ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಪದವೀಧರ ಪ್ರಾಥಮಿಕ ಶಿಕ್ಷಕ ವೃಂದದ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟನೆ

0
494

ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳಲ್ಲಿ ಖಾಲಿ ಇರುವ 10,611 ಪದವೀಧರ ಪ್ರಾಥಮಿಕ ಶಿಕ್ಷಕ ವೃಂದದ ಹುದ್ದೆಗಳನ್ನು ಭರ್ತಿ ಮಾಡಲಿದ್ದು, ಇದಕ್ಕಾಗಿ ಮೇ 18 ರಿಂದ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಈ ಹುದ್ದೆಗಳನ್ನು ಜಿಲ್ಲಾ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Also read: ಭಾರತೀಯ ರೈಲ್ವೆ ನೇಮಕಾತಿ ಮಂಡಳಿ 1665 ಸಚಿವ ಮತ್ತು ಪ್ರತ್ಯೇಕಿತ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ 2019:

ಪದವೀಧರ ಪ್ರಾಥಮಿಕ ಶಿಕ್ಷಕ (6 ರಿಂದ 8 ನೇ ತರಗತಿ) ವೃಂದದ ಹುದ್ದೆಗಳಿಗೆ ಅನ್ವಯವಾಗುವ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ಅನುಸಾರ ಅರ್ಹ ವಿದ್ಯಾರ್ಹತೆ ಇರುವ ಅಭ್ಯರ್ಥಿಗಳು ಇದೇ 11 ರಿಂದ ಕೇಂದ್ರೀಕೃತ ದಾಖಲಾತಿ ಘಟಕದ ವೆಬ್‌ಸೈಟ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಆನ್‌ಲೈನ್‌ ಮೂಲಕ ಮಾತ್ರ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಕಡೆಯ ದಿನಾಂಕ: ಏಪ್ರಿಲ್‌ 10, 2019

ಸ್ಪರ್ಧಾತ್ಮಕ ಪರೀಕ್ಷಾ ದಿನಾಂಕಗಳು:

1 ನೇ ಪರೀಕ್ಷೆ ಹೈದ್ರಾಬಾದ್‌– ಕರ್ನಾಟಕ ಪ್ರದೇಶದ ಜಿಲ್ಲೆಗಳ ಶೇ 80 ಸ್ಥಳೀಯ ವೃಂದದ ಮತ್ತು ಬೆಂಗಳೂರು ಬಿಬಿಎಂಪಿ ಪ್ರದೇಶದ ವ್ಯಾಪ್ತಿಯ ಶಾಲೆಗಳ ಶೇ 8 ರಷ್ಟು ರಾಜ್ಯ ಮಟ್ಟದ ಸ್ಥಳೀಯ ವೃಂದದ ಹುದ್ದೆಗಳಿಗೆ ಕ್ರಮವಾಗಿ ಮೇ 18 ಮತ್ತು 19 ರಂದು ನಡೆಯಲಿದೆ.

2 ನೇ ಪರೀಕ್ಷೆ ಹೈದ್ರಾಬಾದ್‌– ಕರ್ನಾಟಕ ಪ್ರದೇಶದ ಜಿಲ್ಲೆಗಳ ಶೇ 20, ಬೆಂಗಳೂರು ಬಿಬಿಎಂಪಿ ಪ್ರದೇಶದ ವ್ಯಾಪ್ತಿಯ ಶಾಲೆಗಳ ಶೇ 92 ರ ಮಿಕ್ಕುಳಿದ ವೃಂದದ ಮತ್ತು ಇತರೆ ಜಿಲ್ಲೆಗಳ ಶೇ 100 ಹುದ್ದೆಗಳಿಗೆ ಮೇ 25 ಮತ್ತು 26 ರಂದು ನಡೆಯಲಿದೆ.

ಹೆಚ್ಚಿನ ವಿವರ ಮತ್ತು ನೇಮಕಾತಿ ಅಧಿಸೂಚನೆಗಳು ಇಲಾಖಾ ವೆಬ್‌ಸೈಟ್‌ ನಲ್ಲಿ ಪಡೆಯಬಹುದು

http://www.schooleducation.kar.nic.in/htmlKn/gptrrect2019.html