೆ ಫೆಬ್ರವರಿ 26,2020ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಅವರ ಶೈಕ್ಷಣಿಕ ವಿದ್ಯಾರ್ಹತೆ ಮತ್ತು ಕ್ರೀಡಾ ಅರ್ಹತೆಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ: ಅರ್ಜಿದಾರರು 200/-ರೂ ಅರ್ಜಿ ಶುಲ್ಕವನ್ನು ಯಾವುದೇ ಅಂಚೆ ಕಛೇರಿಯಲ್ಲಿ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜನಾಂಗ, ಪರಿಶಿಷ್ಟ ಜಾತಿ ಮತ್ತು ಮಾಜಿ ಸೈನಿಕ ವರ್ಗಕ್ಕೆ ಸೇರಿದ ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ. ಅರ್ಜಿ ಶುಲ್ಕ ಪಾವತಿಸಲು ಫೆಬ್ರವರಿ 22,2020 ಕೊನೆಯ ದಿನವಾಗಿರುತ್ತದೆ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಕರ್ನಾಟಕ ಪೋಸ್ಟಲ್ ಇಲಾಖೆಯ ಅಧಿಕೃತ ವೆಬ್‌ಸೈಟ್‌ https://www.indiapost.gov.in/vas/Pages/IndiaPostHome.aspx ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಅಂಚೆ ಮೂಲಕ ಫೆಬ್ರವರಿ 26,2020ರೊಳಗೆ ತಲುಪಿಸಬೇಕಿರುತ್ತದೆ. ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು.

ಕಚೇರಿಯ ವಿಳಾಸ: ದಿ ಅಸಿಸ್ಟೆಂಟ್ ಡೈರೆಕ್ಟರ್ (ಆರ್‌&ಇ),

ಓ/ಓ ಛೀಫ್ ಪೋಸ್ಟ್ ಮಾಸ್ಟರ್ ಜನರಲ್,

ಕರ್ನಾಟಕ ಸರ್ಕಲ್, ಬೆಂಗಳೂರು-560001