ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ (KSP) 240 ಪಿಎಸ್‌ಐ ಮತ್ತು ಆರ್‌ಎಸ್‌ಐ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
255

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ (ksp) 240 ಪಿಎಸ್‌ಐ ಮತ್ತು ಆರ್‌ಎಸ್‌ಐ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಖಾಲಿ ಇರುವ 200 ಪೊಲೀಸ್ ಸಬ್- ಇನ್ಸ್‌ಪೆಕ್ಟರ್ (ಸಿವಿಲ್) (ಪುರುಷ ಮತ್ತು ಮಹಿಳಾ) ಮತ್ತು 40 ಸಶಸ್ತ್ರ ಮೀಸಲು ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಆರ್‌ಎಸ್‌ಐ,ಸಿಎಆರ್/ಡಿಎಆರ್‌) (ಪುರುಷ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ ಆಸಕ್ತರು ಆಗಸ್ಟ್ 5,2019 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

Also read: ಬಾಗಲಕೋಟೆ ವಿಜ್ಞಾನ ವಿಶ್ವವಿದ್ಯಾಲಯ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧ ಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts) ಪೊಲೀಸ್ ಸಬ್- ಇನ್ಸ್‌ಪೆಕ್ಟರ್ (ಸಿವಿಲ್) (ಪುರುಷ ಮತ್ತು ಮಹಿಳಾ) ಮತ್ತು ಸಶಸ್ತ್ರ ಮೀಸಲು ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಆರ್‌ಎಸ್‌ಐ,ಸಿಎಆರ್/ಡಿಎಆರ್‌) (ಪುರುಷ)

ಸಂಸ್ಥೆ (Organisation) : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ (ಕೆಎಸ್‌ಪಿ)

ವಿದ್ಯಾರ್ಹತೆ (Educational Qualification): ಯು.ಜಿ.ಸಿ ಇಂದ ಮಾನ್ಯತೆ ಪಡೆದಿರುವ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಸ್ಥಳ (Job Location) ಕರ್ನಾಟಕ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: (Application End Date) August 5, 2019

ವಯೋಮಿತಿ: ಪೊಲೀಸ್ ಸಬ್‌ -ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಕನಿಷ್ಟ 21 ರಿಂದ ಗರಿಷ್ಟ 28 ಮತ್ತು ಸಶಸ್ತ್ರ ಪೊಲೀಸ್ ಸಬ್‌- ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಕನಿಷ್ಟ 21 ರಿಂದ ಗರಿಷ್ಟ 26 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ಓದಿ ತಿಳಿಯಬಹುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ , ದೇಹದಾರ್ಢ್ಯತೆ ಪರೀಕ್ಷೆ , ಸಹಿಷ್ಣುತೆ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಓಬಿಸಿ (2ಎ,2ಬಿ,3ಎ ಮತ್ತು 3ಬಿ) ಅಭ್ಯರ್ಥಿಗಳು 250/-ರೂ ಮತ್ತು ಪರಿಶಿಷ್ಟ ಜಾತಿ ,ಪರಿಶಿಷ್ಟ ಪಂಗಡ,ಪ್ರವರ್ಗ-1ರ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಆಗಸ್ಟ್ 7,2019 ರೊಳಗೆ ಪಾವತಿಸಬಹುದು.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಅಧಿಕೃತ ವಬ್‌ಸೈಟ್‌ https://ksp.gov.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್‌ನಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಆಗಸ್ಟ್ 5,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ: https://ksp.gov.in/ ಕ್ಲಿಕ್ ಮಾಡಿ.