ಕರ್ನಾಟಕ ಕಾರಾಗೃಹ ಇಲಾಖೆ 662 ಜೈಲರ್ ಮತ್ತು ವಾರ್ಡರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
354

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಕರ್ನಾಟಕ ಕಾರಾಗೃಹ ಇಲಾಖೆ 662 ಜೈಲರ್ ಮತ್ತು ವಾರ್ಡರ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಆನ್‌ಲೈನ್ ಮುಖಾಂತರ ಮಾತ್ರ ಅರ್ಜಿ ಆಹ್ವಾನಿಸಿದೆ. ಆಸಕ್ತ ಮಹಿಳೆ ಮತ್ತು ಪುರುಷ ಅಭ್ಯರ್ಥಿಗಳು ಮಾರ್ಚ್ 9,2019ರೊಳಗೆ ಅರ್ಜಿ ಸಲ್ಲಿಸಬೇಕು.

Also read: ಚಾಮರಾಜನಗರ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಜೈಲರ್ ಮತ್ತು ವಾರ್ಡರ್

ಸಂಸ್ಥೆ (Organisation): ಕರ್ನಾಟಕ ಕಾರಾಗೃಹ ಇಲಾಖೆ

ವಿದ್ಯಾರ್ಹತೆ (Educational Qualification): ವಿದ್ಯಾರ್ಹತೆ

ಜೈಲರ್ ಹುದ್ದೆ: ಈ ಹುದ್ದೆಗೆ ಕನಿಷ್ಟ ಯಾವುದಾದರೂ ಒಂದು ಬ್ಯಾಚುಲರ್ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರತಕ್ಕದ್ದು. ಸೋಶಿಯಾಲಜಿ ಅಥವಾ ಸೈಕಾಲಜಿ ಅಥವಾ ಕ್ರಿಮಿನಾಲಜಿ ಅಥವಾ ಕರೆಕ್ಷನಲ್ ಅಡ್ಮಿನಿಸ್ಟ್ರೇಷನ್‌ನಲ್ಲಿ ಅಥವಾ ತತ್ಸಮಾನ ವಿಷಯದಲ್ಲಿ ಬ್ಯಾಚುಲರ್ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು.

ವಾರ್ಡರ್ ಹುದ್ದೆ: ಈ ಹುದ್ದೆಗೆ ಎಸ್‌.ಎಸ್‌.ಎಲ್‌.ಸಿ (10ನೇ ತರಗತಿ) ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರತಕ್ಕದ್ದು.

ವಯೋಮಿತಿ: ಮಾರ್ಚ್ 9,2019ಕ್ಕೆ ಅನ್ವಯ ಸಾಮಾನ್ಯ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಕನಿಷ್ಟ 20 ವರ್ಷ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 28 ವರ್ಷಗಳು ಮತ್ತು ಇತರೆ ಅಭ್ಯರ್ಥಿಗಳಿಗೆ 26 ವರ್ಷವಯೋಮತಿಯನ್ನು ಹೊಂದಿರಬೇಕು.

ವೇತನ ಶ್ರೇಣಿ: ಜೈಲರ್ ಹುದ್ದೆಗಳಿಗೆ ತಿಂಗಳಿಗೆ 33,450 ರಿಂದ 62,600 ರೂ. ಮತ್ತು ವಾರ್ಡರ್ ಹುದ್ದೆಗಳಿಗೆ 21,400 ರಿಂದ 42000 ರೂ.

ಆಯ್ಕೆ ವಿಧಾನ: ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಮತ್ತು ಮೌಖಿಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಸಾಮಾನ್ಯ ವರ್ಗ, ಪ್ರವರ್ಗ 2A,2B,3A,3B ಗೆ ಸೇರಿದ ಅಭ್ಯರ್ಥಿಗಳಿಗೆ 250 ರೂ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ -1 ಅಭ್ಯರ್ಥಿಗಳಿಗೆ 100 ರೂ. ನಿಗದಿಪಡಿಸಲಾಗಿದ್ದು, ಶುಲ್ಕವನ್ನು ಪಾವತಿಸಲು ಮಾರ್ಚ್11,2019 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ: http://jw19.kpdonline.co.in/PDF/Notification.pdf ಕ್ಲಿಕ್ ಮಾಡಿ.